Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ವನ್ಯಜೀವಿಗಳಿಗೆ ಬದುಕುವ ಹಕ್ಕಿಲ್ಲವೇ?

ವನ್ಯಜೀವಿಗಳಿಗೆ ಬದುಕುವ ಹಕ್ಕಿಲ್ಲವೇ?

ವಾರ್ತಾಭಾರತಿವಾರ್ತಾಭಾರತಿ13 Jan 2026 8:30 AM IST
share
ವನ್ಯಜೀವಿಗಳಿಗೆ ಬದುಕುವ ಹಕ್ಕಿಲ್ಲವೇ?

ರಾಜ್ಯದಲ್ಲಿ ಇತ್ತೀಚೆಗೆ ಹುಲಿ, ಆನೆ, ಚಿರತೆಗಳು ಜನವಸತಿ ಪ್ರದೇಶಗಳಿಗೆ ಬಂದು ಕುರಿ, ಕೋಳಿಗಳನ್ನು ತಿನ್ನುತ್ತಿರುವ, ಕೆಲವು ಕಡೆ ಜನರ ಮೇಲೂ ದಾಳಿ ಮಾಡುತ್ತಿರುವ ಘಟನೆಗಳು ವರದಿಯಾಗುತ್ತಲೇ ಇವೆ. ವನ್ಯಜೀವಿಗಳು ಹಾಗೂ ಮನುಷ್ಯರ ಸಂಘರ್ಷ ಈಗ ಸಾಮಾನ್ಯ ಸಂಗತಿಯಾಗಿದೆ. ಇತ್ತೀಚೆಗೆ ಹುಬ್ಬಳ್ಳಿಯ ಗೋಕುಲ ರಸ್ತೆಯ ವಿಮಾನ ನಿಲ್ದಾಣದ ಆವರಣದಲ್ಲಿ ರಾತ್ರಿ ಚಿರತೆ ಕಾಣಿಸಿಕೊಂಡ ದೃಶ್ಯ ಕ್ಯಾಮರಾ ಸೆರೆ ಹಿಡಿದು ಆತಂಕವನ್ನು ಉಂಟು ಮಾಡಿತ್ತು. ಬಿಳಿಗಿರಿ ರಂಗನ ಬೆಟ್ಟದಲ್ಲಿ ಹುಲಿಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾಗಿದೆ. ಆನೆಗಳು ಆಗಾಗ ಹಾಸನ ಜಿಲ್ಲೆಯ ಕೆಲವೆಡೆ ಕಾಣಿಸಿಕೊಂಡು ಕೆಲವರ ಮೇಲೆ ದಾಳಿ ಮಾಡಿದ ಘಟನೆಗಳು ಸಾಮಾನ್ಯವಾಗಿ ವರದಿಯಾಗುತ್ತಿವೆ. ಇದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಇದಕ್ಕೆ ಕಾರಣವನ್ನು ಹುಡುಕಲು ಹೊರಟರೆ ಹಲವಾರು ವಾಸ್ತವ ಸಂಗತಿಗಳು ಬೆಳಕಿಗೆ ಬರುತ್ತವೆ. ಶತಮಾನಗಳಿಂದ ನಾಡಿನಲ್ಲಿರುವ ಮನುಷ್ಯರು ಹಾಗೂ ಕಾಡಿನಲ್ಲಿರುವ ಪ್ರಾಣಿಗಳು ಸಹಬಾಳ್ವೆ ನಡೆಸಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದಷ್ಟೇ ಅಲ್ಲ. ಅರಣ್ಯ ಪ್ರದೇಶಗಳಲ್ಲಿ ಬದುಕು ಕಟ್ಟಿಕೊಂಡ ಜನರಿಗೂ ಹಾಗೂ ಪ್ರಾಣಿಗಳಿಗೂ ಸಂಘರ್ಷ ನಡೆದ ಉದಾಹರಣೆಗಳು ತುಂಬಾ ವಿರಳ. ಆದರೆ ಇತ್ತೀಚಿನ ವರ್ಷಗಳಲ್ಲಿ ವನ್ಯಜೀವಿಗಳು ಹಾಗೂ ಮನುಷ್ಯರ ನಡುವೆ ಯಾಕೆ ಸಂಘರ್ಷ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ. ಈ ಪ್ರಶ್ನೆಗೆ ಉತ್ತರ ಕಂಡುಕೊಂಡರೆ ಪರಿಹಾರದ ದಾರಿ ಗೋಚರಿಸಬಹುದು.

