Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ರಾಜ್ಯದಲ್ಲಿ ಭ್ರಷ್ಟಾಚಾರದ ‘ಗುತ್ತಿಗೆ ’:...

ರಾಜ್ಯದಲ್ಲಿ ಭ್ರಷ್ಟಾಚಾರದ ‘ಗುತ್ತಿಗೆ ’: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹಸ್ತಾಂತರ!

ವಾರ್ತಾಭಾರತಿವಾರ್ತಾಭಾರತಿ5 Oct 2026 8:00 AM IST
share
ರಾಜ್ಯದಲ್ಲಿ ಭ್ರಷ್ಟಾಚಾರದ ‘ಗುತ್ತಿಗೆ ’: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹಸ್ತಾಂತರ!

ಕೋಲು ಕೊಟ್ಟು ಹೊಡೆಸಿಕೊಳ್ಳುವುದೆಂದರೆ ಕಾಂಗ್ರೆಸ್‌ಗೆ ಅದೇನು ಖುಷಿಯೊ ಗೊತ್ತಿಲ್ಲ. ಹಾಗಲ್ಲವೆಂದಾಗಿದ್ದರೆ, ಯಾವುದನ್ನು ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಅಸ್ತ್ರವಾಗಿಸಿಕೊಳ್ಳಲಾಗಿತ್ತೊಅದೇ ಗುತ್ತಿಗೆದಾರರ ವಿಷಯದಲ್ಲಿ ಸ್ವತಃ ಕಾಂಗ್ರೆಸ್ ಸರಕಾರ ಎಡವುತ್ತಿರಲಿಲ್ಲ. ಮೊನ್ನೆ ಗುತ್ತಿಗೆದಾರರ ಸಂಘ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣ ಬಿಡುಗಡೆಗೆ ಒತ್ತಾಯಿಸಿ ಮತ್ತೊಮ್ಮೆ ಪತ್ರ ಬರೆದ ಬಳಿಕ ಚರ್ಚೆ ದೊಡ್ಡದಾಗುತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿದ್ದ ‘ಪರ್ಸೆಂಟೇಜ್’ ಈ ಸರಕಾರದಲ್ಲೂ ಮುಂದುವರಿದಿದೆ ಎಂಬ ಆರೋಪದ ಭಾರವೂ ಕಾಂಗ್ರೆಸ್ ಬೆನ್ನಿಗೇರಿದೆ. ಸರಕಾರದಲ್ಲಿನ ಪಾರದರ್ಶಕತೆ ಕೊರತೆಯ ಬಗ್ಗೆ ಆರೋಪಿಸಿರುವ ಗುತ್ತಿಗೆದಾರರ ಸಂಘ, ಲಂಚ ಪಡೆದಿರುವ ಹಾಗೂ ಲಂಚಕ್ಕೆ ಬೇಡಿಕೆ ಇಟ್ಟಿರುವ ಶಾಸಕರ ಹೆಸರನ್ನು ಬಹಿರಂಗಪಡಿಸುವುದಾಗಿಯೂ ಎಚ್ಚರಿಸಿದೆ. ಕೊಡುವಾಗ ಲಂಚ ಕೊಟ್ಟು, ಬಳಿಕ ಅದನ್ನು ಬೆದರಿಕೆಗಾಗಿ ಬಳಸಲಾಗುವ ಆಟದಂತೆ ಇದು ಕಾಣುವುದರಿಂದ, ಪಾರದರ್ಶಕತೆ ಅಲ್ಲಿಯೂ ಇಲ್ಲವೆಂಬ ಅನುಮಾನಕ್ಕೂ ಎಡೆಮಾಡಿಕೊಟ್ಟಿದೆ.

