Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಕುಮಾರಸ್ವಾಮಿ-ಮೋದಿ ಭೇಟಿ: ರಾಜ್ಯ ಬಿಜೆಪಿ...

ಕುಮಾರಸ್ವಾಮಿ-ಮೋದಿ ಭೇಟಿ: ರಾಜ್ಯ ಬಿಜೆಪಿ ನಾಯಕರ ಪ್ರಾಣ ಸಂಕಟ

ವಾರ್ತಾಭಾರತಿವಾರ್ತಾಭಾರತಿ18 July 2023 12:15 AM IST
share
ಕುಮಾರಸ್ವಾಮಿ-ಮೋದಿ ಭೇಟಿ: ರಾಜ್ಯ ಬಿಜೆಪಿ ನಾಯಕರ ಪ್ರಾಣ ಸಂಕಟ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಂದು ಎರಡು ತಿಂಗಳಾದರೂ ವಿರೋಧ ಪಕ್ಷದ ನಾಯಕನಿಲ್ಲದೆ ಬಿಜೆಪಿ ಶಾಸಕರು ಅತಂತ್ರ ಸ್ಥಿತಿಯಲ್ಲಿ ಇದ್ದರೆ ಇನ್ನೊಂದೆಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ನೇರವಾಗಿ ದಿಲ್ಲಿಗೆ ಕರೆಸಿಕೊಂಡು ರಹಸ್ಯ ಮಾತುಕತೆ ನಡೆಸಿದ್ದನ್ನು ನೋಡಿದರೆ ರಾಜ್ಯ ಬಿಜೆಪಿ ನಾಯಕರ ಬಗ್ಗೆ ಬಿಜೆಪಿ ವರಿಷ್ಠರಿಗೆ ನಂಬಿಕೆ ಇಲ್ಲವೆಂಬುದು ಸ್ಪಷ್ಟವಾಗುತ್ತದೆ. ಇಂಥ ಮಾತುಕತೆ ನಡೆದ ಬಗ್ಗೆ ರಾಜ್ಯದ ಬಿಜೆಪಿ ನಾಯಕರಿಗೆ ಖಚಿತ ಮಾಹಿತಿ ಇದ್ದಂತಿಲ್ಲ. ಮೈತ್ರಿಯ ಬಗ್ಗೆ ಮೇಲ್ಮಟ್ಟದಲ್ಲಿ ಚರ್ಚೆಯಾಗಿದ್ದರೆ ಅದರ ಬಗ್ಗೆ ತಮಗೆ ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಬಹಿರಂಗವಾಗಿ ಹೇಳಿರುವುದನ್ನು ಗಮನಿಸಿದರೆ ಒಳಗೊಳಗೆ ಏನೋ ನಡೆದಂತೆ ಕಾಣುತ್ತದೆ. ಇದರ ಮಾಹಿತಿ ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಸೇರಿದಂತೆ ರಾಜ್ಯ ಬಿಜೆಪಿಯ ಯಾವ ನಾಯಕರಿಗೂ ಇದ್ದಂತಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಪಕ್ಷದೊಳಗೆ ತಮ್ಮನ್ನು ಲೆಕ್ಕಕ್ಕೆ ಹಿಡಿದಿಲ್ಲದಿದ್ದರೂ ಬಹಿರಂಗವಾಗಿ ಮುಜುಗರವಾಗಬಾರದೆಂದು ಬಸವರಾಜ ಬೊಮ್ಮಾಯಿ ಮತ್ತು ಇತರ ನಾಯಕರು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಮತ್ತು ವಿರೋಧ ಪಕ್ಷಗಳ ನಾಯಕರ ಬೆಂಗಳೂರು ಸಭೆಯನ್ನು ಟೀಕಿಸುತ್ತಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಟೀಕಿಸುತ್ತಾ ಪ್ರಾದೇಶಿಕ ಪಕ್ಷಗಳ ಅಗತ್ಯದ ಬಗ್ಗೆ ಪ್ರತಿಪಾದಿಸುತ್ತಿದ್ದ ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಸಾಧನೆ ನಂತರ ಬಿಜೆಪಿಗೆ ಶರಣಾಗುವ ಸೂಚನೆಗಳನ್ನು ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ಶಾ ಅವರಿಗೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲಾಗದ ರಾಜ್ಯ ಬಿಜೆಪಿ ನಾಯಕರ ಸಾಮರ್ಥ್ಯದ ಬಗ್ಗೆ ನಂಬಿಕೆ ಹೊರಟು ಹೋಗಿದೆ. ಅಂತಲೇ ಜಾತ್ಯತೀತ ಎಂದು ಹೇಳಿಕೊಳ್ಳುವ ಜನತಾಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಿಕೊಂಡೋ ಇಲ್ಲವೇ ಎನ್‌ಡಿಎ ಮೈತ್ರಿ ಕೂಟದಲ್ಲಿ ಸೇರಿಸಿಕೊಂಡೋ ಕುಮಾರಸ್ವಾಮಿ ಅವರಿಗೆ ವಿರೋಧ ಪಕ್ಷದ ನಾಯಕನ ಪಟ್ಟ ಕಟ್ಟಲು ಒಳಗೊಳಗೆ ತಯಾರಿ ನಡೆಸಿದಂತೆ ಕಾಣುತ್ತದೆ. ಇದರಿಂದಾಗಿ ರಾಜ್ಯ ಬಿಜೆಪಿ ನಾಯಕರ ಭವಿಷ್ಯ ಡೋಲಾಯಮಾನವಾದಂತಾಗಿದೆ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಯಾವ ಪಕ್ಷವೂ ಸುರಕ್ಷಿತವಾಗಿ ಉಳಿದಿಲ್ಲ. ಹಿಂದೆ ಜೆಪಿ ಚಳವಳಿಯ ಕಾಲದಲ್ಲಿ ಕಾಂಗ್ರೆಸ್ ವಿರುದ್ಧ ಒಂದೇ ಪಕ್ಷ ಎಂದು ತಂತ್ರ ರೂಪಿಸಿ ರಾಮ ಮನೋಹರ ಲೋಹಿಯಾ ಅವರ ಸೋಷಲಿಸ್ಟ್ ಪಕ್ಷವನ್ನು ಮತ್ತು ರಾಜಾಜಿ ಅವರ ಸ್ವತಂತ್ರ ಪಕ್ಷವನ್ನು ಆಪೋಶನ ಮಾಡಿಕೊಂಡ ಸಂಘ ಪರಿವಾರದ ನಡೆ ದೇವೇಗೌಡರಿಗೆ ಗೊತ್ತಿಲ್ಲವೆಂದಲ್ಲ. ಆದರೂ ಬಿಜೆಪಿ ಜೊತೆ ಮೈತ್ರಿಯ ಅಪಾಯಕಾರಿ ಆಟವನ್ನು ಆಡುತ್ತಿದ್ದಾರೆ. ತೀರಾ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಮಿತ್ರಪಕ್ಷವಾದ ಶಿವಸೇನೆಯನ್ನು ಇಬ್ಭಾಗ ಮಾಡಿದವರು ಯಾರೆಂದು ಜೆಡಿಎಸ್ ನಾಯಕರಿಗೆ ಗೊತ್ತಿಲ್ಲವೆಂದಲ್ಲ. ಆದರೂ ಕುಮಾರಸ್ವಾಮಿ ಅವರಂಥ ಸ್ವಹಿತಾಸಕ್ತ ನಾಯಕರಿಂದಾಗಿ ಜೆಡಿಎಸ್ ಕೂಡ ಅವಸಾನದ ಅಂಚಿಗೆ ಬಂದು ನಿಂತಿದೆ.

