Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಮನಗರ
  4. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ...

ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿಎಂ ಸಿದ್ದರಾಮಯ್ಯ

ʼಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಗೆಲುವು ನಿಶ್ಚಿತʼ

ವಾರ್ತಾಭಾರತಿವಾರ್ತಾಭಾರತಿ28 March 2024 2:34 PM IST
share
  • ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿಎಂ ಸಿದ್ದರಾಮಯ್ಯ
  • ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿಎಂ ಸಿದ್ದರಾಮಯ್ಯ

ರಾಮನಗರ ಮಾ 28: ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

‌ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ ಎಂದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದರು.

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಬರುತ್ತಿರುವ ಮಾಹಿತಿಯ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರ ಗೆಲುವು ಶತಸಿದ್ದ. ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ. ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಗಣಿಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ , ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X