Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಚುನಾವಣಾ ಆಯೋಗದ ಹೊಣೆಗೇಡಿತನ; ಸುಪ್ರೀಂ...

ಚುನಾವಣಾ ಆಯೋಗದ ಹೊಣೆಗೇಡಿತನ; ಸುಪ್ರೀಂ ಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ20 Oct 2026 8:58 AM IST
share
ಚುನಾವಣಾ ಆಯೋಗದ ಹೊಣೆಗೇಡಿತನ; ಸುಪ್ರೀಂ ಕೋರ್ಟ್ ತರಾಟೆ

ದೇಶದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳನ್ನು ನಡೆಸುವ ಹೊಣೆಗಾರಿಕೆಯನ್ನು ಹೊಂದಿರುವ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗ ದಿನದಿಂದ ದಿನಕ್ಕೆ ತನ್ನ ನಂಬಿಕೆಯನ್ನು ಕಳೆದುಕೊಳ್ಳುತ್ತಿದೆ.ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಕ್ರಿಯೆಯ ಹೆಸರಿನಲ್ಲಿ ಬಹುದೊಡ್ಡ ಸಂಖ್ಯೆಯ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಅದರ ಕಾರ್ಯ ವೈಖರಿ ಈಗಾಗಲೇ ಸಾಕಷ್ಟು ವಿವಾದ ಮತ್ತು ವಿರೋಧಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಈಗ ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ ವೀಡಿಯೊ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲು ಅದು ವಿಫಲವಾಗಿದೆ. ಇದು ಸಾಮಾನ್ಯ ವೈಫಲ್ಯವಲ್ಲ. ಇದರಿಂದ ಚುನಾವಣಾ ಆಯೋಗದ ಕಾರ್ಯ ದಕ್ಷತೆ, ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯ ಬಗ್ಗೆ ಹಲವಾರು ಪ್ರಶ್ನೆಗಳು ಸಹಜವಾಗಿ ಉದ್ಭವಿಸುತ್ತವೆ. ಸಾರ್ವಜನಿಕರು ಆಯೋಗದ ಬಗ್ಗೆ ಸಂಶಯದಿಂದ ನೋಡುವಂತಾಗಿದೆ.

ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ ಅವರನ್ನು 201 ಮತಗಳ ಅಂತರದಿಂದ ಸೋಲಿಸಿದ್ದರು. ಇದನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಜೀವರಾಜ ಅವರು ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸದರಿ ಮತಕ್ಷೇತ್ರದಲ್ಲಿ ಅಂಚೆಯಲ್ಲಿ ಬಂದ ಮತಗಳ ಮರುಎಣಿಕೆಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶದಂತೆ ಕಳೆದ ಮೇ ತಿಂಗಳಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಫಲಿತಾಂಶ ಬದಲಾಗಿತ್ತು. 52 ಮತಗಳ ಅಂತರದಿಂದ ಜೀವರಾಜ ಅವರ ಗೆಲುವನ್ನು ಘೋಷಿಸಲಾಗಿತ್ತು. ಆದರೆ ಆ ಫಲಿತಾಂಶವನ್ನು ರಾಜೇಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಮೂಲ ಮತ ಎಣಿಕೆಯ ಸಂದರ್ಭದಲ್ಲಿ ಅಮಾನ್ಯ ಎಂದು ಘೋಷಿಸಲಾಗಿದ್ದ 1,251 ಮತಗಳನ್ನು ಮರು ಪರಿಶೀಲನೆ ಮಾಡುವ ಮೂಲಕ ಚುನಾವಣಾಧಿಕಾರಿ ನ್ಯಾಯಾಲಯದ ನಿರ್ದೇಶನದ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ವಾದಿಸಿದ್ದರು. ಈ ಪ್ರಕರಣದಲ್ಲಿ ಅಂತಿಮ ತೀರ್ಪು ಪ್ರಕಟಗೊಳ್ಳುವವರೆಗೂ ರಾಜೇಗೌಡರು ಶಾಸಕರಾಗಿ ಮುಂದುವರಿಯಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿ ಕೊಟ್ಟಿದೆ.

ಶೃಂಗೇರಿ ಮತಕ್ಷೇತ್ರದಲ್ಲಿ ಮೂಲ ಮತ ಎಣಿಕೆ ಸಂದರ್ಭದಲ್ಲಿ ಏನಾಯಿತು ಎಂಬುದನ್ನು ತಿಳಿಯಲು ವೀಡಿಯೊ ದೃಶ್ಯಗಳು ನೆರವಿಗೆ ಬರುವುದರಿಂದ ಅವುಗಳನ್ನು ಒದಗಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಆದರೆ ವೀಡಿಯೊ ಸೇರಿದಂತೆ ಸಂಬಂಧಿಸಿದ ದಾಖಲೆಗಳು ತನ್ನ ಬಳಿ ಇಲ್ಲ ಚುನಾವಣಾ ಆಯೋಗ ಹೊಣೆ ಜಾರಿಸಿಕೊಂಡಿತು. ಈ ಹೊಣೆಗೇಡಿತನವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ‘‘ಚುನಾವಣೆ ನಡೆಸುವ ಸಂಸ್ಥೆಯೇ ತನ್ನ ದಾಖಲೆಗಳನ್ನು ಕಳೆದುಕೊಳ್ಳಲು ಹೇಗೆ ಸಾಧ್ಯ?’’ ಎಂದು ಪ್ರಶ್ನಿಸಿ ಇಂಥ ನೆಪಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿ ಆಯೋಗದ ವಿವರಣೆಯನ್ನು ತಿರಸ್ಕರಿಸಿದೆ.