ರಾಜ್ಯ ಬಿಜೆಪಿ ನಾಯಕರು ಏನೇ ಗೊಣಗಾಡಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದವರಿಗೆ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯನ್ನು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ಮೊದಲ ಆದ್ಯತೆಯಾಗಿದೆ.ಅದಕ್ಕಾಗಿ ತಮ್ಮ ಪಕ್ಷದ ಸ್ಥಳೀಯ ನಾಯಕರನ್ನು ಕಡೆಗಣಿಸಿ ಜೆಡಿಎಸ್‌ನಂಥ ಪ್ರಾದೇಶಿಕ ಪಕ್ಷಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳಲು ಅವರು ಕಾರ್ಯ ಯೋಜನೆಯನ್ನು ರೂಪಿಸಿದ್ದಾರೆ. ಇದಕ್ಕೆ ಮಹಾರಾಷ್ಟ್ರ ನಮ್ಮ ಕಣ್ಣ ಮುಂದಿನ ಉದಾಹರಣೆಯಾಗಿದೆ

ಅಲ್ಲಿ ಹಿಂದೆ ಮುಖ್ಯಮಂತ್ರಿಯಾಗಿದ್ದ ಫಡ್ನವೀಸ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿ ಶಿವಸೇನೆಯನ್ನು ಇಬ್ಭಾಗ ಮಾಡಿ ಬಂದ ಏಕನಾಥ್ ಶಿಂದೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಕರ್ನಾಟಕದಲ್ಲೂ ಅದೇ ಪ್ರಯೋಗ ನಡೆಯಲಿದೆ. ಆದರೆ ಕಾಂಗ್ರೆಸ್ ಶಾಸಕರು ಅವರ ಬಲೆಗೆ ಬೀಳಲಿಕ್ಕಿಲ್ಲ.ಹಾಗಾಗಿಯೇ ಜೆಡಿಎಸ್ ಪಕ್ಷವನ್ನು ಆಪೋಶನ ಮಾಡಿಕೊಳ್ಳುವ ಕಾರ್ಯತಂತ್ರ ರೂಪುಗೊಂಡಂತೆ ಕಾಣುತ್ತದೆ.

