Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಮನಗರ
  4. ಎಚ್ಎಂಟಿ ಜಾಗಕ್ಕೆ ಸಚಿವ ಈಶ್ವರ್ ಖಂಡ್ರೆ...

ಎಚ್ಎಂಟಿ ಜಾಗಕ್ಕೆ ಸಚಿವ ಈಶ್ವರ್ ಖಂಡ್ರೆ ಅತಿಕ್ರಮ ಪ್ರವೇಶ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 Oct 2024 3:07 PM IST
share
ಎಚ್ಎಂಟಿ ಜಾಗಕ್ಕೆ ಸಚಿವ ಈಶ್ವರ್ ಖಂಡ್ರೆ ಅತಿಕ್ರಮ ಪ್ರವೇಶ : ಎಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ : ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಚ್ಎಂಟಿ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಚನ್ನಪಟ್ಟಣದಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು,"ಸಚಿವ ಖಂಡ್ರೆ ಅವರಿಗೆ ಮಾಹಿತಿ ಮತ್ತು ಜ್ಞಾನದ ಕೊರತೆ ಇದೆ. ಅವರು ಭೇಟಿ ನೀಡಿರುವ ಜಾಗವು 2002ರಲ್ಲಿಯೇ ಕೆನರಾ ಬ್ಯಾಂಕಿಗೆ ನೀಡಲಾಗಿದೆ. ಸಚಿವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ನಾಳೆ ಅಥವಾ ನಾಡಿದ್ದು ಎಲ್ಲಾ ದಾಖಲೆಗಳ ಸಮೇತ ನಾನು ನಿಮ್ಮ (ಮಾಧ್ಯಮಗಳು) ಮುಂದೆ ಮಾತನಾಡುತ್ತೇನೆ" ಎಂದರು.

ʼಚಿಕ್ಕಮಗಳೂರು, ಕೊಡಗು, ಬೆಂಗಳೂರು ಸೇರಿದಂತೆ ಅನೇಕ ಕಡೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಅದನ್ನೆಲ್ಲ ತೆರವು ಮಾಡುವುದು ಬಿಟ್ಟು ಅರಣ್ಯ ಸಚಿವರು ಎಚ್‌ಎಂಟಿ ಮೇಲೆ ಮಾತ್ರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆʼ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸ್ಪೀಕರ್ ಒತ್ತುವರಿ ಜಾಗ ತೆರವು ಮಾಡಿಸಿಲ್ಲ ಯಾಕೆ? :

ಕೋಲಾರದ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ಒತ್ತುವರಿ ಮಾಡಿರುವ ಅರಣ್ಯ ಭೂಮಿಯನ್ನು ತೆರವು ಮಾಡಿಸುವ ಧೈರ್ಯವನ್ನು ಅರಣ್ಯ ಸಚಿವರು ತೋರಿಸಲಿ. ಒತ್ತುವರಿ ತೆರವು ಮಾಡಿಸುವಂತೆ ನ್ಯಾಯಾಲಯ ಆದೇಶ ಕೊಟ್ಟಿವೆ. ಅರಣ್ಯ ಇಲಾಖೆ, ಕೋಲಾರ ಜಿಲ್ಲಾಧಿಕಾರಿಗೆ ನೋಟಿಸ್ ಕೊಟ್ಟಿದೆ. ಆದರೂ ಮಾಜಿ ಸ್ಪೀಕರ್ ಒತ್ತುವರಿ ಜಾಗವನ್ನು ಯಾಕೆ ತೆರವು ಮಾಡುತ್ತಿಲ್ಲ, ಹೇಳಿ ಈಶ್ವರ ಖಂಡ್ರೆ ಅವರೇ? ಎಂದು ಎಚ್‌ಡಿಕೆ ಪ್ರಶ್ನಿಸಿದರು.

ಶ್ರೀನಿವಾಸಪುರದಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ‌. 61 ಎಕರೆಯನ್ನು ಸರ್ವೆ ಮಾಡಿ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಿ ಎಂದು ನ್ಯಾಯಾಲಯದ ಆದೇಶ ಆಗಿದೆ. ಆ ಒತ್ತುವರಿ ಭೂಮಿ ವಿಷಯದಲ್ಲಿ ಅರಣ್ಯ ಸಚಿವರು ಅಧಿಕಾರಿಗಳಿಗೆ ಏನು ಸೂಚನೆ ಕೊಟ್ಟಿದ್ದಾರೆ ಅಂತ ಗೊತ್ತು‌. ಆ ವಿಚಾರದಲ್ಲಿ ಈಶ್ವರ್ ಖಂಡ್ರೆ ಏನ್ ಮಾಡ್ತಿದ್ದೀಯಪ್ಪ? ಬಡವರಿಗೆ ಒಂದು ನ್ಯಾಯ, ಕಾಂಗ್ರೆಸ್‌ನವರಿಗೆ ಒಂದು ನ್ಯಾಯವಾ? ಎಂದು ಖಾರವಾಗಿ ಪ್ರಶ್ನಿಸಿದರು.

ಮುಡಾ ದಾಖಲೆಗಳೇ ಮಂಗಮಾಯ :

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಈಡಿ) ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಂದ್ರ ಸಚಿವ ಕುಮಾರಸ್ವಾಮಿ ಅವರು, "ಕಳೆದ ನಾಲ್ಕೈದು ವಾರಗಳಿಂದ ಹಲವಾರು ವ್ಯಕ್ತಿಗಳ ಮೇಲೆ ದಾಳಿ ನಡೆದಿದೆ. ಸಾಕಷ್ಟು ವಿಚಾರಗಳು ಹೊರಗಡೆ ಬರುತ್ತಿವೆ‌. ದಾಖಲೆಗಳು ಕಳ್ಳತನ ಆಗಿವೆ, ಮಂಗಮಾಯ ಆಗಿವೆ ಎಂದು ಹೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಸತ್ಯ ಮೇವ ಜಯತೆ ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಜಾಹೀರಾತಿನಲ್ಲಿ ನೋಡಿದರೂ ಸತ್ಯಮೇವ ಜಯತೇ, ಭಾಷಣದಲ್ಲಿ ನೋಡಿದರೂ ಸತ್ಯಮೇವ ಜಯತೇ!! ಈಗ ಎಲ್ಲಾ ಸತ್ಯ ಮೇವ ಜಯತೆ ಹೊರಗಡೆ ಬರುತ್ತಿದೆ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X