ವನ್ಯಜೀವಿಗಳ ಜೊತೆಗೆ ಮಾನವನ ಸಂಘರ್ಷದ ಮೂಲವನ್ನು ಕಂಡು ಹಿಡಿಯಲು ಹೊರಟರೆ ಆರೋಪಿಯ ಸಾಲಿನಲ್ಲಿ ಮನುಷ್ಯರೇ ಮೊದಲು ನಿಲ್ಲಬೇಕಾಗುತ್ತದೆ. ಈ ಭೂಮಿ ಮನುಷ್ಯರಿಗೆ ಮಾತ್ರವಲ್ಲ ವಿವಿಧ ಪ್ರಾಣಿಗಳಿಗೂ ಆಸರೆ ನೀಡಿದೆ. ಲಕ್ಷೋಪಲಕ್ಷ ಜೀವ ಜಂತುಗಳು ಇಲ್ಲಿವೆ. ಅವುಗಳಿಂದ ಪರಿಸರಕ್ಕೆ ಯಾವುದೇ ಹಾನಿಯಾಗಿಲ್ಲ. ಸಹ ಜೀವಿಗಳನ್ನು ಅವುಗಳು ದ್ವೇಷಿಸಿಲ್ಲ. ಆದರೆ ಮನುಷ್ಯನ ಸಂಪತ್ತಿನ ದಾಹ ಇಂದಿನ ಈ ಸ್ಥಿತಿಗೆ ಕಾರಣವಾಗಿದೆ. ತಾನು ವಾಸಿಸುವ ಪ್ರದೇಶಕ್ಕೆ ತೃಪ್ತನಾಗದೆ, ಪ್ರಾಣಿಗಳು ವಾಸಿಸುವ ಪ್ರದೇಶಕ್ಕೆ ನುಗ್ಗಿ ಕೃಷಿ, ಮನೆ, ರೆಸಾರ್ಟ್, ಹೋಮ್ ಸ್ಟೇಗಳನ್ನು ಮಾಡಿಕೊಂಡ ಮನುಷ್ಯ ಅವುಗಳ ಸಹಜ ಜೀವನದ ಪ್ರದೇಶವನ್ನು ಆಕ್ರಮಿಸಿರುತ್ತಿರುವುದರಿಂದ ಈ ಘರ್ಷಣೆ ನಡೆಯುತ್ತಿದೆ. ಹುಲಿಗಳಿಗೆ ಅವುಗಳದೇ ಆದ ನಿರ್ದಿಷ್ಟ ಪ್ರದೇಶವಿದೆ. ಆನೆಗಳು ಓಡಾಡಲು ಅವುಗಳದೇ ಆದ ನಿಸರ್ಗ ಸಹಜ ಕಾರಿಡಾರುಗಳಿವೆ. ಈಗ ಇವೆಲ್ಲವನ್ನೂ ಆಕ್ರಮಿಸಿಕೊಂಡ ಮನುಷ್ಯ ಅವುಗಳ ಸಹಜ ಬದುಕಿಗೆ, ನೆಮ್ಮದಿಗೆ ಧಕ್ಕೆ ಉಂಟು ಮಾಡಿದ್ದಾನೆ. ಹೀಗಾಗಿ ಈ ಪ್ರಾಣಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷ ನಿತ್ಯದ ಸಂಗತಿಯಾಗಿದೆ. ನಾವು ಇಂಥ ಪ್ರಶ್ನೆಗಳು ಎದುರಾದಾಗ ಮನುಷ್ಯ ಕೇಂದ್ರಿತ ಪರಿಕಲ್ಪನೆಯ ದೃಷ್ಟಿಯಿಂದ ನೋಡುತ್ತೇವೆ. ಆದರೆ ಜೀವ ಕೇಂದ್ರಿತ ದೃಷ್ಟಿಯಿಂದ ಪರಿಹಾರವನ್ನು ಹುಡುಕಲು ಹೊರಟರೆ ದಾರಿ ಕಾಣಬಹುದು.