ಗುತ್ತಿಗೆದಾರರ ಸಂಘ ಹೇಳುತ್ತಿರುವ ಪ್ರಕಾರ, ಸರಕಾರದಿಂದ 38 ಸಾವಿರ ಕೋಟಿ ರೂ. ಬಾಕಿ ಇದೆ. ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆಯಿಂದ 13,000 ಕೋಟಿ ರೂ. ಲೋಕೋಪಯೋಗಿ ಇಲಾಖೆಯಿಂದ 8,370 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 3,800 ಕೋಟಿ, ರೂ. ಸಣ್ಣ ನೀರಾವರಿ ಇಲಾಖೆಯಿಂದ 3,000 ಕೋಟಿ, ರೂ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ 2,600 ಕೋಟಿ, ಕಾರ್ಮಿಕ ಇಲಾಖೆಯಿಂದ 2,000 ಕೋಟಿ, ರೂ. ನಗರಾಭಿವೃದ್ಧಿ ಇಲಾಖೆಯಿಂದ 1,800 ಕೋಟಿ ರೂ. ಬಾಕಿ ಇದೆ ಎಂದು ಗುತ್ತಿಗೆದಾರರ ಸಂಘ ಹೇಳಿದೆ. ಆದರೆ, ಅದು ಕೊಡುತ್ತಿರುವ ಅಂಕಿಅಂಶಗಳಿಗೂ ಸರಕಾರದ ಅಧಿಕೃತ ಬಾಕಿ ಲೆಕ್ಕಕ್ಕೂ ತಾಳೆಯಾಗುತ್ತಿಲ್ಲ ಎನ್ನಲಾಗಿದೆ. ಗುತ್ತಿಗೆದಾರರ ಸಂಘದ ಲೆಕ್ಕಾಚಾರದಲ್ಲಿ ಸದ್ಯ ಪ್ರಗತಿಯಲ್ಲಿರುವ ಕಾಮಗಾರಿಗಳ ಅಂದಾಜು ಮೊತ್ತವೂ ಸೇರಿಕೊಂಡಿರಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆಂದು ವರದಿಗಳಿವೆ. ನಿಜವಾಗಿ ಪಾವತಿಸಬೇಕಿರುವ ಪೂರ್ಣಗೊಂಡ ಕಾಮಗಾರಿಗಳ ಬಾಕಿ ಮೊತ್ತವನ್ನು ಪ್ರತ್ಯೇಕವಾಗಿ ನಿರ್ಧರಿಸಬೇಕಾಗಿದೆ ಎಂಬ ಮಾತು ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹಲವು ಬಾರಿ ಪತ್ರ ಬರೆದಿದ್ದಲ್ಲದೆ, ಭೇಟಿಯಾಗಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂಬ ಬೇಸರವನ್ನೂ ಸಂಘ ವ್ಯಕ್ತಪಡಿಸಿದೆ.

ಇದೇ ವರ್ಷ ಫೆಬ್ರವರಿಯಲ್ಲೂ ಗುತ್ತಿಗೆದಾರರ ಸಂಘ ಬಾಕಿ ಪಾವತಿಗೆ ಒತ್ತಾಯಿಸಿ ಮುಷ್ಕರ ಹೂಡುವ ಎಚ್ಚರಿಕೆ ನೀಡಿತ್ತು. ಆದರೆ ಹಿಂದಿನ ಸರಕಾರ ಬಾಕಿ ಉಳಿಸಿದ್ದಕ್ಕೆ ನಾವು ಹೇಗೆ ಹೊಣೆ ಎಂದು ಆಗ ಡಿಸಿಎಂ ಹುದ್ದೆಯಲ್ಲಿದ್ದ ಡಿ.ಕೆ. ಶಿವಕುಮಾರ್ ತಿರುಗೇಟು ಕೊಟ್ಟಿದ್ದರು. ಮುಖ್ಯಮಂತ್ರಿಯಾದ ಬಳಿಕ ಜೂನ್‌ನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಿದ್ದ ಡಿ.ಕೆ. ಶಿವಕುಮಾರ್, ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ಎರಡು ತಿಂಗಳೊಳಗೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ಸಂಘ ಹೇಳಿದೆ. ಗುತ್ತಿಗೆದಾರರು ಸಾಲದ ಸುಳಿಯಲ್ಲಿ ಸಿಲುಕಿದ್ದು ಸಂಕಷ್ಟದಲ್ಲಿರುವುದಾಗಿ ಸಂಘ ಹೇಳುತ್ತಿದೆ. ಚುನಾವಣೆಗಳಲ್ಲಿ ಬಳಸಿಕೊಂಡು ನಂತರ ಕಾಂಗ್ರೆಸ್ ಸರಕಾರ ತಮ್ಮನ್ನು ಮರೆತಿದೆ ಎಂದು ದೂರಿದೆ. ಅಲ್ಲದೆ, ಟೆಂಡರ್ ನೀಡಲು ಮತ್ತು ಬಾಕಿ ಹಣ ಬಿಡುಗಡೆ ಮಾಡಲು ಕಮಿಷನ್‌ಗೆ ಬೇಡಿಕೆ ಇಡುವ ಮೂಲಕ ಹಲವು ಶಾಸಕರು ತಮ್ಮ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದೂ ಅದು ಆರೋಪಿಸಿದೆ.

