ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ‘800’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಸಚಿನ್ ತೆಂಡೂಲ್ಕರ್
Photo: ANI
ಮುಂಬೈ: ಶ್ರೀಲಂಕಾದ ದಂತಕತೆ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರವಾದ ‘800’ ಟ್ರೈಲರ್ ಅನ್ನು ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿನ್ ತೆಂಡೂಲ್ಕರ್, “ಹಲವಾರು ವರ್ಷ ಕಳೆದರೂ ನಾವು ಉತ್ತಮ ಸ್ನೇಹಿತರಾಗಿದ್ದೇವೆ. ಅವರೊಂದಿಗೆ ಸಮಯ ಕಳೆದಿದ್ದಕ್ಕೆ ತುಂಬಾ ಸಂತೋಷವಾಗಿದೆ. ಎಲ್ಲರೂ ಚಿತ್ರವನ್ನು ವೀಕ್ಷಿಸುತ್ತಾರೆ ಎಂಬ ಭರವಸೆ ನನಗಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಕೂಡಾ ಉಪಸ್ಥಿತರಿದ್ದರು.
Next Story