Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಅಹಿಂದ ಒಗ್ಗಟ್ಟಿನಿಂದ ಮಾತ್ರ ಶೋಷಣೆಮುಕ್ತ...

ಅಹಿಂದ ಒಗ್ಗಟ್ಟಿನಿಂದ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ : ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Sept 2026 5:23 PM IST
share
ಅಹಿಂದ ಒಗ್ಗಟ್ಟಿನಿಂದ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ : ಯತೀಂದ್ರ ಸಿದ್ದರಾಮಯ್ಯ

ರಾಯಚೂರು : ಸಮಾಜದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಶೋಷಣೆಯನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಹೋರಾಟ ನಡೆಸುವುದು ಅಗತ್ಯವಾಗಿದ್ದು, ಅಹಿಂದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ನಗರದ ಕೃಷಿ ತಾಂತ್ರಿಕ ಮಹಾವಿಶ್ವವಿದ್ಯಾಲಯದ ರಜತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಗಜ್ಯೋತಿ ಬಸವಣ್ಣ, ಗೌತಮ ಬುದ್ಧ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಿಂದುಳಿದ ವರ್ಗಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಮಹತ್ತರ ಕಾರ್ಯ ಮಾಡಿದ್ದಾರೆ. ಅವರ ತತ್ವ ಹಾಗೂ ವಿಚಾರಗಳ ಹಾದಿಯೇ ನಮಗೆ ದಾರಿದೀಪವಾಗಿದೆ. ಇಂದು ದೇಶದಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಮೂಲ ಕಾರಣವಾಗಿದೆ ಎಂದು ಸಚಿವರು ಸ್ಮರಿಸಿದರು.

ಮಹಾನಾಯಕ ಅಂಬೇಡ್ಕರ್ ಅವರ ಆಶಯದಂತೆ ಸೂಕ್ತ ರಾಜಕೀಯ ಶಕ್ತಿಯನ್ನು ಪಡೆದುಕೊಂಡಾಗ ಮಾತ್ರವೇ ಪ್ರತಿಯೊಂದು ರಂಗದಲ್ಲೂ ಪೂರ್ಣ ಪ್ರಮಾಣದ ಅಭಿವೃದ್ಧಿ ಹೊಂದಲು ಸಾಧ್ಯ. ಒಗ್ಗಟ್ಟಿನಲ್ಲಿಯೇ ಶಕ್ತಿಯಿದ್ದು, ಸಾಮಾಜಿಕ ನ್ಯಾಯದ ರಕ್ಷಣೆಗಾಗಿ 'ಅಹಿಂದ' ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ. ಶ್ರೀನಿವಾಸ್, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ್ ರಾಮಸ್ವಾಮಿ, ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಕೆ. ಶಾಂತಪ್ಪ, ಕಾನೂನು ಘಟಕದ ಮುಖ್ಯಸ್ಥರಾದಶ್ರೀಕಾಂತ್ ರಾವ್, ನೌಕರರ ಸಂಘದ ಮುಖ್ಯಸ್ಥರಾದ ಡಾ. ಶ್ಯಾಮಣ್ಣ ಮಾಚನೂರು, ಮಹಿಳಾ ಸಂಘದ ಮುಖ್ಯಸ್ಥರಾದ ಗಾಯತ್ರಿ ಸೇರಿದಂತೆ ಹಲವು ಪ್ರಮುಖ ನಾಯಕರು ಹಾಗೂ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X