ಈ ನಡುವೆ, ಬಾಕಿ ಪಾವತಿಗೆಂದು 2,400 ಕೋಟಿ ರೂ. ಯನ್ನು ನೀರಾವರಿ ಇಲಾಖೆಗೆ ಸರಕಾರ ಬಿಡುಗಡೆ ಮಾಡಿದ್ದು, ಪ್ರತಿಭಟನೆ ಮತ್ತು ಲಂಚಕೋರ ಶಾಸಕರ ಹೆಸರು ಬಯಲು ಮಾಡುವ ಎಚ್ಚರಿಕೆ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಟೀಕೆಯೂ ಬಂದಿದೆ. ಅಲ್ಲದೆ, ಒಂದೇ ಕಂತಿನಲ್ಲಿ ಪಾವತಿಸದೆ ಆಗೀಗ ಇಷ್ಟು ಸಣ್ಣ ಮೊತ್ತ ನೀಡುತ್ತಿದ್ದರೆ ಏನು ಪ್ರಯೋಜನ ಎಂದು ಸಂಘದ ಅಧ್ಯಕ್ಷರು ಬೇಸರದ ಪ್ರಶ್ನೆಯೆತ್ತಿದ್ದಾರೆ. ಕೆಲವು ಇಲಾಖೆಗಳ ಟೆಂಡರ್ ಹಾಗೂ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ ಎಂಬ ಆರೋಪವನ್ನೂ ಮಾಡಲಾಗಿದೆ. ಕಮಿಷನ್ ಆರೋಪದ ಸುಳಿಯಲ್ಲಿ ಕಾಂಗ್ರೆಸ್ ಕೂಡ ಸಿಲುಕಿದೆ ಎಂಬುದೇ ಕಳವಳದ ವಿಷಯ. 40 ಪರ್ಸೆಂಟ್ ಕಮಿಷನ್ ಆರೋಪ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿತ್ತು. ಆ ವಿಷಯ ಮುಂದಿಟ್ಟುಕೊಂಡು ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಹೋರಾಟ ಕೈಗೆತ್ತಿಕೊಂಡಿತ್ತು. ಜನರು ಬಿಜೆಪಿಯನ್ನು ತಿರಸ್ಕರಿಸುವಂತೆ ಮಾಡಲು ಕಾಂಗ್ರೆಸ್ ಅದನ್ನು ಅಸ್ತ್ರವಾಗಿ ಬಳಕೆ ಮಾಡಿಕೊಂಡಿತ್ತು. ಕಮಿಷನ್ ಆರೋಪದ ಕಾರಣಕ್ಕೆ ಆಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಈಶ್ವರಪ್ಪ, ಗುತ್ತಿಗೆದಾರರ ಸಂಘದ ಆಗಿನ ಅಧ್ಯಕ್ಷ ಕೆಂಪಣ್ಣ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಜರೆದಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅದೇ ಕೆಂಪಣ್ಣ ಬಿಜೆಪಿ ಸರಕಾರದ ವಿರುದ್ಧ ಮಾಡಿದ್ದ ಅದೇ ಆರೋಪವನ್ನು ಕಾಂಗ್ರೆಸ್ ವಿರುದ್ಧವೂ ಮಾಡಿದರು. ಇದೆಲ್ಲದರ ನಡುವೆ, ಬಿಜೆಪಿ ಸರಕಾರದ ಅವಧಿಯಲ್ಲಿನ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಸಮಿತಿ, ಆಡಳಿತದಲ್ಲಿ ಭ್ರಷ್ಟಾಚಾರ ಮತ್ತು ಕಾನೂನು ಉಲ್ಲಂಘನೆಗಳು ಇರುವುದು ನಿಜವಾದರೂ, ಬಿಜೆಪಿ ವಿರುದ್ಧದ ನಿರ್ದಿಷ್ಟ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಯಾವುದೇ ದೃಢ ಪುರಾವೆಗಳಿಲ್ಲ ಎಂದಿತ್ತು. ಕೊಟ್ಟವರು ಮತ್ತು ತೆಗೆದುಕೊಂಡವರ ನಡುವಿನ ಈ ವ್ಯವಹಾರದ ಆರೋಪಕ್ಕೆ ಆವತ್ತು ಉರಿದುಬೀಳುತ್ತಿದ್ದ ಬಿಜೆಪಿ ಪುರಾವೆ ಕೊಡಿ ಎನ್ನುತ್ತಿತ್ತು. ಈಗಿನವರು ದೂರು ಕೊಡಿ ಎನ್ನುತ್ತಿದ್ದಾರೆ. ಇದರ ನಡುವೆ, ಕಮಿಷನ್‌ಗಾಗಿಯೇ ನಿಜವಾಗಿಯೂ ಅಷ್ಟು ದೊಡ್ಡ ಭಾಗ ಹೋಗುತ್ತಿದ್ದರೆ ಕಾಮಗಾರಿಗಳ ಗುಣಮಟ್ಟದ ಕಥೆಯೇನು? ನಡೆಯುತ್ತಿರುವುದೇನೆಂದು ಎಲ್ಲರಿಗೂ ಗೊತ್ತಿದ್ದರೂ ಯಾರಿಗೂ ಗೊತ್ತಿಲ್ಲದಂತಿರುವ ದೇಶದಲ್ಲಿ ಅದು ಅಪ್ರಸ್ತುತ ಚಿಂತೆ.

