ಲಿಂಗಸುಗೂರು | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ರಾಯಚೂರು: ಸಾಲಬಾಧೆಯಿಂದ ಬೇಸತ್ತು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ವ್ಯಾಪ್ತಿಯ ಆಶಿಹಾಳ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಅಯ್ಯಪ್ಪ ಬಳ್ಳಾರಿ (55) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಟ್ರ್ಯಾಕ್ಟರ್ ಖರೀದಿಗಾಗಿ ಸಹಕಾರಿ ಸಂಘದಿಂದ ಆರೇಳು ಲಕ್ಷ ರೂ. ಹಾಗೂ ಖಾಸಗಿ ಬ್ಯಾಂಕಿನಿಂದ ಎಂಟು ಲಕ್ಷ ರೂ. ಸಾಲ ಪಡೆದಿದ್ದರೆನ್ನಲಾಗಿದೆ. ಇದನ್ನು ಪಾವತಿಸಲಾಗದೆ ವರ್ಷದಿಂದ ವರ್ಷಕ್ಕೆ ಸಾಲದ ಬಡ್ಡಿ ಹೆಚ್ಚುತ್ತಿರುವುದರಿಂದ ಆತಂಕಗೊಂಡು ಗ್ರಾಮದ ಹೊರವಲಯದಲ್ಲಿ ಬೇವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ.
ಸ್ಥಳಕ್ಕೆ ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





