Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕಾಂಗ್ರೆಸ್ ಸರಕಾರವನ್ನು ಬುಡಸಮೇತ...

ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತೊಗೆಯುತ್ತೇವೆ: ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ1 Sept 2026 11:11 AM IST
share
ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತೊಗೆಯುತ್ತೇವೆ: ಬಿ.ವೈ.ವಿಜಯೇಂದ್ರ

ಲಿಂಗಸುಗೂರು(ರಾಯಚೂರು): ಭ್ರಷ್ಟ, ಜನವಿರೋಧಿ, ದಲಿತ ವಿರೋಧಿ, ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಸರ್ಕಾರ ವಿರುದ್ಧ ಹೋರಾಟ ಆರಂಭವಾಗಿದೆ. ಪಾದಯಾತ್ರೆ ಸೆ.10ಕ್ಕೆ ಮುಗಿಯಬಹುದು. ಆದರೆ ಈ ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಗುರುಗುಂಟಾದ ಶ್ರೀ ಅಮರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಒಂದೂವರೆ ಎರಡು ವರ್ಷ ಈ ಜನವಿರೋಧಿ ಭ್ರಷ್ಟ ಸರ್ಕಾರದ ಬಣ್ಣ ಬಯಲು ಮಾಡಲಿದ್ದೇವೆ. ಈ ಸರ್ಕಾರವನ್ನು ನಾವು ಬುಡಸಮೇತ ಕಿತ್ತೊಗೆಯುತ್ತೇವೆ. ಅಲ್ಲಿವರೆಗೆ ನಮ್ಮ ಹೋರಾಟ ನಡೆಲಿದೆ. ಮುಂದೆ ನಮ್ಮ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ತಿಳಿಸಿದರು.

ಇದು ಹತ್ತು ದಿನಗಳ ಪಾದಯಾತ್ರೆ. ನಮ್ಮ ಪಕ್ಷದ ಎಲ್ಲ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ. ಉತ್ತರ ಕರ್ನಾಟಕ ಭಾಗದ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಕಾರ್ಯಕರ್ತರು ಅತಿ ಉತ್ಸಾಹದಿಂದ ಇದರಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇದೊಂದು ಐತಿಹಾಸಿಕ ಪಾದಯಾತ್ರೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.

ಬಿಎಸ್ ವೈ ಚಾಲನೆ

ಪಾದಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಶಿವನಗೌಡ ನಾಯಕ್, ಸ್ಥಳೀಯ ಶಾಸಕರಾದ ಮಾನಪ್ಪ ವಜ್ಜಲ್, ಪಕ್ಷದ ಮುಖಂಡರಾದ ಬಂಗಾರು ಹನುಮಂತು ಸೇರಿದಂತೆ ಹಲವಾರು ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಲಿದ್ದಾರೆ. ಈ ಭಾಗದ ಶಾಸಕರು, ಮುಖಂಡರು, ಕಾರ್ಯಕರ್ತರು ಈ ಪಾದಯಾತ್ರೆ ಯಶಸ್ವಿಯಾಗಿ ನಡೆಯಲು ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ ಎಂದು ವಿವರಿಸಿದರು.

ಬಿಜೆಪಿ ಹೊಸಯುಗ ಆರಂಭ

ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ. ನಮ್ಮ ಹೋರಾಟ ಎಷ್ಟು ನಡೆಯುತ್ತದೆ ಎಂಬುದು ಮುಖ್ಯ. ನಮ್ಮ ಹೋರಾಟಕ್ಕೆ ಹೆದರಿ ಈಗಾಗಲೇ ಒಬ್ಬರು ಭ್ರಷ್ಟ ಸಚಿವ ರಾಜೀನಾಮೆ ನೀಡಿದ್ದಾರೆ. ಅಂತಹ ಅನಿವಾರ್ಯದಲ್ಲಿ ಸರ್ಕಾರ ಸಿಲುಕಿತ್ತು. ಪಾದಯಾತ್ರೆ ಘೋಷಣೆ ಮಾಡಿದಾಗಲೇ ಸರ್ಕಾರ ಮಣಿದಿತ್ತು. ರಾಜೀನಾಮೆ ಪಡೆದಿದೆ. ಭಾರತೀಯ ಜನತಾ ಪಕ್ಷದ ಹೊಸ ಯುಗ ಇಂದಿನಿಂದ ಆರಂಭವಾಗಲಿದೆ ಎಂದು ತಿಳಿಸಿದರು.

Tags

Root OutVijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X