ಈ ಇಡೀ ವಿಷಯ ರಾಜಕೀಯ ಸ್ವರೂಪ ಪಡೆಯುತ್ತಿರುವುದು ಸ್ಪಷ್ಟವಾಗಿದೆ. ಗುತ್ತಿಗೆದಾರರ ಪತ್ರದ ವಿಷಯವಾಗಿ ರಾಜ್ಯ ಸರಕಾರ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒತ್ತಾಯಿಸಿದ್ದಾರೆ. ಒಂದು ಕಾಲದಲ್ಲಿ ತನ್ನ ವಿರುದ್ಧ ಹೂಡಲಾಗಿದ್ದ ಬಾಣವನ್ನು ಬಿಜೆಪಿ ಈಗ ಕಾಂಗ್ರೆಸ್‌ಗೆ ತಿರುಗುಬಾಣವಾಗಿಸಲು ನೋಡುತ್ತಿದೆ. ರಣರಂಗದಲ್ಲಿ ರಥ ಮುರಿದ ಸ್ಥಿತಿಯೊಳಗೆ ಕಾಂಗ್ರೆಸ್ ಸಿಕ್ಕಿಬಿದ್ದಿದೆಯೇ ಎಂಬುದು ಈಗ ಪ್ರಶ್ನೆ.

Tags

EditorialCongressBJPstate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X