ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳ; ಕಾಡ್ಲೂರು ಶ್ರೀಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಜಲಾವೃತ

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಪರಿಣಾಮ ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಣಾ ನದಿ ತೀರದ ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಜಲಾವೃತವಾಗಿದೆ.
ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಕಾರಣ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಅಗಾಧ ಪ್ರಮಾಣದ ಜಲರಾಶಿಯಿಂದ ನದಿ ತುಂಬಿ ಹರಿಯುತ್ತಿದೆ.
ಗ್ರಾಮಸ್ಥರು ನದಿ ದಡದಲ್ಲಿ ಇರಿಸಿದ್ದ ಕೃಷಿ ಪಂಪ್ ಸೆಟ್ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ.
Next Story




