Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ನಾರಾಯಣಪುರ ಬಲದಂಡೆ ಕಾಲುವೆಗೆ...

ನಾರಾಯಣಪುರ ಬಲದಂಡೆ ಕಾಲುವೆಗೆ ಎ.20ರವರೆಗೆ ನೀರು ಹರಿಸಿ : ಶಾಸಕಿ ಕರೆಮ್ಮ ಜಿ.ನಾಯಕ್‌

ವಾರ್ತಾಭಾರತಿವಾರ್ತಾಭಾರತಿ3 April 2025 9:26 PM IST
share
ನಾರಾಯಣಪುರ ಬಲದಂಡೆ ಕಾಲುವೆಗೆ ಎ.20ರವರೆಗೆ ನೀರು ಹರಿಸಿ : ಶಾಸಕಿ ಕರೆಮ್ಮ ಜಿ.ನಾಯಕ್‌

ರಾಯಚೂರು : ರೈತರು ಬೆಳೆದ ಬೆಳೆಗಳು ಒಣಗುತ್ತಿದ್ದು, ನಾರಾಯಣಪುರ ಬಲದಂಡೆ ಕಾಲುವೆಗೆ ಎ.20ರವರೆಗೆ ನೀರು ಹರಿಸಬೇಕೆಂದು ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ್‌ ಆಗ್ರಹಿಸಿದರು.

ದೇವದುರ್ಗ ತಾಲೂಕಿನ ಗಬ್ಬೂರು, ಕಲಮಲಾ ಮೂಲಕ ಸಾತ್‌ಮೈಲ್ ಮಾರ್ಗವಾಗಿ ಪಾದಯಾತ್ರೆ ಮೂಲಕ ಬಂದು ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿ ಮಾತನಾಡಿದರು.

ದೇವದುರ್ಗ ತಾಲೂಕು ಅತಿ ಕಡಿಮೆ ಮಳೆ ಬರುವ ಪ್ರದೇಶವಾಗಿದ್ದು, ಅಂತರ್ಜಲ ಮಟ್ಟವು ಕಡಿಮೆ ಇರುವ ಪ್ರದೇಶವಾಗಿದೆ. ತಮ್ಮ ಮತಕ್ಷೇತ್ರವು ನಾರಾಯಣಪುರ ಮತ್ತು ಭೀಮರಾಯನಗುಡಿ ವಲಯದ ಕಾಲುವೆಗಳ ಮೂಲಕ ನೀರಾವರಿ ಸೌಲಭ್ಯ ಪಡೆಯುತ್ತಿದೆ. ಈ ಬಾರಿ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವುದರಿಂದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯವು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಈ ಹಿಂದೆ ನಡೆದ ನೀರಾವರಿ ಸಲಹಾ ಸಮಿತಿಯ ನಿರ್ಧಾರದಂತೆ ಮುಂಗಾರಿಗೆ ಸಂಪೂರ್ಣ ಮತ್ತು ಹಿಂಗಾರಿಗೆ ವಾರಾಬಂದಿ ಪದ್ಧತಿಯಂತೆ ಎ.5 ರವರೆಗೆ ನೀರು ಹರಿಸಲಾಗುವುದು ಎಂದು ನಿರ್ಧರಿಸಲಾಗಿತ್ತು. ಆದರೆ ಏಕಾಏಕಿ ನೀರನ್ನು ಬಂದ್ ಮಾಡಲಾಗಿದೆ. ಇದರಿಂದ ತಾಲೂಕಿನ ರೈತರಿಗೆ ತುಂಬಾ ತೊಂದರೆಯಾಗಿದೆ. ತಮ್ಮ ಮತಕ್ಷೇತ್ರದಲ್ಲಿ 25542 ಹೆಕ್ಟೇರ್ ಭೂ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಈ ಬೆಳೆಗಳಿಗೆ ನೀರು ಇಲ್ಲದಿರುವುದರಿಂದ ಒಣಗಿ ಹೋಗುತ್ತಿವೆ. ಪ್ರಸ್ತುತ ಭತ್ತವು ಕಟಾವು ಹಂತದಲ್ಲಿ ಇರುವುದರಿಂದ ನೀರಿನ ಅವಶ್ಯಕತೆ ತುಂಬಾ ಇರುತ್ತದೆ ಎಂದರು.

ಈ ಹಂತದಲ್ಲಿ ನೀರು ಬಿಡದಿದ್ದರೆ ಕೆಲ ಬೆಳೆಗಳ ಇಳುವರಿ ಕಮ್ಮಿಯಾಗಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಹಾಗಾಗಿ, ಎ.20ರವರೆಗೆ ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ನೀರನ್ನು ಹರಿಸಬೇಕು ಎಂದು ಆಗ್ರಹಿಸಿದರು.

ಸರಕಾರಕ್ಕೆ ಎಲ್ಲರೂ ತಲೆಬಾಗಬೇಕೆಂಬ ಬೇಜವಾಬ್ದಾರಿತನದ ಮಾತುಗಳನ್ನು ನೀರಾವರಿ ಅಧಿಕಾರಿಗಳು ಆಡುತ್ತಿರುವುದು ಸರಿಯಲ್ಲ. ಅವಶ್ಯಕತೆ ಇದ್ದರೆ ಅಧಿಕಾರಿಗಳು, ಸರಕಾರಕ್ಕೆ ತಲೆ ಬಾಗಲಿ. ಆದರೆ ರೈತರನ್ನು ತಲೆ ಬಾಗಿ ಎಂದು ಹೇಳುವ ಅಧಿಕಾರ, ನೈತಿಕತೆ ಅಧಿಕಾರಿಗಳಿಗಿಲ್ಲ ಎಂದು ಗುಡುಗಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಮಾತನಾಡಿದರು. ಬಳಿಕ ಜಿಲ್ಲಾಧಿಕಾರಿ ನಿತೀಶ್ ಕೆ. ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಎನ್.ಶಿವಶಂಕರ, ಮುಂಡರಗಿ ಸಿದ್ದಣ್ಣ, ಸಣ್ಣ ನರಸಿಂಹ ನಾಯಕ, ಮೂಡ್ಲಗುಂಡ ಸಿದ್ದನಗೌಡ, ರಾಮಕೃಷ್ಣ, ಬೆಂಬಲಿಗರು, ಅಭಿಮಾನಿಗಳು ಇತರರು ಇದ್ದರು.

Tags

Karemma G.Nayak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X