ಏ.2ರಿಂದ ತುಂಗಭದ್ರಾ ಕಾಲುವೆಗೆ ನೀರು: ಶಾಸಕ ಹಂಪನಗೌಡ ಬಾದರ್ಲಿ

ಸಿಂಧನೂರು: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ದುರಸ್ತೀಕರಣ ಕಾಮಗಾರಿ ಶೀಘ್ರಗತಿಯಲ್ಲಿ ನಡೆದಿದ್ದು, ಏ.2ರಿಂದ ಕಾಲುವೆಗೆ ನೀರು ಹರಿಸುವ ಸಾಧ್ಯತೆಗಳಿವೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹಂಪನಗೌಡ ಬಾದರ್ಲಿ, ಕುಡಿಯುವ ನೀರು ತುಂಬಿಸಿಕೊಳ್ಳುವ ಉದ್ದೇಶದಿಂದ ಕಾಲುವೆಗೆ ನೀರು ಹರಿಸಲಾಗಿತ್ತು. ಆ ಸಂದರ್ಭದಲ್ಲಿ ಕಾಲುವೆ ಹೊಡೆದು ಅನಾನುಕೂಲತೆ ಉಂಟಾಗಿದ್ದ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಕಾಲುವೆಗೆ ಶೀಘ್ರವಾಗಿ ನೀರು ಹರಿಸುವ ಉದ್ದೇಶದಿಂದ ತಾತ್ಕಾಲಿಕ ಕಾಮಗಾರಿ ನಡೆಸಲು ಸೂಚಿಸಲಾಗಿತ್ತು. ಆದರೆ, ಅದೇ ಕಾಲಮಿತಿಯಲ್ಲಿ ಶಾಶ್ವತ ದುರಸ್ತಿ ಮಾಡುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದ್ದು, ಏ.1 ಅಥವಾ 2ರಂದು ಕಾಲುವೆಗೆ ನೀರು ಹರಿಸುವ ಸಾಧ್ಯತೆಗಳಿವೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
Next Story




