Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಅಣೆಕಟ್ಟುಗಳ ಸುರಕ್ಷತೆಗೆ ಮೊದಲ ಆದ್ಯತೆ...

ಅಣೆಕಟ್ಟುಗಳ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ

ವಾರ್ತಾಭಾರತಿವಾರ್ತಾಭಾರತಿ5 March 2026 7:08 AM IST
share
ಅಣೆಕಟ್ಟುಗಳ ಸುರಕ್ಷತೆಗೆ ಮೊದಲ ಆದ್ಯತೆ ಅಗತ್ಯ

ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರು ‘‘ಅಣೆಕಟ್ಟುಗಳು ಸ್ವತಂತ್ರ ಭಾರತದ ಆಧುನಿಕ ದೇವಾಲಯಗಳು’’ ಎಂದು ಹೇಳಿದ್ದರು. ನವ ಭಾರತದ ಕೃಷಿ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಅಣೆಕಟ್ಟುಗಳ ಪಾತ್ರ ತುಂಬಾ ಮುಖ್ಯವಾಗಿದೆ. ಬರೀ ಇಷ್ಟು ಹೇಳಿದರೆ ಸಾಲದು ಅವುಗಳ ಸುರಕ್ಷತೆಯ ಬಗ್ಗೆಯೂ ನಾವು ಎಚ್ಚರ ವಹಿಸಬೇಕಾಗಿದೆ

ಸಂಯುಕ್ತ ರಾಷ್ಟ್ರ ಸಂಸ್ಥೆಯ ವರದಿಯೊಂದರ ಪ್ರಕಾರ ಭಾರತದಲ್ಲಿ 6,600ಕ್ಕೂ ಹೆಚ್ಚು ಅಣೆಕಟ್ಟುಗಳಿವೆ. ಅಂದರೆ ಜಗತ್ತಿನಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಅಣೆಕಟ್ಟುಗಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೆಯ ಸ್ಥಾನದಲ್ಲಿ ಇದೆ. ಇದರ ಪೈಕಿ 1,100 ಅಣೆಕಟ್ಟುಗಳು ಸುಮಾರು ಐವತ್ತು ವರ್ಷಗಳಷ್ಟು ಹಳೆಯದಾಗಿವೆ. 220 ಅಣೆಕಟ್ಟುಗಳು ನಿರ್ಮಾಣಗೊಂಡು ನೂರು ವರ್ಷಗಳಿಗಿಂತ ಹೆಚ್ಚಾಗಿದೆ. 2050ರ ವೇಳೆಗೆ ಭಾರತದ ಅಣೆಕಟ್ಟುಗಳ ಪೈಕಿ ಶೇ. 80ಕ್ಕಿಂತ ಹೆಚ್ಚಿನವು ಅವುಗಳ ನಿರೀಕ್ಷಿತ ಆಯುಷ್ಯವನ್ನು ದಾಟಿರುತ್ತವೆ.

ಕರ್ನಾಟಕದಲ್ಲಿಯೇ 231 ಅಣೆಕಟ್ಟುಗಳಿವೆ. ಇದರಲ್ಲಿ ಶೇ. 70ರಷ್ಟು ಅಣೆಕಟ್ಟುಗಳು 25 ವರ್ಷಗಳಿಗಿಂತ ಹಳೆಯದಾಗಿವೆ. ಶೇ. 40ಕ್ಕಿಂತ ಹೆಚ್ಚಿನವು ಕಟ್ಟಲ್ಪಟ್ಟು ಐದು ದಶಕಗಳೇ ಗತಿಸಿವೆ. ಇವುಗಳಲ್ಲಿ ವಾಣಿ ವಿಲಾಸ ಸಾಗರ (119 ವರ್ಷಗಳು), ಕೃಷ್ಣ ರಾಜ ಸಾಗರ (95 ವರ್ಷಗಳು) ಹಾಗೂ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟು (73 ವರ್ಷಗಳು) ರಾಜ್ಯದ ಇಂಜಿನಿಯರಿಂಗ್ ಸಾಮರ್ಥ್ಯಕ್ಕೆ ಸಾಕ್ಷಿಯಾಗಿವೆ. ಹಾಗೆಂದ ಮಾತ್ರಕ್ಕೆ ಇವು ಸದಾ ಕಾಲ ಸುರಕ್ಷಿತವಾಗಿ ಇರುತ್ತವೆ ಎಂದು ಹೇಳಲಾಗುವುದಿಲ್ಲ. ಹಳೆಯದಾದಂತೆ ಅವುಗಳ ಸುರಕ್ಷತೆಯ ಬಗ್ಗೆ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಅಣೆಕಟ್ಟುಗಳ ಸುರಕ್ಷತೆಗೆ ಸಂಬಂಧಿಸಿದ ಅಂತರ್‌ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು ‘‘ಅಣೆಕಟ್ಟುಗಳ ಸುರಕ್ಷತೆಯನ್ನು ಕಡೆಗಣಿಸಬಾರದು. ರಾಷ್ಟ್ರದ ಭದ್ರತೆ, ಒಕ್ಕೂಟ ವ್ಯವಸ್ಥೆಯಲ್ಲಿನ ಹೊಣೆಗಾರಿಕೆ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣ ಗಮನಿಸಬೇಕಾದ ವಿಷಯವಾಗಿದೆ’’ ಎಂದಿದ್ದಾರೆ

