Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಮನಗರ
  4. ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ...

ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ ಸಾಮಾಜಿಕ ಬದಲಾವಣೆಯನ್ನು ಉಂಟು ಮಾಡಿವೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Sept 2025 8:49 PM IST
share
ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ ಸಾಮಾಜಿಕ ಬದಲಾವಣೆಯನ್ನು ಉಂಟು ಮಾಡಿವೆ : ಡಿ.ಕೆ.ಶಿವಕುಮಾರ್


ರಾಮನಗರ, ಸೆ.27: ಭವಿಷ್ಯದಲ್ಲಿ ಕಾಂಗ್ರೆಸ್ ಸರಕಾರವನ್ನು ಪಂಚ ಗ್ಯಾರಂಟಿ ಯೋಜನೆಗಳೆ ಕಾಪಾಡುತ್ತವೆ ಎನ್ನುವ ವಿಶ್ವಾಸ ನನಗಿದೆ. ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ ಸಾಮಾಜಿಕ ಬದಲಾವಣೆಯನ್ನು ಉಂಟು ಮಾಡಿವೆ. ಆರ್ಥಿಕವಾದ ಶಕ್ತಿ ನೀಡಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಶನಿವಾರ ರಾಮನಗರದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ದಕ್ಷಿಣ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜನತಾದಳದವರು ಮುಂದಿನ ದಿನಗಳಲ್ಲಿ ಹೇಗಾದರೂ ಮಾಡಿ ಈ ಗ್ಯಾರಂಟಿ ಯೋಜನೆಗಳನ್ನು ಯಾರಿಗೂ ಸಿಗದಂತೆ ಮಾಡಬೇಕೆನ್ನುವ ಷಡ್ಯಂತ್ರ ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳು ಉಳಿಯಬೇಕು ಎಂದರೆ ಕಾಂಗ್ರೆಸ್ ಸರಕಾರ ಶಾಶ್ವತವಾಗಿ ಇರಬೇಕು. ಈ ನಿಟ್ಟಿನಲ್ಲಿ ನೀವುಗಳು ಕೆಲಸ ಮಾಡಬೇಕು ಎಂದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಯೋಗೇಶ್ವರ್ ಗೆಲ್ಲಲು ಗ್ಯಾರಂಟಿ ಯೋಜನೆಗಳ ಯಶಸ್ಸೆ ಕಾರಣ. ಮಹಿಳೆಯರು ಮಾಡಿದ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ, ಉಪಕಾರ ಸ್ಮರಣೆಯನ್ನು ಅವರು ಹೊಂದಿರುತ್ತಾರೆ. ಯಾವುದೇ ರಾಜ್ಯಕ್ಕೆ ಹೋದರು, ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಗಳುತ್ತಿದ್ದಾರೆ. ಜನರಿಗೆ ದೊಡ್ಡ ಉಪಕಾರ ಮಾಡಿದ್ದೀರಿ ಎಂದು ನನ್ನ ಬಳಿ ಹೇಳುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಪಂಚಾಯಿತಿ ಮಟ್ಟದಲ್ಲಿ ಫಲಾನುಭವಿಗಳ ಸಮಾವೇಶ ನಡೆಸಿ: ಗ್ಯಾರಂಟಿ ಅನುಷ್ಠಾನ ಸಮಿತಿ ಗಳಿಂದ ಪ್ರತಿ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಬೇಕು. ಗ್ಯಾರಂಟಿ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುತ್ತಿರುವ ಮೂರು ನಾಲ್ಕು ಜನರನ್ನು ಗುರುತಿಸಿ ಸನ್ಮಾನಿಸಬೇಕು. ಬೃಹತ್ ಸಮಾವೇಶ ನಡೆಸದೆ, ಚಿಕ್ಕದಾದ ಚೊಕ್ಕದಾದ ಸಮಾವೇಶ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಯುವಕರ ಗುಂಪು ರಚಿಸಿ ಅವರಿಗೆ ಈ ಯೋಜನೆಗಳ ಬಗ್ಗೆ ಜ್ಞಾನ ಕೊಡಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಇದರ ಉಪಯೋಗವನ್ನು ಪ್ರಚಾರ ಮಾಡಬೇಕು. ಗೃಹಲಕ್ಷ್ಮೀ ಹಣದಿಂದ ಮಹಿಳೆಯರು ಗಂಡನಿಗೆ ಟ್ರ್ಯಾಕ್ಟರ್, ಬೈಕ್ ತೆಗೆದುಕೊಟ್ಟಿದ್ದಾರೆ. ಸ್ವಂತ ಉದ್ಯಮ ತೆರೆದು ಸ್ವಾವಲಂಬಿಯಾಗಿದ್ದಾರೆ. ಇದೆಲ್ಲವನ್ನು ಜನರಿಗೆ ಹೆಚ್ಚು, ಹೆಚ್ಚು ತಿಳಿಸಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಫುಡ್ ಕಿಟ್ ವಿತರಣೆಗೆ ಸಮೀಕ್ಷೆ: ಅನ್ನಭಾಗ್ಯ ಅಕ್ಕಿ ಕಳ್ಳ ಸಾಗಾಣಿ ಆಗುತ್ತಿದೆ ಎಂದು ಪತ್ರಿಕೆಗಳಲ್ಲಿ ಓದಿದ್ದೆ. ಎಲ್ಲರೂ ಕೇವಲ ಅನ್ನವನ್ನು ಊಟ ಮಾಡುವುದಿಲ್ಲ. ರಾಗಿ, ಚಪಾತಿ, ರೊಟ್ಟಿಯನ್ನು ಬಳಸುತ್ತಾರೆ. ಒಂದಷ್ಟು ರಾಜ್ಯಗಳಲ್ಲಿ ಫುಡ್ ಕಿಟ್ ನೀಡಲಾಗುತ್ತಿದೆ. ಇದರಲ್ಲಿ ಅಡುಗೆ ಎಣ್ಣೆ ಸೇರಿದಂತೆ ಇರುತ್ತವೆ. ಅಕ್ಕಿ ಕಾಳ ಸಂತೆಗೆ, ಹೋಟೆಲ್ ಗಳಿಗೆ ಹೋಗುವುದನ್ನು ತಡೆಯಬೇಕು. ಅಕ್ಕಿ ಮುಗ್ಗಲು ಹಿಡಿಯದಂತೆ ಮಾಡಬೇಕು. ಹೀಗೆ ಅನೇಕ ಪರ್ಯಾಯ ಆಲೋಚನೆಯ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಶಿವಕುಮಾರ್ ಹೇಳಿದರು.

