Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರ ಕಡೆಗಣನೆ...

ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರ ಕಡೆಗಣನೆ ಅಕ್ಷಮ್ಯ

ವಾರ್ತಾಭಾರತಿವಾರ್ತಾಭಾರತಿ29 Oct 2026 8:10 AM IST
share
ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರ ಕಡೆಗಣನೆ ಅಕ್ಷಮ್ಯ

ಕರ್ನಾಟಕದ ರಾಜಧಾನಿ ಬೆಂಗಳೂರು ಮಹಾನಗರವನ್ನು ಕಾರ್ಯಕ್ಷೇತ್ರ ಮಾಡಿಕೊಂಡಿರುವ ಕೆಲವು ಕಂಪೆನಿಗಳು ಅದರಲ್ಲೂ ಐ.ಟಿ., ಬಿ.ಟಿ. ಕಂಪೆನಿಗಳು ಉದ್ಯೋಗ ನೀಡುವಲ್ಲಿ ಕನ್ನಡಿಗರನ್ನು ವ್ಯವಸ್ಥಿತವಾಗಿ ಕಡೆಗಣಿಸುತ್ತಿವೆ ಎಂಬ ಆರೋಪ ಚರ್ಚೆಗೆ ಕಾರಣವಾಗಿದೆ. ಈ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿದ್ದರೂ ಅದು ಖಂಡನಾರ್ಹ ಮತ್ತು ಅತ್ಯಂತ ಕಳವಳಕಾರಿ ವಿಚಾರ. ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವ, ಆಸಕ್ತಿ, ಹವ್ಯಾಸ, ಮಾತೃಭಾಷೆಯಂತಹ ವಿವಿಧ ಅಂಶಗಳನ್ನು ಒಳಗೊಂಡ ವೈಯಕ್ತಿಕ ವಿವರಗಳನ್ನು ಪೂರೈಸುವ ಅರ್ಜಿ ನಮೂನೆಯಲ್ಲಿ ಮಾತೃಭಾಷೆ ಕನ್ನಡ ಅಂತ ಇದ್ದರೆ ಅಂತಹ ಅಭ್ಯರ್ಥಿಗಳನ್ನು ನೌಕರಿಯಿಂದ ದೂರ ಇಡಲಾಗುತ್ತಿದೆ. ಸ್ಥಳೀಯರ ಬದಲಿಗೆ ಹೊರರಾಜ್ಯಗಳ ಅಭ್ಯರ್ಥಿಗಳಿಗೆ ಮಣೆ ಹಾಕಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಓರ್ವ ಯುವತಿ ಹಂಚಿಕೊಂಡಿರುವ ವೀಡಿಯೊ, ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರ ಹಿತ ಕಾಪಾಡುವ ದಿಸೆಯಲ್ಲಿ ರಾಜ್ಯ ಸರಕಾರ ಮಧ್ಯಪ್ರವೇಶಿಸಬೇಕಾದ ಅಗತ್ಯವನ್ನು ಮತ್ತೊಮ್ಮೆ ನೆನಪು ಮಾಡಿಕೊಟ್ಟಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿಗೆ ತನ್ನದೇ ಆದ ವರ್ಚಸ್ಸು ಇದೆ. ಇಲ್ಲಿನ ಹಿತಕರ ವಾತಾವರಣ, ಕುಶಲಕರ್ಮಿಗಳ ಲಭ್ಯತೆ, ಜಗತ್ತಿನ ಯಾವುದೇ ಮೂಲೆಗೆ ತ್ವರಿತವಾಗಿ ಸಂಪರ್ಕ ಸಾಧಿಸಲು ಬೇಕಾದ ವ್ಯವಸ್ಥೆಯಿಂದಾಗಿ ಐ.