Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಕರ್ನಾಟಕಕ್ಕೆ ಸಿಗದ ಅನುದಾನ

ಕರ್ನಾಟಕಕ್ಕೆ ಸಿಗದ ಅನುದಾನ

ವಾರ್ತಾಭಾರತಿವಾರ್ತಾಭಾರತಿ24 Nov 2026 8:59 AM IST
share
ಕರ್ನಾಟಕಕ್ಕೆ ಸಿಗದ ಅನುದಾನ

ತೆರಿಗೆ ಹಾಗೂ ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗಿನಿಂದ ಹಿಡಿದು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವ ಈ ದಿನದವರೆಗೆ ಈ ಅನ್ಯಾಯ ಮುಂದುವರಿದಿದೆ. ಸಿದ್ದರಾಮಯ್ಯನವರು ಈ ಅನ್ಯಾಯವನ್ನು ಪ್ರತಿಭಟಿಸಿ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ನೇರ ಸಮರವನ್ನೇ ಸಾರಿದ್ದರು. ಆದರೆ ಡಿ.ಕೆ. ಶಿವಕುಮಾರ್ ಅವರು ನೇರ ಸಂಘರ್ಷದ ಬದಲಾಗಿ ಸೌಮ್ಯ ಭಾಷೆಯಲ್ಲಿ ಕೇಂದ್ರಕ್ಕೆ ಮನವಿ ಮಾಡಿಕೊಳ್ಳುತ್ತಲೇ ಇದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಬೆಂಗಳೂರಿಗೆ ಬಂದಾಗ ಅವರ ಎದುರೇ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪರಿ ಪರಿಯಾಗಿ ಕೇಳಿಕೊಂಡರು. ಆದರೆ ಉಳಿದುದನ್ನೆಲ್ಲ ಮಾತಾಡಿದ ಪ್ರಧಾನಿ ಮೌನವಾಗಿ ಮೂಗಿಗೆ ಬೆಣ್ಣೆ ಹಚ್ಚಿ ಹೋದರು.

15ನೇ ಹಣಕಾಸು ಆಯೋಗ ಶಿಫಾರಸು ಮಾಡಿದಂತೆ ರಾಜ್ಯಕ್ಕೆ ಹಂಚಿಕೆ ಮಾಡಲಾಗಿದ್ದ ಅನುದಾನದ ಮೊತ್ತವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡದಿರುವುದರಿಂದ ಮೂಲ ಸೌಕರ್ಯಗಳ ನಿರ್ವಹಣೆಗೆ ಪರದಾಡುತ್ತಿರುವ ಗ್ರಾಮ ಪಂಚಾಯತ್‌ಗಳು ಇಕ್ಕಟ್ಟಿಗೆ ಸಿಲುಕಿವೆ. ಇದರ ಪರಿಣಾಮವಾಗಿ ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಡುವೆ ಪ್ರತಿನಿತ್ಯ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ಗ್ರಾಮ ಪಂಚಾಯತ್‌ಗಳಿಗೆ 2025-26ನೇ ವರ್ಷಕ್ಕೆ ನೀಡಬೇಕಿದ್ದ 2,186 ಕೋಟಿ ರೂಪಾಯಿ ಅನುದಾನ ಒಂದೂವರೆ ವರ್ಷಗಳಿಂದ ಬಂದಿಲ್ಲ. ಈ ಬಾಕಿ ಅನುದಾನ ಬಿಡುಗಡೆಯಾಗುವವರೆಗೂ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂಪಾಯಿ ತುರ್ತು ನೆರವು ನೀಡಬೇಕೆಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮನವಿಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಈ ಕುರಿತ ಪ್ರಸ್ತಾವವನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ.