ಒಂದಷ್ಟು ಜನ ಸರಕಾರಿ ನೌಕರರು ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅನುಕೂಲಸ್ಥರು ಗ್ಯಾರಂಟಿ ಯೋಜನೆಗಳ ಫಲವನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಪರಿಹಾರವನ್ನು ನೀಡಲು ಒಂದಷ್ಟು ಜನ ಅನೇಕ ಸಲಹೆಗಳನ್ನು ನೀಡಿದ್ದಾರೆ. ಇದರ ಬಗ್ಗೆ ಸರಕಾರ ಆಲೋಚನೆ ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಾರು ದುರುಪಯೋಗ ಮಾಡಿಕೊಳ್ಳುತ್ತಿಲ್ಲ. ನಗರಗಳಲ್ಲಿ ದುರುಪಯೋಗವಾಗುತ್ತಿದೆ ಎಂದು ಅವರು ಹೇಳಿದರು.

ಲಂಚದ ಪಿಡುಗು ತೊಲಗಿಸಲು ಪ್ರಯತ್ನ: ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಇ ಖಾತೆ, ಭೂಮಿ ಗ್ಯಾರಂಟಿ, ಕಂದಾಯ ಗ್ರಾಮಗಳ ಘೋಷಣೆ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಜಾರಿಗೆ ತಂದಿದೆ. ಲಂಚ ಎನ್ನುವ ಪಿಡುಗು ದೂರ ಮಾಡಲು ಏನೇನು ಕೆಲಸ ಮಾಡಬೇಕೋ ಅದೆಲ್ಲವನ್ನೂ ಮಾಡುತ್ತಿದ್ದೇವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ನಾವು ಸದಾ ಪ್ರಯತ್ನದಲ್ಲಿ ಇದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು ಎಂದು ಕಾರ್ಯಕರ್ತರನ್ನು ನೇಮಕ ಮಾಡುವ ಮೂಲಕ ಸರಕಾರ ಹಾಗೂ ಪಕ್ಷ ನಿಮ್ಮನ್ನು ನಾಯಕರು ಎಂದು ಗುರುತಿಸಿದೆ. ಬಿಜೆಪಿ ಕಾರ್ಯಕರ್ತರ ಜೊತೆಯಲ್ಲೂ ನೀವು ಸ್ನೇಹಪೂರ್ವಕವಾಗಿ ಇರಬೇಕು ಈಗ ಹೆಸರಿಗೆ ಮಾತ್ರ ಅವರ ಜೊತೆ ಇರುತ್ತಾರೆ. ಮುಂದೊಂದು ದಿನ ನಮ್ಮ ಜೊತೆ ಬಂದೇ ಬರುತ್ತಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಸಿ.ಪಿ.ಯೋಗೇಶ್ವರ್, ವಿಧಾನಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಸಿಇಓ ಅನ್ಮೋಲ್ ಜೈನ್, ಎಸ್ಪಿ ಶ್ರೀನಿವಾಸಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬೆಂಗಳೂರು ದಕ್ಷಿಣ ಜಿಲ್ಲೆ ನಾನು ಮಾಡಲಿಲ್ಲ: ‘ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಡಿ.ಕೆ.ಶಿವಕುಮಾರ್ ಮಾಡಿದರು ಎಂದು ಕಾರ್ಯಕ್ರಮದ ನಿರೂಪಕರು ಹೇಳುತ್ತಿದ್ದರು. ನಾನು ಈ ಕೆಲಸವನ್ನು ಮಾಡಿಲ್ಲ. ಇದ್ದ ಹೆಸರನ್ನು ಉಳಿಸಿದ್ದೇನೆ. ಈ ಹಿಂದೆ ನಾನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದೆ. ಹಾಗಿದ್ದರೆ ನಾವು ಬೆಂಗಳೂರಿಗೆ ಸೇರಿದವರಲ್ಲವೇ? ನಮ್ಮ ಗುರುತನ್ನು ನಾವು ಏಕೆ ಬಿಟ್ಟು ಕೊಡಬೇಕು. ನಮ್ಮನ್ನು ನೋಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು ‘ಬೆಂಗಳೂರು ಉತ್ತರ’ ಜಿಲ್ಲೆ ಎಂದು ಮಾಡಿಕೊಳ್ಳುತ್ತಿದ್ದಾರೆ. ಬೇರೆಯವರು ಇಲ್ಲಿಗೆ ಏಕೆ ಬಂದು ರಾಜಕಾರಣ ಮಾಡಿದರು? ಅವರ ಊರಿನಲ್ಲಿಯೇ ಮಾಡಬಹುದಿತ್ತಲ್ಲ? ಇದೀಗ ನೀರು, ಭೂಮಿ, ಜನ ಎಲ್ಲವೂ ಚೆನ್ನಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ’

-ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X