Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ವೆಲ್ಫೇರ್ ಪಾರ್ಟಿಯಿಂದ ಆಯೋಜಿಸಿರುವ...

ವೆಲ್ಫೇರ್ ಪಾರ್ಟಿಯಿಂದ ಆಯೋಜಿಸಿರುವ ʼಕಲ್ಯಾಣ ಕರ್ನಾಟಕದ ನ್ಯಾಯಪೂರ್ಣ ಅಭಿವೃದ್ಧಿ ಜಾಥಾʼ ರಾಯಚೂರು ನಗರಕ್ಕೆ ಆಗಮನ

ವಾರ್ತಾಭಾರತಿವಾರ್ತಾಭಾರತಿ9 Oct 2025 9:22 PM IST
share
ವೆಲ್ಫೇರ್ ಪಾರ್ಟಿಯಿಂದ ಆಯೋಜಿಸಿರುವ ʼಕಲ್ಯಾಣ ಕರ್ನಾಟಕದ ನ್ಯಾಯಪೂರ್ಣ ಅಭಿವೃದ್ಧಿ ಜಾಥಾʼ ರಾಯಚೂರು ನಗರಕ್ಕೆ ಆಗಮನ

ರಾಯಚೂರು : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ಆಯೋಜಿಸಿದ್ದ ‘ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿಗಾಗಿ ಜಾಥಾ’ ಗುರುವಾರ ಸಂಜೆ ರಾಯಚೂರು ನಗರಕ್ಕೆ ಆಗಮಿಸಿತು.

ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗ, ಗುಳೆ ಸಮಸ್ಯೆ, ತಾಯಿ,ಶಿಶುಮರಣ, ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ಹಾಗೂ ಈ ಭಾಗದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥಾ ನಡೆಯಿತು.

ನಗರದ ಕಾಟೆ ದರ್ವಾಜಾದಿಂದ ಆರಂಭವಾದ ಜಾಥಾ ಏಕ್ ಮಿನಾರ್ ಮಸ್ಜಿದ್, ತಹಶೀಲ್ದಾರರ ಕಚೇರಿ, ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಡಾ.ಬಿ.ಆರ್ ವೃತ್ತದ ವರೆಗೆ ನಡೆಯಿತು. ಬಳಿಕ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಾಥಾದ ಬಳಿಕ ರಾಯಚೂರಿನ ಏಮ್ಸ್ ಹೋರಾಟ ಸಮಿತಿಯ ಹೋರಾಟಗಾರ ಅಶೋಕ್ ಕುಮಾರ ಜೈಬ್ ಸಮ್ಮುಖದಲ್ಲಿ ಏಮ್ಸ್ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಮಾತನಾಡಿ, ಬೆಂಗಳೂರು ವಿಭಾಗದಲ್ಲಿ ತಲಾ ಆದಾಯ 5.01 ಇದ್ದರೆ ಕಲ್ಯಾಣ ಕರ್ನಾಟಕದಲ್ಲಿ 1.73, ಮೈಸೂರು ಭಾಗದಲ್ಲಿ 10 ಹಿಂದುಳಿದ ತಾಲೂಕುಗಳಿದ್ದರೆ ಇಲ್ಲಿ 29, ಈ‌ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಮಹಾನಗರಗಳಿಗೆ ಕಾರ್ಮುಕರು ಗುಳೆ ಹೋಗುತ್ತಿದ್ದಾರೆ. ಈ‌ ಭಾಗಕ್ಕೆ ಕೆಕೆಆರ್ ಡಿಬಿ ಮೂಲಕ ಬಜೆಟ್ ನಲ್ಲಿ 5ಸಾವಿರ ಕೋಟಿ ರೂ. ಅನುದಾನ ಬಿಡುಗಡೆಯಾದರೂ ಸಮರ್ಪಕವಾಗಿ ಬಳಸಲಾಗುತ್ತಿಲ್ಲ ಈ ಭಾಗದ ಶಾಸಕರು, ಜನಪ್ರತಿನಿಧಿಗಳಿಗೆ ಅಭಿವೃದ್ಧಿಗೆ ಇಚ್ಛಾಶಕ್ತಿ ತೋರುತ್ತಿಲ್ಲ, ಜನರು ಮುಗ್ದರಾಗಿದ್ದು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಇಲ್ಲದಿದ್ದರೆ ನಿಮಗೆ ಚುನಾವಣೆ ಬಂದಾಗ ಮಾತ್ರ ನೆನೆಸುತ್ತಾರೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ವೇಲ್ಪೆರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ವತಿಯಿಂದ ಅ.6 ರಿಂದ 13 ರವರೆಗೆ "ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಜಾಥಾ ಆಯೋಜಿಸಲಾಗಿದೆ. ಈ ಜಾಥಾ ಬಳ್ಳಾರಿಯಿಂದ ಆರಂಭವಾಗಿ ರಾಯಚೂರು ಮಾರ್ಗವಾಗಿ ಕಲಬುರಗಿಗೆ ತೆರಳಿ ಅಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಅಧ್ಯಕ್ಷರಿಗೆ ಭೇಟಿಯಾಗಿ ಈ‌ ಭಾಗದ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ಈ ಭಾಗದ ಸಮಸ್ಯೆಗಳ ನಿವಾರಣೆಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಶಾಸಕರ ವಿರುದ್ಧ ಏಮ್ಸ್ ಹೋರಾಟಗಾರ ಆಕ್ರೋಶ :