ರಾಜ್ಯದಲ್ಲಿ ಒಟ್ಟು 5,946 ಗ್ರಾಮ ಪಂಚಾಯತ್‌ಗಳಿವೆ. ಇವುಗಳಲ್ಲಿ 869 ಪಂಚಾಯತ್‌ಗಳು ಸ್ವಂತ ಸಂಪನ್ಮೂಲಗಳನ್ನು ಹೊಂದಿವೆ. ಸುಮಾರು 5,077 ಪಂಚಾಯತ್‌ಗಳು ಕೇಂದ್ರ ಮತ್ತು ರಾಜ್ಯದ ಅನುದಾನದ ಮೇಲೆ ಅವಲಂಬಿಸಲ್ಪಟ್ಟಿವೆ. ಹಣಕಾಸು ಆಯೋಗದ ಶಿಫಾರಸಿನಂತೆ ಹಂಚಿಕೆ ಮಾಡಲಾಗುವ ಅನುದಾನವನ್ನು ಗ್ರಾಮೀಣ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಮತ್ತು ದೈನಂದಿನ ನಿರ್ವಹಣೆಗಾಗಿ ಬಳಸಿಕೊಳ್ಳಲಾಗುತ್ತಿದೆ. 15ನೇ ಹಣಕಾಸು ಆಯೋಗದ ಮಾರ್ಗಸೂಚಿಗಳ ಪ್ರಕಾರ ಪಂಚಾಯತ್‌ಗಳು ತಮಗೆ ಬಂದ ಅನುದಾನದಲ್ಲಿ ಶೇ.60ರಷ್ಟು ಮೊತ್ತವನ್ನು ಕುಡಿಯುವ ನೀರು ಪೂರೈಕೆ, ಕೊಳವೆ ಬಾವಿಗಳ ದುರಸ್ತಿ ಹಾಗೂ ಜಲ ಮೂಲಗಳ ರಕ್ಷಣೆ ಮತ್ತು ಮಳೆ ನೀರು ಸಂಗ್ರಹ ಯೋಜನೆ, ಶೌಚಾಲಯ, ತ್ಯಾಜ್ಯನಿರ್ವಹಣೆ, ಚರಂಡಿಗಳ ಸ್ವಚ್ಛತೆಗೆ ಉಪಯೋಗಿಸಬಹುದಾಗಿದೆ. ಉಳಿದ ಶೇ.40ರಷ್ಟು ಮೊತ್ತವನ್ನು ವೇತನ ಪಾವತಿ ಹೊರತುಪಡಿಸಿ ಸ್ಥಳೀಯ ಅಗತ್ಯಗಳಿಗೆ ಬಳಸಿಕೊಳ್ಳಬಹುದಾಗಿದೆ.

ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳು ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಯೋಜನೆಗಳು ಮತ್ತು ನಿರ್ವಹಣೆಯನ್ನು ಮಾಡುವ ಸ್ಥಿತಿಯಲ್ಲಿ ಇಲ್ಲ. ಗ್ರಾಮ ಪಂಚಾಯತ್‌ಗಳ ತೆರಿಗೆ ಸಂಗ್ರಹ ಮಾಡುವ ಸಾಮರ್ಥ್ಯ 5ರಿಂದ 10 ಲಕ್ಷ ರೂ.ವರೆಗೆ ಮಾತ್ರ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಂತು ಹೋಗಿವೆ. ಹೀಗಾಗಿ ಪರಿಸ್ಥಿತಿ ಹದಗೆಟ್ಟಿದೆ.

ತೆರಿಗೆ ಮತ್ತು ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಇದೇ ರೀತಿ ಅನ್ಯಾಯವಾದಾಗ ಕರ್ನಾಟಕ ಸರಕಾರ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಬೇಕಾಯಿತು. ತೆರಿಗೆ ರೂಪದಲ್ಲಿ ಕರ್ನಾಟಕ 4.5 ಲಕ್ಷ ಕೋಟಿ ರೂಪಾಯಿಗಳನ್ನು ಪ್ರತೀ ವರ್ಷ ಕೇಂದ್ರಕ್ಕೆ ನೀಡುತ್ತದೆ. ಇದರಲ್ಲಿ ಕರ್ನಾಟಕಕ್ಕೆ ವಾಪಸು ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಅತ್ಯಂತ ಕಡಿಮೆ ತೆರಿಗೆ ಪಾವತಿ ಮಾಡುವ ಉತ್ತರ ಪ್ರದೇಶಕ್ಕೆ ಶೇ. 18ರಷ್ಟು ಅನುದಾನವನ್ನು ನೀಡುವ ಕೇಂದ್ರ ಸರಕಾರ ಹೆಚ್ಚು ತೆರಿಗೆ ಪಾವತಿ ಮಾಡುವ ಕರ್ನಾಟಕಕ್ಕೆ ನೀಡುವುದು ಶೇ.3ರಿಂದ 5ರಷ್ಟು ಮಾತ್ರ. ಮುಂಬೈ ಮತ್ತು ದಿಲ್ಲಿ ನಂತರ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಬೆಂಗಳೂರು ನಗರಕ್ಕೆ ಕೇಂದ್ರದಿಂದ ಬರುವ ಅನುದಾನ ಕೂಡ ಅತ್ಯಂತ ಕಡಿಮೆ.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರುವ ಅನುದಾನಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯದಿಂದ ಚುನಾಯಿತರಾದ ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರು ಮತ್ತು ಕೇಂದ್ರ ಸಂಪುಟದಲ್ಲಿ ಇರುವ ಕರ್ನಾಟಕದ ಮಂತ್ರಿಗಳು ಧ್ವನಿಯೆತ್ತಿದ್ದರೆ ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ. ರಾಜ್ಯದ ಸಂಸದರ ನಿಷ್ಕ್ರಿಯತೆ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಯ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಸಂಸದರು ಪಕ್ಷಬೇಧ ಬದಿಗಿಟ್ಟು ಸ್ಪಂದಿಸಬೇಕಾಗಿದೆ. ತಮಿಳುನಾಡು, ಕೇರಳಂ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳನ್ನು ಪ್ರತಿನಿಧಿಸುವ ಸಂಸದರು ಪಕ್ಷಭೇದ ಮರೆತು ತಮ್ಮ ರಾಜ್ಯದ ಸಮಸ್ಯೆಗಳ ನಿವಾರಣೆಗೆ ಒಂದಾಗುತ್ತಾರೆ. ರಾಜ್ಯದ ಸಂಸದರು ಸದನದಲ್ಲಿ ಬಾಯಿ ಬಿಡಲು ಹೆದರುತ್ತಾರೆ.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿದ ಹಣ ಮಾತ್ರವಲ್ಲ ಜಿಎಸ್‌ಟಿ ಹಣ, ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಮೊತ್ತ ಸೇರಿ ಒಂದು ಲಕ್ಷ ಕೋಟಿ ರೂ. ಬರಬೇಕಾಗಿದೆ. ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದರೂ ಉತ್ತರವಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ದಿಲ್ಲಿಯಲ್ಲಿ ರಾಜ್ಯದ ಸಂಸದರು ಮತ್ತು ಶಾಸಕರು ಒಂದಾಗಿ ಪ್ರತಿಭಟನೆ ನಡೆಸಿದ್ದರು. ಆದರೂ ಕೇಂದ್ರದ ಮೋದಿ ನೇತೃತ್ವದ ಸರಕಾರದಿಂದ ಒಂದು ಪೈಸೆಯೂ ಬರಲಿಲ್ಲ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9, ಇಬ್ಬರು ಜೆಡಿಎಸ್ ಸದಸ್ಯರು ಹಾಗೂ ರಾಜ್ಯ ಸಭೆಯಲ್ಲಿ ಐವರು ಬಿಜೆಪಿ, 7 ಮಂದಿ ಕಾಂಗ್ರೆಸ್ ಸದಸ್ಯರಿದ್ದಾರೆ. ಆದರೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದೆ.