ಟಿ. ಕಂಪೆನಿಗಳಿಗೆ ಬೆಂಗಳೂರು ಅತ್ಯಂತ ನೆಚ್ಚಿನ ತಾಣವಾಗಿದೆ ಎಂಬುದರಲ್ಲಿ ಯಾವುದೇ ಸಂದೇಹ ಇಲ್ಲ. ಕಂಪೆನಿಗಳು ಇಲ್ಲಿ ಭದ್ರವಾಗಿ ನೆಲೆಯೂರಲು ನೆಲ, ಜಲ, ವಿದ್ಯುತ್ ಬೇಕು, ಮೂಲಸೌಕರ್ಯ ಬೇಕು. ಆದರೆ, ಉದ್ಯೋಗಕ್ಕೆ ಕನ್ನಡಿಗರು ಮಾತ್ರ ಬೇಡ ಎಂಬ ಧೋರಣೆ ಕ್ಷಮೆಗೆ ಅರ್ಹವಲ್ಲ. ಉದ್ಯೋಗಗಳಿಂದ ಕನ್ನಡಿಗರನ್ನು ವ್ಯವಸ್ಥಿತವಾಗಿ ಹೊರಗಿಡುವ ಹುನ್ನಾರಗಳನ್ನು ಗುರುತಿಸುವ ಕೆಲಸವನ್ನು ಸರಕಾರ ಮಾಡಬೇಕು. ಕೆಲವು ಕಂಪೆನಿಗಳ ಅಮಾನವೀಯವಾದ ಇಂತಹ ಧೋರಣೆಗೆ ಕನ್ನಡಪರ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವುದು ಸರಿಯಾಗಿಯೇ ಇದೆ. ತಾವು ಹುಟ್ಟಿ ಬೆಳೆದ ನೆಲದಲ್ಲಿ ತಮ್ಮನ್ನೇ ಪರಕೀಯರನ್ನಾಗಿಸುವ ಎಂತಹುದೇ ಪ್ರಯತ್ನವನ್ನು ಬೇರುಸಹಿತ ಕಿತ್ತೊಗೆಯಬೇಕು.

ರಾಜ್ಯದಲ್ಲಿ ಒಟ್ಟು ಆರು ಸಾವಿರದಷ್ಟು ಐ.ಟಿ., ಬಿ.ಟಿ. ಕಂಪೆನಿಗಳಿವೆ. ಈ ವಲಯದಲ್ಲಿ ಪ್ರತ್ಯಕ್ಷವಾಗಿ ಒಟ್ಟು ೧೫ ಲಕ್ಷ ಮಂದಿ ಕೆಲಸ ಮಾಡುತ್ತಾರೆ ಎಂದು ಅಂದಾಜಿಸಲಾಗಿದೆ. ಈ ಕಂಪೆನಿಗಳಲ್ಲಿ ಸ್ಥಳೀಯರೊಂದಿಗೆ ಬೇರೆ ಬೇರೆ ರಾಜ್ಯದವರೂ ಕೆಲಸ ಮಾಡುತ್ತಾರೆ. ಆದರೆ, ಭಾಷೆಯ ಆಧಾರದ ಮೇಲೆ ಯಾರನ್ನಾದರೂ ಕಡೆಗಣಿಸಿದರೆ ಅದು ಅಪರಾಧ. ಅದರ ವಿರುದ್ಧ ಕ್ರಮ ಜರುಗಿಸಬಹುದು. ಕಂಪೆನಿಗಳ ಆಡಳಿತ ಮಂಡಳಿಗಳು ಕನ್ನಡಿಗರ ಬಗ್ಗೆ ಉದಾಸೀನ ಮನೋಭಾವ ಹೊಂದಿದ್ದರೆ ಅದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಈ ವಿಚಾರದಲ್ಲಿ ಯಾವುದೇ ರಿಯಾಯಿತಿಗಳು, ಮುಲಾಜು ಬೇಕಾಗಿಲ್ಲ. ಖಾಸಗಿ ಕಂಪೆನಿಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯ ಮಾಡಲು ಯತ್ನಿಸಿದರೂ ಅದು ನ್ಯಾಯಾಲಯದಲ್ಲಿ ಊರ್ಜಿತಗೊಳ್ಳುವುದಿಲ್ಲ. ಯಾರು ಎಲ್ಲಿ ಬೇಕಾದರೂ ಕೆಲಸ ಮಾಡಲು ಅವಕಾಶ ಇದೆ. ಅದು ವ್ಯಕ್ತಿಯ ಮೂಲಭೂತ ಹಕ್ಕು. ಅದಕ್ಕೆ ಭಂಗ ತರುವ ಯಾವುದೇ ಬಗೆಯ ಪ್ರಯತ್ನವು ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ. ಸ್ಥಳೀಯರ ಹಿತ ಕಾಪಾಡಲು ಶಾಸನವೇ ಆಗಬೇಕೆಂದೇನಿಲ್ಲ. ಸರಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಅದನ್ನು ಸಾಧಿಸಲು ಮಾರ್ಗೋಪಾಯಗಳು ಇದ್ದೇ ಇರುತ್ತವೆ. ಅವುಗಳನ್ನು ಶೋಧಿಸುವ ಕೆಲಸ ತುರ್ತಾಗಿ ಆಗಬೇಕಿದೆ.