ವನ್ಯಜೀವಿಗಳು ನಾಡಿನ ಜನವಸತಿ ಪ್ರದೇಶಗಳಿಗೆ ಬರುವ ಸಮಸ್ಯೆಗೆ ಇನ್ನೊಂದು ಕಾರಣವೂ ಇದೆ. ಕಾಡಿನಲ್ಲಿ ಅವುಗಳಿಗೆ ಸಾಕಾಗುವಷ್ಟು ಆಹಾರ ಹಾಗೂ ನೀರು ಸಿಗುತ್ತಿಲ್ಲ. ಹೀಗಾಗಿ ಅವುಗಳು ಆಹಾರ ಮತ್ತು ನೀರಿಗಾಗಿ ಜನ ವಸತಿ ಪ್ರದೇಶಗಳಿಗೆ ನುಗ್ಗುತ್ತವೆ. ಜಾಗತೀಕರಣದ ಶಕೆ ಆರಂಭವಾದ ನಂತರ ಮನುಷ್ಯರ ಅಭಿವೃದ್ಧಿಯ ಹೆಸರಿನ ನಾನಾ ಚಟುವಟಿಕೆಗಳು ನಿಧಾನವಾಗಿ ಕಾಡನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸುತ್ತಿವೆ. ಭೂಗರ್ಭವನ್ನು ಭೇದಿಸಿ ಗಣಿಗಾರಿಕೆ ಮಾಡಿ ಕೋಟ್ಯಂತರ ರೂಪಾಯಿ ಮೊತ್ತದ ಖನಿಜ ಸಂಪತ್ತನ್ನು ದೋಚುವ ಲೂಟಿಕೋರರು ನಮ್ಮ ಶಾಸನ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದನವನ್ನು ತಮ್ಮ ಹಿತಾಸಕ್ತಿಗಳಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮನುಷ್ಯರಂತೆ ವನ್ಯ ಜೀವಿಗಳಿಗೆ ಶಾಸನ ಸಭೆಗಳಲ್ಲಿ ಪ್ರತಿನಿಧಿಗಳಿಲ್ಲ. ಅವುಗಳ ಪರವಾಗಿ ವಾದಿಸುವವರಿಲ್ಲ. ಹೀಗಾಗಿ ಪ್ರಾಣಿಗಳನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗುತ್ತಿದೆ.

ಮನುಷ್ಯರು ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷವನ್ನು ತಪ್ಪಿಸಲು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಇತ್ತೀಚೆಗೆ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ವನ್ಯಜೀವಿಗಳ ಚಟುವಟಿಕೆಗಳನ್ನು ಗಮನಿಸಲು ಅರಣ್ಯದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ಎಐ ಕ್ಯಾಮರಾ ಹಾಗೂ ಕ್ಯಾಮರಾ ಟ್ರ್ಯಾಪ್ ಅಳವಡಿಸಿ ನಿಗಾ ವಹಿಸಲಾಗುತ್ತಿದೆ. ಕಾಡಂಚಿನ ಗ್ರಾಮಗಳಲ್ಲಿ ತಾತ್ಕಾಲಿಕ ಶಿಬಿರಗಳನ್ನು ನಿರ್ಮಿಸಿ ಗಡಿ ಪ್ರದೇಶದಲ್ಲಿ ಗಸ್ತು ನಡೆಸುವುದು ಕೂಡ ಅರಣ್ಯ ಇಲಾಖೆಯ ಉಪಕ್ರಮವಾಗಿದೆ.

ವನ್ಯಜೀವಿಗಳ ಇರುವಿಕೆಯ ಬಗ್ಗೆ ಸ್ಥಳೀಯ ನಾಗರಿಕರಿಗೆ ಮುನ್ನೆಚ್ಚರಿಕೆ ನೀಡುವುದು, ಪ್ರಾಣಿಗಳ ಧ್ವನಿಯನ್ನು ಗುರುತಿಸಿ ಅವುಗಳಂತೆ ಸದ್ದು ಮಾಡಿ ವಾಪಸ್ ಅರಣ್ಯಕ್ಕೆ ಓಡಿಸುವುದು ಇದರ ಉದ್ದೇಶವಾಗಿದೆ.

ಆದರೆ ಇದಿಷ್ಟರಿಂದಲೇ ಈ ಸಮಸ್ಯೆ ನಿವಾರಣೆಯಾಗುವುದಿಲ್ಲ. ಈ ಎಲ್ಲ ಕ್ರಮಗಳ ಜೊತೆಗೆ ವನ್ಯಜೀವಿಗಳ ಆವಾಸ ಸ್ಥಾನವನ್ನು ಅಭಿವೃದ್ಧಿಪಡಿಸಬೇಕಾಗಿದೆ.ಕಾಡಿನಲ್ಲಿ ನೀರಿನ ಕೊರತೆಯನ್ನು ನಿವಾರಿಸಲು ಕಾಡಿನ ಒಳಗೆ ಹಲವಾರು ಕಡೆ ಕೆರೆಗಳನ್ನು ನಿರ್ಮಾಣ ಮಾಡಲು ತುರ್ತಾಗಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಆದರೆ ಅರಣ್ಯದಲ್ಲಿ ಹಲವಾರು ವರ್ಷಗಳಿಂದ ಬದುಕನ್ನು ಕಟ್ಟಿಕೊಂಡಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಅರಣ್ಯ ಇಲಾಖೆಯ ಯೋಜನೆ ಅಷ್ಟೊಂದು ಪ್ರಯೋಜನಕಾರಿಯಾದುದಲ್ಲ. ಕಾಡಿನಲ್ಲೇ ಜನಿಸಿ, ಅಲ್ಲೇ ಬದುಕನ್ನು ಕಟ್ಟಿಕೊಂಡ ಜನರನ್ನು ಬಲವಂತವಾಗಿ ಹೊರಗೆ ಹಾಕಿದರೆ ಅವರು ಬೇರೆಡೆಗೆ ಹೋಗಿ ಬದುಕನ್ನು ಕಟ್ಟಿಕೊಳ್ಳುವುದು ಸುಲಭದ ಸಂಗತಿಯಲ್ಲ. ಸರಕಾರ ಕೊಡಬಹುದಾದ ಪರಿಹಾರ ಅವರಿಗೆ ನೆಮ್ಮದಿ ತರುವುದಿಲ್ಲ. ಅದರ ಬದಲಿಗೆ ಅರಣ್ಯ ಪ್ರದೇಶದಲ್ಲೇ ಅವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ.

