Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಗ್ರಾಮೀಣ ಕ್ಷೇತ್ರದ ಸಿಎಂ...

ರಾಯಚೂರು ಗ್ರಾಮೀಣ ಕ್ಷೇತ್ರದ ಸಿಎಂ ಕಾರ್ಯಕ್ರಮಕ್ಕೆ ಸಹಸ್ರಾರು ಮಂದಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ23 Jun 2025 8:58 PM IST
share
ರಾಯಚೂರು ಗ್ರಾಮೀಣ ಕ್ಷೇತ್ರದ ಸಿಎಂ ಕಾರ್ಯಕ್ರಮಕ್ಕೆ ಸಹಸ್ರಾರು ಮಂದಿ ಭಾಗಿ

ರಾಯಚೂರು: ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೂ.23ರಂದು ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಜನರು ತಂಡೋಪ ತಂಡವಾಗಿ ಸೇರಿದ್ದರು.

ಸಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ಸುಕರಾಗಿ ಜನರು ಬೆಳಗ್ಗೆಯಿಂದಲೇ ವಾಹನಗಳನ್ನು ಏರಿ ಯರಗೇರಾ ಗ್ರಾಮದತ್ತ ಬರುವ ದೃಶ್ಯಗಳು ಎಲ್ಲೆಡೆ ಕಾಣಿಸಿತು.

ಸಾರಿಗೆ ಬಸ್ಸುಗಳು, ಕ್ರೂಷರ್, ಮಿನಿಬಸ್, ಟಿಪ್ಪರ್, ಮಿನಿಲಾರಿ ಏರಿ ಜನರು ಯರಗೇರಾ ಗ್ರಾಮದತ್ತ ಆಗಮಿಸುತ್ತಿದ್ದರು. ರಾಯಚೂರು ಗ್ರಾಮೀಣ ಕ್ಷೇತ್ರ ಸೇರಿದಂತೆ, ರಾಯಚೂರು ನಗರ, ಸುತ್ತಲಿನ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬೀದರ್‌, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಜನರು ಸಹ ಕಾರ್ಯಕ್ರಮಕ್ಕೆ ಆಗಮಿಸಿ, ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಪೂರ್ವ ನಿಗದಿಯಂತೆ ಬೆಂಗಳೂರಿನಿಂದ ವಾಯುಮಾರ್ಗವಾಗಿ ಹೊರಟ ಮುಖ್ಯಮಂತ್ರಿಗಳು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಹೆಲಿಪ್ಯಾಡಗೆ ಆಗಮಿಸಿ, ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಂತರ ಯರಗೇರಾ ಗ್ರಾಮದಲ್ಲಿನ ಮುಖ್ಯ ವೇದಿಕೆಯತ್ತ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ ಹಾಕಿ ಸಂಭ್ರಮಿಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಕಿಕ್ಕಿರಿದು ಸೇರಿದ್ದ ಜನತೆಗೆ ಯಾವುದೇ ತೊಂದರೆಯಾಗದಂತೆ ಮುಖ್ಯ ವೇದಿಕೆಯ ಬಳಿಯಲ್ಲಿ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು. ಸರಕಾರಿ ಬಸ್‌ಗಳು ಸೇರಿದಂತೆ ಹೆಚ್ಚಿನ ಖಾಸಗಿ ವಾಹನಗಳ ಮೂಲಕ ಜನತೆಗೆ ಉತ್ತಮವಾದ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಶಾಸಕರಿಂದ ಅಭಿನಂದನೆ:

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 936. ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ, ರಾಯಚೂರಿಲ್ಲಿನ ವಿಶ್ವವಿದ್ಯಾಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ನಾಮಕರಣ, ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ನಿರೀಕ್ಷೆಗೂ ಮೀರಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕಾರ್ಯಕ್ರಮ ಯಶಗೊಳಿಸಿದ್ದಕ್ಕೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ತಮ್ಮ ಕ್ಷೇತ್ರದ ಜನತೆಗೆ ಕೃತಜ್ಞತೆಗಳನ್ನು ತಿಳಿಸಿದರು.

ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ಮಂಡಳಿ, ಸಮಿತಿಗಳು, ನಿಗಮಗಳ ಅಧ್ಯಕ್ಷರು, ರಾಯಚೂರು ಸೇರಿದಂತೆ ವಿವಿಧ ಗ್ರಾಮಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ, ಎಲ್ಲ ಗ್ರಾಮಸ್ಥರಿಗೆ, ಅಭಿಮಾನಿಗಳಿಗೆ ಅಭಿನಂದನೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X