ಕರ್ನಾಟಕದಿಂದ ಚುನಾಯಿತರಾದ ನಿರ್ಮಲಾ ಸೀತಾರಾಮನ್ 2014ರಿಂದ ಕೇಂದ್ರದ ಪ್ರಭಾವಿ ಸಚಿವರಾಗಿದ್ದಾರೆ. ಕಳೆದ 8 ವರ್ಷಗಳಿಂದ ಹಣಕಾಸು ಸಚಿವರೂ ಆಗಿದ್ದಾರೆ. ಅವರಿಂದ ಕರ್ನಾಟಕಕ್ಕೆ ಕವಡೆ ಕಾಸೂ ಬಂದಿಲ್ಲ. ಧಾರವಾಡದಿಂದ ಲೋಕಸಭೆಗೆ ಆರಿಸಿ ಬರುವ ಪ್ರಹ್ಲಾದ ಜೋಶಿಯವರು ಕಳೆದ ಏಳು ವರ್ಷಗಳಿಂದ ಸಂಪುಟ ದರ್ಜೆಯ ಸಚಿವರಾಗಿ ಪ್ರಮುಖ ಸಚಿವ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಈಗ ದೇಶದ ಶಿಕ್ಷಣ ಸಚಿವರೂ ಆಗಿದ್ದಾರೆ. ಅವರು ಧಾರವಾಡಕ್ಕೆ ಐಐಟಿ ತಂದರೆಂಬುದನ್ನು ಬಿಟ್ಟರೆ ಹೆಚ್ಚಿನ ಪ್ರಯೋಜನವಾಗಿಲ್ಲ. ಬೈಪಾಸ್ ರಸ್ತೆ, ಹುಬ್ಬಳ್ಳಿ ನಗರದಲ್ಲಿ ಮೇಲ್ಸೆತುವೆ ಕೆಲಸ ಕುಂಟುತ್ತಾ, ತೆವಳುತ್ತಾ ಸಾಗಿದೆ. ಕೇಂದ್ರದ ಇತರ ಸಚಿವರಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಮಗಿರುವ ಸಾಮರ್ಥ್ಯ ಹಾಗೂ ವ್ಯಾಪ್ತಿಯನ್ನು ಅನುಸರಿಸಿ ಒಂದಿಷ್ಟು ಕೆಲಸ ಮಾಡಿದ್ದಾರೆ. ಉಳಿದವರ ಬಗ್ಗೆ ಹೇಳದಿರುವುದೇ ವಾಸಿ.

ಕರ್ನಾಟಕ ಹಿಂದೆಂದೂ ಕಾಣದ ಬರಗಾಲವನ್ನು ಎದುರಿಸುತ್ತಿದೆ. ಇಂಥ ಸಂದರ್ಭದಲ್ಲಾದರೂ ರಾಜ್ಯದ ಸಂಸದರು ಒಕ್ಕೊರಲಿನಿಂದ ರಾಜ್ಯದ ಹಿತಾಸಕ್ತಿಗಾಗಿ ಧ್ವನಿ ಎತ್ತಬೇಕಾಗಿದೆ.

Tags

EditorialFundsKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X