ಈ ಭೂಮಿ ಕೇವಲ ಮನುಷ್ಯರಿಗೆ ಸೇರಿದ್ದಲ್ಲ. ಇದರ ಮೇಲೆ ಆನೆ, ಹುಲಿ, ಚಿರತೆಗಳು ಸೇರಿ ಸಕಲ ಪ್ರಾಣಿ, ಪಕ್ಷಿಗಳಿಗೂ ಹಕ್ಕಿದೆ ಎಂಬುದನ್ನು ಮರೆಯಬಾರದು. ಪ್ರಾಣಿಗಳ ಬದುಕುವ ಹಕ್ಕನ್ನು ಕಸಿದುಕೊಳ್ಳುವುದು ಸರಿಯಲ್ಲ. ಕಾರಣ ಈ ಸಮಸ್ಯೆಗೆ ಮಾನವೀಯ ಪರಿಹಾರೋಪಾಯಗಳನ್ನು ರೂಪಿಸಬೇಕಾಗಿದೆ.

ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮದ ಹೆಸರಿನ ವಿನಾಶಕಾರಿ ಕಾರ್ಯಗಳಿಂದಾಗಿ ಪ್ರಾಣಿ ಪಕ್ಷಿಗಳಿಗೆ ಮಾತ್ರವಲ್ಲ ಸಕಲ ಜೀವಿಗಳಿಗೂ ಭೂಮಿ ಅಸಹನೀಯವಾಗತೊಡಗಿದೆ. ಕಾಡಿನಲ್ಲಿ ಇರುವವರನ್ನು ಅಲ್ಲಿಂದ ಎತ್ತಂಗಡಿ ಮಾಡಿಸದೆ ಅವರನ್ನೂ ಒಳಗೊಂಡು ಈ ಅತ್ಯಂತ ಜಟಿಲ ಹಾಗೂ ಸೂಕ್ಷ್ಮ ಪ್ರಶ್ನೆಯನ್ನು ವೈಜ್ಞಾನಿಕವಾಗಿ ಪರಿಹರಿಸುವ ದಿಕ್ಕಿನಲ್ಲಿ ಚಿಂತನೆ ನಡೆಯಬೇಕಾಗಿದೆ. ಇನ್ನೊಂದೆಡೆ ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಇನ್ನೊಂದು ಸಮಸ್ಯೆಗೆ ದಾರಿ ಮಾಡಿಕೊಟ್ಟಂತಾಗಿದೆ. ಇಂಥ ಸಂದರ್ಭಗಳಲ್ಲಿ ಹೆಚ್ಚಾಗಿರುವ ಹುಲಿಗಳನ್ನು ಬೇರೆ ಪ್ರದೇಶಗಳಿಗೆ, ರಾಜ್ಯಗಳಿಗೆ ಸ್ಥಳಾಂತರ ಮಾಡುವುದು ಸೂಕ್ತವಾದ ಕ್ರಮವಾಗಿದೆ. ಈ ನಿಟ್ಟಿನಲ್ಲಿ ಸರಕಾರ ಯೋಚಿಸಬೇಕಾಗಿದೆ.

ನಮ್ಮ ಅರಣ್ಯ ಪ್ರದೇಶಗಳನ್ನು ರೆಸಾರ್ಟ್, ಹೋಮ್ ಸ್ಟೇ, ಅಕ್ರಮ ಗಣಿಗಾರಿಕೆ ಹಾಗೂ ಇತರ ಚಟುವಟಿಕೆಗಳಿಂದ ಮುಕ್ತಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೆಡೆ ಸಫಾರಿಯನ್ನು ಸ್ಥಗಿತಗೊಳಿಸಿರುವುದು ಸೂಕ್ತ ಕ್ರಮವಾಗಿದೆ. ವನ್ಯಜೀವಿಗಳು ಅವುಗಳಷ್ಟಕ್ಕೆ ಬದುಕಲು ಸರಕಾರ ಅವಕಾಶ ನೀಡಲಿ.

Tags

Wildlife
share
ವಾರ್ತಾಭಾರತಿ
ವಾರ್ತಾಭಾರತಿ
Next Story
X