ರಾಮನಗರ | ಕೆಎಸ್ಸಾರ್ಟಿಸಿ ಬಸ್ ಪಲ್ಟಿ: ಎಸ್ಸೈ ಸಹಿತ ಇಬ್ಬರು ಮೃತ್ಯು, ನಾಲ್ವರು ಗಂಭೀರ

ಸಾಂದರ್ಭಿಕ ಚಿತ್ರ
ರಾಮನಗರ: ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಢಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿಬಿದ್ದ ಘಟನೆ ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ್ದು, ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ಸೈ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತಪಟ್ಟಿದ್ದಾರೆ.
ಬಸ್ಸು ಬೆಳಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮೇಲೇರಿದೆ. ಬಳಿಕ ಪಕ್ಕದ ರಸ್ತೆಗೆ ನುಗ್ಗಿ ಎದುರಿನಿಂದ ಬರುತ್ತಿದ್ದ ಎಸ್ಸೈ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕಿಗೆ ಢಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story