ಕಂಪೆನಿಗಳ ಇಂತಹ ಪ್ರವೃತ್ತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಕ್ಷಣ ತೀಕ್ಷ್ಣ ಪ್ರತಿಕ್ರಿಯೆ ತೋರಿದ್ದಾರೆ. ಮಾಹಿತಿ ತಂತ್ರಜ್ಞಾನ ಕಂಪೆನಿಗಳೂ ಸೇರಿದಂತೆ ಯಾವುದೇ ಖಾಸಗಿ ಸಂಸ್ಥೆಯು ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿರುವುದು ಕಂಡುಬಂದರೆ ಸುಮ್ಮನಿರುವುದಿಲ್ಲ. ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಕಡೆಗಣಿಸಲು ಸರಕಾರ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿರುವುದು ಸರಿಯಾಗಿದೆ. ಸ್ಥಳೀಯರಿಗೆ ಉದ್ಯೋಗ ನೀಡಬೇಕಾದುದು ಕೈಗಾರಿಕೆಗಳ ಜವಾಬ್ದಾರಿ. ಅರ್ಹತೆ ಇಲ್ಲದವರಿಗೆ ಉದ್ಯೋಗ ನೀಡಬೇಕೆಂದು ಸರಕಾರ ಹೇಳುತ್ತಿಲ್ಲ. ಅಗತ್ಯ ವಿದ್ಯಾರ್ಹತೆ ಮತ್ತು ಕೌಶಲ ಹೊಂದಿರುವ ಕನ್ನಡಿಗರಿಗೆ ಅರ್ಹತೆಗೆ ತಕ್ಕಂತೆ ಉದ್ಯೋಗಾವಕಾಶಗಳನ್ನು ನೀಡಬೇಕು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ನೀಡಿರುವ ಹೇಳಿಕೆ ಸಮಂಜಸವಾಗಿದೆ. ಖಾಸಗಿ ಕಂಪೆನಿಗಳಲ್ಲಿ ನಡೆಯುವ ನೇಮಕಾತಿಗಳಲ್ಲಿ ಕನ್ನಡಿಗರು ಎಂಬ ಕಾರಣಕ್ಕೆ ತಾರತಮ್ಯ ಎಸಗಿದರೆ ಅದರ ಬಗ್ಗೆ ದೂರು ನೀಡಲು ವ್ಯವಸ್ಥೆಯೊಂದನ್ನು ಸರಕಾರ ರೂಪಿಸಬೇಕು ಎಂದು ಬೆಂಗಳೂರು ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷ ಕೆ. ರವಿ ನೀಡಿರುವ ಸಲಹೆ ಯುಕ್ತವಾಗಿದೆ. ನೇಮಕಾತಿಯಲ್ಲಿ ಸ್ಥಳೀಯರ ವಿರುದ್ಧ ಷಡ್ಯಂತ್ರಗಳು ನಡೆಯುತ್ತಿದ್ದರೆ ಅದನ್ನು ಹೇಳಿಕೊಳ್ಳಲು ಮತ್ತು ಆ ಬಗ್ಗೆ ಗಮನಹರಿಸಲು ಒಂದು ವ್ಯವಸ್ಥೆ ಇದೆ ಎಂಬುದೇ ನಿಗ್ರಹಕ್ಕೆ ಸ್ವಲ್ಪಮಟ್ಟಿಗಾದರೂ ನೆರವಾಗಬಹುದು.