ಕುಮಾರಸ್ವಾಮಿ ಅವರೂ ತಮ್ಮನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೇರವಾಗಿ ಕರೆದು ಮಾತಾಡಿದ ನಂತರ; ಮೊದಲೇ ಅವರ ಮಾತು ಕೇಳಿದ್ದರೆ ಈಗ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂದು ಹೇಳಿದ್ದಾರೆ. ಇದರರ್ಥ ಚುನಾವಣೆಗೆ ಮುನ್ನವೇ ಬಿಜೆಪಿ ವರಿಷ್ಠರ ಜೊತೆಗೆ ಕುಮಾರಸ್ವಾಮಿ ರಹಸ್ಯ ಮಾತುಕತೆ ನಡೆಸಿದಂತೆ ಕಾಣುತ್ತದೆ. ಈಗ ಕುಮಾರಸ್ವಾಮಿ ಅವರು ಜಾತ್ಯತೀತ ಸಿದ್ಧಾಂತದ ಬಗೆಗೂ ಲಘುವಾಗಿ ಮಾತನಾಡಲು ಆರಂಭಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಕುಮಾರಸ್ವಾಮಿ ಅವರು ನೇಮಕವಾಗಬಹುದು. ಇದರಿಂದ ರಾಜ್ಯ ಬಿಜೆಪಿಯ ಅನೇಕ ನಾಯಕರ ಭವಿಷ್ಯಕ್ಕೆ ಕತ್ತಲು ಕವಿಯಲಿದೆ. ಹಾಗಾಗಿಯೇ ಅವರು ಗೊಣಗಾಟ ಆರಂಭಿಸಿದ್ದಾರೆ. ಜೆಡಿಎಸ್‌ನಲ್ಲೂ ಕುಮಾರಸ್ವಾಮಿ ಅವರ ನಿಲುವನ್ನು ಒಪ್ಪದಿರುವವರು ಇದ್ದಾರೆ.ಅದನ್ನು ಅವರು ಹೇಗೆ ನಿಭಾಯಿಸುತ್ತಾರೋ ಕಾದು ನೋಡಬೇಕು.

ಒಂದುವೇಳೆ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ವರಿಷ್ಠ ನಾಯಕರು ಮಣೆ ಹಾಕಿದರೆ ಅದರ ಪರಿಣಾಮ ಜೆಡಿಎಸ್‌ನ ಪರಂಪರಾಗತ ವೋಟ್ ಬ್ಯಾಂಕ್ ಮೇಲೆ ಮಾತ್ರವಲ್ಲ ಬಿಜೆಪಿಯ ಲಿಂಗಾಯತ ವೋಟ್‌ಬ್ಯಾಂಕ್ ಮೇಲೂ ಆಗಲಿದೆ. ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿಯವರಂತೆ ಅನೇಕ ಲಿಂಗಾಯತ ನಾಯಕರೂ ಬಿಜೆಪಿಯನ್ನು ತೊರೆದರೆ ಅಚ್ಚರಿಯಿಲ್ಲ. ಆದರೆ ಬಿಜೆಪಿ ವರಿಷ್ಠ ಮಂಡಲಿಯಲ್ಲಿ ಕರ್ನಾಟಕದ ಬಿಜೆಪಿ ನಾಯಕರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಗ್ಗೆ ರಾಜ್ಯದ ಬಿಜೆಪಿ ನಾಯಕರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪಕ್ಷದ ಅಧ್ಯಕ್ಷ ಕಟೀಲುರನ್ನು ದಿಲ್ಲಿಗೆ ಕರೆದು ಮಾತನಾಡುವ ಆಸಕ್ತಿಯನ್ನು, ಸೌಜನ್ಯವನ್ನು ಬಿಜೆಪಿ ವರಿಷ್ಠ ನಾಯಕರು ತೋರಿಸಿಲ್ಲ.

ರಾಜ್ಯದ ಬಿಜೆಪಿ ನಾಯಕರು ಈ ಅವಮಾನಗಳನ್ನೆಲ್ಲ ನುಂಗಿಕೊಂಡು ಸದನದಲ್ಲಿ ಮತ್ತು ಹೊರಗೆ ತಮ್ಮ ಮುಖ ಉಳಿಸಿಕೊಳ್ಳಲು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಟಾಚಾರದ ಟೀಕೆಗಳನ್ನು ಮಾಡುತ್ತಿದ್ದಾರೆ. ಬರಲಿರುವ ದಿನಗಳಲ್ಲಿ ರಾಜ್ಯ ರಾಜಕಾರಣಲ್ಲಿ ಮಹತ್ವದ ಬದಲಾವಣೆಗಳಾಗುವ ಎಲ್ಲಾ ಸೂಚನೆಗಳು ಕಂಡು ಬರುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X