Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕೇಂದ್ರದ ನಾಲ್ಕು ಕಾರ್ಮಿಕ ಸಂಹಿತೆಯಿಂದ...

ಕೇಂದ್ರದ ನಾಲ್ಕು ಕಾರ್ಮಿಕ ಸಂಹಿತೆಯಿಂದ ಕಾರ್ಮಿಕರ ಭವಿಷ್ಯಕ್ಕೆ ಮಾರಕ: ಕೆ.ಮಹಾಂತೇಶ್‌

ವಾರ್ತಾಭಾರತಿವಾರ್ತಾಭಾರತಿ1 Feb 2026 10:42 PM IST
share
ಕೇಂದ್ರದ ನಾಲ್ಕು ಕಾರ್ಮಿಕ ಸಂಹಿತೆಯಿಂದ ಕಾರ್ಮಿಕರ ಭವಿಷ್ಯಕ್ಕೆ ಮಾರಕ: ಕೆ.ಮಹಾಂತೇಶ್‌

ರಾಯಚೂರು: ಕೇಂದ್ರ ಸರಕಾರ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದ್ದು, ಕಾರ್ಮಿಕ ವಿರೋಧಿ, ಉದ್ಯಮಿಗಳ ಪರವಾಗಿರುವ ಕಾನೂನುಗಳಾದ್ದು ಕಾರ್ಮಿಕರ ಭವಿಷ್ಯಕ್ಕೆ ಮಾರಕವಾಗಿವೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ, ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಮಹಾಂತೇಶ್‌ ಹೇಳಿದರು.

ನಗರದ ಸರಕಾರಿ ನೌಕರರ ಭವನದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆ, ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ಕಾರ್ಮಿಕರ-ರೈತ-ಕೂಲಿಕಾರರ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕೆ.ಮಹಾಂತೇಶ್‌, ಕೇಂದ್ರ ಸರಕಾರ 29 ಕಾರ್ಮಿಕ ಕಾನೂನುಗಳನ್ನು 4 ಕೋಡ್‍ಗಳಾಗಿ ಮಾಡಿ ಜಾರಿಗೊಳಿಸಿದೆ. 29 ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡದೇ ಅವುಗಳನ್ನು ತಿದ್ದುಪಡಿ ಮಾಡಿ 4 ವಿಂಗಡಣೆಯಾಗಿ ಮಾಡಿದ್ದಾರೆ. ಈ ಹಿಂದೆ 44 ಕಾರ್ಮಿಕ ಕಾನೂನುಗಳಿದ್ದವು ಅವುಗಳನ್ನು 29ಕ್ಕೆ ತರಲಾಯಿತು. ಇದೀಗ ಅವುಗಳನ್ನು 4 ಕೋಡ್‍ಗಳಾಗಿ ಮಾಡಿದ್ದು ಇವುಗಳು ಯಾರಿಗೂ ಅರ್ಥವಾಗದಂತೆ ಮಾಡಲಾಗಿದೆ. ತಿದ್ದುಪಡಿ ಮಾಡಿ ಮಾಲಕರ ಪರವಾಗಿ ಮಾಡಲಾಗಿದೆ ಎಂದರು.

ಕಾರ್ಮಿಕರ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೆ, ಕಾರ್ಮಿಕರ ಕನಿಷ್ಠ ವೇತನ, ಸಾಮಾಜಿಕ ಭದ್ರತೆ ನಮ್ಮ ಬೇಡಿಕೆಯಾಗಿತ್ತು, ಇದ್ಯಾವುದನ್ನು ಮಾಡದೇ ಕಾರ್ಮಿಕ ವಿರೋಧಿ ಕಾನೂನನ್ನು ಜಾರಿಗೊಳಿಸಿದ್ದಾರೆ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಲವು ಕಾನೂನುಗಳನ್ನು ಜಾರಿಗೊಳಿಸಿವೆ. ಕೇಂದ್ರದಲ್ಲಿ ಸಂಸದರು, ರಾಜ್ಯದಲ್ಲಿ ಶಾಸಕರು ಇವುಗಳ ಬಗ್ಗೆ ಚರ್ಚಿಸಬೇಕು. ಆದರೆ ಇದಾವುದನ್ನು ಮಾಡದೇ ಬೇರೆ ಕೆಲಸದಲ್ಲಿ ನಿರತರಾಗಿದ್ದಾರೆ. ಕಾರ್ಮಿಕರ ಪರವಾದ ಕಾನೂನುಗಳು ಬೇಕಾಗಿದೆ, ಕಾರ್ಮಿಕರಿಗೆ ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಇಎಸ್‍ಐ, ಪಿಎಫ್, ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಕೆಗೆ ನಮ್ಮ ಒತ್ತಾಯವಾಗಿ ಈ ಹಿನ್ನೆಲೆಯಲ್ಲಿ ನಮ್ಮ ಹೋರಾಟ ನಿರಂತರವಾಗಿದೆ ಎಂದರು.

ಈ ಸಂದರ್ಭದಲ್ಲಿ ಎಐಯುಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷೆ ಡಿ.ನಾಗಲಕ್ಷ್ಮಿ, ಟಿಯುಸಿಐ ರಾಜ್ಯಾಧ್ಯಕ್ಷ ಅಮೀರ್ ಅಲಿ, ಎಸ್.ಕೆಕೆ. ಜಿಲ್ಲಾ ಸಂಚಾಲಕ ಕೆಜಿ ವೀರೇಶ್‌, ಸಿಐಟಿಯು ಜಿಲ್ಲಾಧ್ಯಕ್ಷೆ ಹೆಚ್.ಪದ್ಮಾ, ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ಶ್ರೀಶೈಲರೆಡ್ಡಿ, ಕಾಶಪ್ಪ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಡಿಎಸ್ ಶರಣಬಸವ, ಎಐಯುಟಿಯುಸಿ ಉಪಾಧ್ಯಕ್ಷ ಎನ್‍ಎಸ್ ವೀರೇಶ್‌, ಎಂ.ರವಿ, ಜಿಂದಪ್ಪ, ರೈತ ಸಂಘದ ಅಧ್ಯಕ್ಷ ಪ್ರಭಾಕರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

K. Mahantesh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X