ವಾಸ್ತವವಾಗಿ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಫಲಿತಾಂಶ ಪ್ರಕಟಗೊಂಡ 45 ದಿನಗಳ ವರೆಗೆ ಮತ ಎಣಿಕೆಗೆ ಸಂಬಂಧಿಸಿದ ವೀಡಿಯೊ ಮತ್ತು ಸಿಸಿಟಿವಿ ದಾಖಲೆಗಳನ್ನು ಸಂರಕ್ಷಿಸಬೇಕಾಗುತ್ತದೆ. ಚುನಾವಣಾ ಅರ್ಜಿ ಹಾಗೂ ಅದಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ಬಾಕಿ ಇದ್ದಾಗ ವಿವಾದ ಇತ್ಯರ್ಥಗೊಳ್ಳುವವರೆಗೂ ಸಂಬಂಧಿಸಿದ ದಾಖಲೆಗಳನ್ನು ಉಳಿಸಿಕೊಳ್ಳುವುದು ಕಡ್ಡಾಯವಾಗಿದೆ. ಚುನಾವಣಾ ವಿವಾದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ವೀಡಿಯೊ ದಾಖಲೆಗಳನ್ನು ಸಂರಕ್ಷಿಸಿಕೊಳ್ಳುವಲ್ಲಿ ವಿಫಲವಾಗಿರುವುದು ಚುನಾವಣಾ ಆಯೋಗದ ಗಂಭೀರ ನಿರ್ಲಕ್ಷ್ಯ ಹಾಗೂ ಸುರಕ್ಷತಾ ವ್ಯವಸ್ಥೆಯ ಸಂಪೂರ್ಣ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಚುನಾವಣಾ ಆಯೋಗ ತನ್ನ ನಿರ್ಲಕ್ಷ್ಯವನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಚುನಾವಣಾ ಆಯೋಗ ವೀಡಿಯೊ ದೃಶ್ಯಾವಳಿಗಳನ್ನು ಒದಗಿಸದೇ ಹೋದಲ್ಲಿ ಪ್ರತಿಕೂಲ ತೀರ್ಮಾನಕ್ಕೆ ಬರಬೇಕಾಗುವುದೆಂದು ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ ಸೂಕ್ತವಾಗಿದೆ. ಆದರೆ ಎಚ್ಚರಿಕೆ ನೀಡಿದ ಮಾತ್ರಕ್ಕೆ ಸಾಂಸ್ಥಿಕ ವೈಫಲ್ಯಕ್ಕೆ ಪರಿಹಾರ ದೊರೆಯುವುದಿಲ್ಲ. ವೀಡಿಯೊ ದಾಖಲೆ ಹೇಗೆ ನಾಪತ್ತೆಯಾಯಿತು ಎಂಬುದನ್ನು ಪತ್ತೆ ಹಚ್ಚುವುದರ ಜೊತೆಗೆ ಆ ದಾಖಲೆಗಳನ್ನು ಸಂರಕ್ಷಿಸುವ ಹೊಣೆ ಹೊತ್ತಿದ್ದ ಅಧಿಕಾರಿಗಳನ್ನು ಗುರುತಿಸಿ ಅಂಥವರ ವಿರುದ್ಧ ಕಠಿಣ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಹೊಣೆ ಹೊತ್ತಿರುವ ಸಂಸ್ಥೆಯಿಂದ ಇಂಥ ಅಪಚಾರವಾಗಬಾರದು.

ಚುನಾವಣಾ ಆಯೋಗದ ಈ ಹೊಣೆಗೇಡಿತನ ಆಡಳಿತಾತ್ಮಕ ಲೋಪ ಮಾತ್ರವಲ್ಲ, ಇದು ಇಡೀ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಸಂಬಂಧಿಸಿದ ಪ್ರಶ್ನೆಯಾಗಿದೆ. ಸ್ವಾತಂತ್ರ್ಯಾನಂತರ ಸ್ವಾಯತ್ತ ಸಂಸ್ಥೆಯಾದ ಚುನಾವಣಾ ಆಯೋಗ ಹಿಂದೆಂದೂ ಇಂಥ ಅಪಖ್ಯಾತಿಗೆ ಗುರಿಯಾಗಿರಲಿಲ್ಲ. ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಪ್ರಮುಖ ಪ್ರತಿಪಕ್ಷ ಗಳು, ಜನಪರ ಸಂಘಟನೆಗಳು ಆಗ್ರಹಿಸುತ್ತಿರುವುದು ಸೂಕ್ತವಾಗಿದೆ.

ದೇಶದ ಚುನಾವಣಾ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಆರೋಪವಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಈಗ ಉಳಿದ ಏಕೈಕ ಮಾರ್ಗವೆಂದರೆ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿದೆ. ಚುನಾವಣಾ ಆಯೋಗಕ್ಕೆ ಅಂಟಿಕೊಂಡ ಮಸಿ ಅಳಿಸಿ ಹೋಗಬೇಕಾದರೆ ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಲೇಬೇಕು. ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಯ ಜೊತೆಗೆ ಚುನಾವಣಾ ಆಯೋಗವನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X