ಜಾಥಾದಲ್ಲಿ ಏಮ್ಸ್ ಹೋರಾಟದ ಸಹ ಸಂಚಾಲಕ ಅಶೋಕಕುಮಾರ ಜೈನ್ ಮಾತನಾಡಿ, ರಾಯಚೂರು ಸೇರಿ ಹಿಂದುಳಿದ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಬಗ್ಗೆ ವೆಲ್ಫೇರ್ಪಾರ್ಟಿ ಜಾಗೃತಿ ಜಾಥಾ ಆಯೋಜಿಸಿದ್ದು ಶ್ಲಾಘನೀಯ. ಇದಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ರಾಯಚೂರು ಜಿಲ್ಲೆಯ ಅಭಿವೃದ್ಧಿಗಾಗಿ ಏಮ್ಸ್ ಬೇಕಾಗಿದೆ. ಮೂರು ವರ್ಷಗಳಿಂದ ಅನಿರ್ಧಿಷ್ಠಾವಧಿ ಧರಣಿ ನಡೆಸಲಾಗುತ್ತಿದ್ದು, ಈ‌ ಭಾಗದ ಶಾಸಕರಿಂದ ಸರಿಯಾದ ಸ್ಪಂದಿಸುವ ಕೆಲಸ ಆಗುತ್ತಿಲ್ಲ, ಬದಲಾಗಿ‌ ಬಿಜೆಪಿ ನಗರ ಶಾಸಕ ಡಾ.ಶಿವರಾಜ ಪಾಟೀಲ ಏಮ್ಸ್ ಹೋರಾಟದ ಟೆಂಟ್ ಕಿತ್ತು ಹಾಕಲು ಮುಂದಾಗಿದ್ದರು‌. ನಾವು ಜಿಲ್ಲೆಗಾಗಿ ಹೋರಾಟ ಮಾಡುತ್ತಿದ್ದೆವೆ, ವೈಯಕ್ತಿಕ ಹಿತಾಸಕ್ತಿಗೆ ಅಲ್ಲ. ಶಾಸಕರು ಇದನ್ನು ಅರ್ಥ ಮಾಡಿಕೊಳ್ಳದಿರುವುದು ವಿಷಾದನೀಯ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ‌ ವೇಳೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್‌ ಅಹಮದ್, ರಾಜ್ಯ ಉಪಾಧ್ಯಕ್ಷ ಶ್ರೀಕಾಂತ್ ಸಾಲಿಯಾನ್, ಜಿಲ್ಲಾಧ್ಯಕ್ಷ ಫರೀದ್ ಉಮ್ರಿ, ಅಬ್ದುಲ್ ಘನಿ, ಜಮಾತೆ ಇಸ್ಲಾಂ ಜಿಲ್ಲಾಧ್ಯಕ್ಷ ಅಸಿಮುದ್ದೀನ್ ಅಖ್ತರ್, ಸಮದ್ ಪಾಶ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X