ಅಣೆಕಟ್ಟುಗಳು ನಿರ್ಮಾಣಗೊಂಡ ನಂತರ ಅವುಗಳ ಬಾಳಿಕೆ ಹಾಗೂ ಸುರಕ್ಷತೆ ಬಗ್ಗೆ ಕೊಡಬೇಕಾದಷ್ಟು ಗಮನವನ್ನು ಕೊಡಲಿಲ್ಲವೇನೋ ಎಂಬ ಭಾವನೆ ಸಹಜವಾಗಿ ಮೂಡುತ್ತದೆ. ಈ ಅಣೆಕಟ್ಟುಗಳ ರಚನೆಯ ಸ್ವರೂಪ ಹಾಗೂ ಗೇಟುಗಳು ಹಳೆಯದಾಗಿವೆ. ಇದರಿಂದ ಸಹಜವಾಗಿ ಅಪಾಯವನ್ನು ಎದುರಿಸುತ್ತಿವೆ. ಇವುಗಳನ್ನು 50 ವರ್ಷ ಬಾಳಿಕೆ ಬರುವಂತೆ ನಿರ್ಮಿಸಲಾಗಿದೆ. ಹಾಗಾಗಿಯೇ 2024ರಲ್ಲಿ ತುಂಗಭದ್ರಾ ಅಣೆಕಟ್ಟಿನ ಸರಪಳಿಯ ಕೊಂಡಿ ತುಂಡು ತುಂಡಾಗಿ ಒಂದು ಕ್ರೆಸ್ಟ್ ಗೇಟ್ ಕೊಚ್ಚಿ ಹೋಯಿತು. ಅದು ಅಪಾಯದ ಮುನ್ಸೂಚನೆ ಅಂದರೆ ತಪ್ಪಿಲ್ಲ. ಅಲ್ಲಿ ಎಲ್ಲ ಗೇಟುಗಳನ್ನು ಹೊಸದಾಗಿ ಅಳವಡಿಸಬೇಕಾಗಿದೆ.

ಇನ್ನು ಎರಡನೇ ಅಪಾಯವೆಂದರೆ ವಿಪರೀತ ಹೂಳು ತುಂಬಿರುವ ಪರಿಣಾಮವಾಗಿ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಸಹಜವಾಗಿ ಕಡಿಮೆಯಾಗಿದೆ. ಇದರಿಂದಾಗಿ ಪ್ರವಾಹ ಹಾಗೂ ಅನಾವೃಷ್ಟಿಯನ್ನು ನಿರ್ವಹಿಸುವಲ್ಲಿ ಈ ಅಣೆಕಟ್ಟುಗಳ ಸಾಮರ್ಥ್ಯ ಕಡಿಮೆಯಾಗಿದೆ.

ಇದಲ್ಲದೆ ಈ ಅಣೆಕಟ್ಟುಗಳನ್ನು ನಿರ್ಮಿಸುವಾಗ ಯಾವ ಪ್ರಮಾಣದ ಮಳೆಯ ಲೆಕ್ಕಾಚಾರದಿಂದ ನಿರ್ಮಿಸಲಾಗಿತ್ತೋ ಆ ಪ್ರಮಾಣದಲ್ಲಿ ಈಗ ಸಾಕಷ್ಟು ಬದಲಾವಣೆಯಾಗಿದೆ. ಈಗಿನ ಅತಿವೃಷ್ಟಿ ಸದರಿ ಲೆಕ್ಕಾಚಾರವನ್ನು ಏರುಪೇರು ಮಾಡಿದೆ. ಇನ್ನೊಂದು ಮಹತ್ವದ ಅಂಶವೆಂದರೆ ಸೈಬರ್ ಭದ್ರತೆಯ ಸಮಸ್ಯೆ. ಡಿಜಿಟಲ್ ವ್ಯವಸ್ಥೆಯ ಮೂಲಕ ನಿಯಂತ್ರಿಸುವ ಉಪಕರಣಗಳನ್ನು ಸ್ವಯಂ ಚಾಲಿತ ಗೇಟುಗಳಿಗೆ ಅಳವಡಿಸಿದಂತೆಲ್ಲ ತಾಂತ್ರಿಕವಾಗಿ ನಡೆಯುವ, ನಡೆಸಬಹುದಾದ ವಿಧ್ವಂಸಕ ಕೃತ್ಯಗಳಿಗೆ ಗುರಿಯಾಗುವ ಅಪಾಯ ಇಲ್ಲದಿರುವುದಿಲ್ಲ. ಹಾಗಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಣೆಕಟ್ಟುಗಳ ಸುರಕ್ಷತೆಗಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯದ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.

