ರಾಯಚೂರು: ಆರ್‌ಟಿಪಿಎಸ್ ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು, ಮೂವರು ಗಂಭೀರ ಗಾಯ

ರಾಯಚೂರು: ʼವಾಟರ್ ಕ್ಲಾರಿಫೈರ್ʼ ಶುಚಿಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದ ರಾಯಚೂರು ವಿದ್ಯುತ್ ಶಾಖೋತ್ಪನ್ನ ಕೇಂದ್ರ (ಆರ್‌ಟಿಪಿಎಸ್) ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಮೃತಪಟ್ಟಿದ ಘಟನೆ ನಡದಿದೆ..
ಕಾರ್ಮಿಕ ತಿಮ್ಮಾರೆಡ್ಡಿ (28) ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ರಂಗಪ್ಪ ಹನುಮೇಶ ಮತ್ತು ವೀರೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಇವರಿಗೆ ಆರ್‌ಟಿಪಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಲಸ ಮಾಡುವಾಗ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಸಾಮಗ್ರಿ ನೀಡಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷವೇ ಕಾರ್ಮಿಕರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