ಐ.ಟಿ. ಕಂಪೆನಿಗಳಲ್ಲಿ ಕನ್ನಡೇತರರ ಪ್ರಭಾವ ಹೆಚ್ಚತೊಡಗಿದೆ. ಅಲ್ಲಿ ಕನ್ನಡದ ವಾತಾವರಣ ರೂಪಿಸುವಂತಹ ಪ್ರಯತ್ನಗಳು ಆಗಬೇಕು. ಎಲ್ಲ ಭಾಷೆಗಳೂ ಇರಲಿ. ಆದರೆ ಕನ್ನಡಕ್ಕೆ ಆದ್ಯತೆ ಇರಲಿ ಎಂದು ಕಂಪೆನಿಗಳ ಮನವೊಲಿಸುವ ಕೆಲಸ ಆಗಬೇಕು. ಕೆಲವು ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಕೆಳಹಂತದ ಹುದ್ದೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ಆರೋಪಗಳೂ ಇವೆ. ಈ ದಿಸೆಯಲ್ಲೂ ಸರಕಾರ ಗಮನಹರಿಸಿ, ವಸ್ತುಸ್ಥಿತಿ ಅರಿಯುವ ಪ್ರಯತ್ನ ಮಾಡಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಕೌಶಲ ತರಬೇತಿಯ ಅಗತ್ಯ ಇದೆ ಎಂದು ಕಂಡುಬಂದಲ್ಲಿ ಅದನ್ನು ಒದಗಿಸಬೇಕು. ವೃತ್ತಿ ಶಿಕ್ಷಣ ಸಂಸ್ಥೆಗಳೂ ಒಳಗೊಂಡಂತೆ ಬೇರೆ ಬೇರೆ ಸಂಸ್ಥೆಗಳ ಸಹಯೋಗದಲ್ಲಿ ಈ ಕೆಲಸವನ್ನು ಮಾಡಬಹುದು. ಉದ್ಯೋಗಕ್ಕೆ ಕನ್ನಡಿಗರು ಬೇಕಿಲ್ಲ ಎಂಬ ಮನೋಭಾವ ಹೊಂದಿರುವ ಕಂಪೆನಿಗಳಿಗೆ ಕರ್ನಾಟಕ ಏಕೆ ಬೇಕು? ಭಾಷೆಯ ಆಧಾರದ ಮೇಲೆ ಸ್ಥಳೀಯರನ್ನು ಕಡೆಗಣಿಸಿದರೆ ಇಲ್ಲಿ ನೆಲೆ ನಿಲ್ಲುವುದಕ್ಕೆ ಆಗುವುದಿಲ್ಲ ಎಂಬ ದಿಟ್ಟ ಸಂದೇಶವನ್ನು ಸರಕಾರ ರವಾನಿಸಬೇಕು. ಉದ್ಯೋಗಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂಬ ಮಾತು ಹೇಳಿಕೆಗಷ್ಟೇ ಸೀಮಿತವಾಗದೆ ಕ್ರಮದ ರೂಪದಲ್ಲೂ ವ್ಯಕ್ತಗೊಳ್ಳಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X