ನದಿಪಾತ್ರಗಳ ರಕ್ಷಣೆಗಾಗಿ ಎಲ್ಲ ರಾಜ್ಯಗಳು ಒಂದುಗೂಡಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯ ನಮ್ಮ ಮುಂದಿದೆ.ಅಣೆಕಟ್ಟುಗಳ ಜಾಗಕ್ಕೆ ಸಂಬಂಧಿಸಿದ ವ್ಯಕ್ತಿ ಖುದ್ದಾಗಿ ಭೇಟಿ ನೀಡಿ ಸುರಕ್ಷತೆ ಬಗ್ಗೆ ಆಗಾಗ ತಪಾಸಣೆ ನಡೆಸುವುದಲ್ಲದೆ, ಡಿಜಿಟಲ್ ವ್ಯವಸ್ಥೆಯ ಮೂಲಕ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ನಿರಂತರವಾಗಿ ನಿಗಾ ಇರಿಸುವ ಕೆಲಸ ತುರ್ತಾಗಿ ಆಗಬೇಕಾಗಿದೆ.

ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಿಂದ ಅವುಗಳ ಮೇಲೆ ವ್ಯವಸ್ಥಿತ ನಿಗಾ ಇಡುವುದು ಅಗತ್ಯ. ಕಾಲಕಾಲಕ್ಕೆ ಅಣೆಕಟ್ಟುಗಳ ಆಧುನೀಕರಣ, ಹವಾಮಾನದ ವೈಪರೀತ್ಯಗಳಿಗೆ ಪೂರಕವಾಗುವ ರೀತಿಯಲ್ಲಿ ಅಣೆಕಟ್ಟುಗಳ ಮರು ವಿನ್ಯಾಸ, ಅಣೆಕಟ್ಟಿನ ಕೆಳಗಿನ ಪ್ರದೇಶಗಳಲ್ಲಿ ವಾಸ ಮಾಡುವ ಸಮುದಾಯಗಳ ಸುರಕ್ಷತೆಗಾಗಿ ವಿಶ್ವಾಸಾರ್ಹವಾದ ತುರ್ತು ಕ್ರಮಗಳು ಇವೆಲ್ಲವೂ ತಕ್ಷಣ ವಿಳಂಬವಿಲ್ಲದೆ ಮಾಡಬೇಕಾದ ಕೆಲಸಗಳು. ಇದು ಕೇವಲ ಯಾವುದೇ ರಾಜ್ಯಕ್ಕೆ ಸಂಬಂಧಿಸಿದ ಪ್ರಶ್ನೆ ಅಲ್ಲ. ದೇಶಾದ್ಯಂತ ಅಣೆಕಟ್ಟುಗಳ ತಪಾಸಣೆಯ ಮೂಲಕ ಈ ಕೆಲಸ ತುರ್ತಾಗಿ ಆರಂಭವಾಗಬೇಕಾಗಿದೆ.ಯಾವುದೇ ದುರಂತ ಸಂಭವಿಸಿದ ನಂತರ ಪೇಚಾಡುವಂತಾಗಬಾರದು.

ಅಣೆಕಟ್ಟುಗಳ ಸುರಕ್ಷತೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದುಗೂಡಿ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಅಣೆಕಟ್ಟುಗಳು ಹಳೆಯದಾದಂತೆಲ್ಲ ಅವುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಗಮನ ನೀಡಬೇಕಾಗಿದ್ದು ಸರಕಾರಗಳ ಮಾತ್ರವಲ್ಲ ಸಾರ್ವಜನಿಕರ ಹೊಣೆಗಾರಿಕೆಯೂ ಆಗಿದೆ ಎಂಬುದನ್ನು ಮರೆಯಬಾರದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X