Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichuru: ಯುವತಿಗೆ ಚುಡಾಯಿಸಿದ...

Raichuru: ಯುವತಿಗೆ ಚುಡಾಯಿಸಿದ ಆರೋಪದಲ್ಲಿ ಯುವಕನನ್ನು ಅಪಹರಿಸಿ ಕೂಡಿ ಹಾಕಿ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ21 April 2026 12:35 PM IST
share
Raichuru: ಯುವತಿಗೆ ಚುಡಾಯಿಸಿದ ಆರೋಪದಲ್ಲಿ ಯುವಕನನ್ನು ಅಪಹರಿಸಿ ಕೂಡಿ ಹಾಕಿ ಹಲ್ಲೆ

ರಾಯಚೂರು: ಯುವತಿಗೆ ಚುಡಾಯಿಸಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನನ್ನು ಅಪಹರಿಸಿ, ಮನೆಯೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು, ಹಲ್ಲೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಗರದ ಯರಮರಸ್ ಕ್ಯಾಂಪ್ ನಿವಾಸಿಯಾಗಿರುವ ಮೆಹಬೂಬ್ ಎಂಬ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಕಚೇರಿ ಸಹಾಯಕ(ವಾರ್ಡ್ ಬಾಯ್) ಆಗಿ ಕೆಲಸ ಮಾಡುತ್ತಿದ್ದು ಅದೇ ಆಸ್ಪತ್ರೆಗೆ ಬಂದ ಯುವತಿಯೊಬ್ಬಳಿಗೆ ಚುಡಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಮೆಹಬೂಬ್ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಯುವತಿಯ ಕುಟುಂಬಸ್ಥರು, ಕೆಲ ಸ್ನೇಹಿತರು ತಡೆದು ಅಪಹರಿಸಿದ್ದರೆನ್ನಲಾಗಿದೆ.

ಮೆಹಬೂಬ್ ನನ್ನು ಐಡಿಎಸ್ ಎಂಟಿ ಲೇಔಟ್ ನಲ್ಲಿರುವ ಮನೆಯೊಂದರಲ್ಲಿ ಮೂರ್ನಾಲ್ಕು ಗಂಟೆಗಳ ಕಾಲ ಕೂಡಿ ಹಾಕಿ ಮನಸೋಇಚ್ಛೆ ಥಳಿಸಿದ್ದಾರೆ. ಇದರ ವೀಡಿಯೊ ವೈರಲ್ ಆಗಿದ್ದು, ವೀಡಿಯೊದಲ್ಲಿ ಮಹಿಳೆಯೊಬ್ಬಳು ಮೆಹಬೂಬ್ ಮೇಲೆ ಹಲ್ಲೆ ಮಾಡುತ್ತಿರುವುದು ಕಾಣಿಸುತ್ತದೆ.

ಈ ಬಗ್ಗೆ ಬಜಾರ್ ಠಾಣಾ ಪೊಲೀಸರನ್ನು ಸಂಪರ್ಕಿಸಿದಾಗ, ಯುವಕನ ಮೇಲಿನ ಹಲ್ಲೆಯ ವೈರಲ್ ವೀಡಿಯೋ ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags

RaichurKidnappingAllegations
share
ವಾರ್ತಾಭಾರತಿ
ವಾರ್ತಾಭಾರತಿ
Next Story
X