Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಇದು ಒಕ್ಕೂಟ ವ್ಯವಸ್ಥೆಗೆ ಮಾರಕ

ಇದು ಒಕ್ಕೂಟ ವ್ಯವಸ್ಥೆಗೆ ಮಾರಕ

ವಾರ್ತಾಭಾರತಿವಾರ್ತಾಭಾರತಿ20 Sept 2024 9:16 AM IST
share
ಇದು ಒಕ್ಕೂಟ ವ್ಯವಸ್ಥೆಗೆ ಮಾರಕ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ದೇಶಾದ್ಯಂತ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿ ಮಾಡಿರುವ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ. ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ಯಾವುದೇ ಕಾರ್ಯಕ್ರಮ ರೂಪಿಸದ ಮೋದಿ ನೇತೃತ್ವದ ಕೇಂದ್ರ ಸರಕಾರ ತನ್ನ ರಹಸ್ಯ ಕಾರ್ಯಸೂಚಿಯನ್ನು ಕಾರ್ಯಗತಗೊಳಿಸಲು ಇನ್ನಿಲ್ಲದ ಆಸಕ್ತಿ ತೋರಿಸುತ್ತಿದೆ ಎಂಬುದು ಮತ್ತೆ ಸಾಬೀತಾಗಿದೆ. ಪ್ರತಿಪಕ್ಷ ನಾಯಕರು ಹಾಗೂ ಕಾನೂನು ಪರಿಣಿತರೊಂದಿಗೆ ಸಮಾಲೋಚನೆ ನಡೆಸದೆ, ಒಮ್ಮತ ಮೂಡಿಸದೆ ಕೈಗೊಂಡ ಕ್ರಮ ಇದೆಂದು ಹೇಳಿದರೆ ಅತಿಶಯೋಕ್ತಿ ಅಲ್ಲ. ಈ ಕುರಿತು ಕೋವಿಂದ್ ಸಮಿತಿ ಹದಿನೆಂಟು ಶಿಫಾರಸುಗಳನ್ನು ಮಾಡಿತ್ತು. ಈ ಪೈಕಿ ಹೆಚ್ಚಿನ ತಿದ್ದುಪಡಿಗಳಿಗೆ ರಾಜ್ಯಗಳ ವಿಧಾನಸಭೆಗಳ ಒಪ್ಪಿಗೆ ಅಗತ್ಯವಿಲ್ಲ ಎಂಬುದು ಗಮನಾರ್ಹ.

ಈ ಬಗ್ಗೆ ಪ್ರತಿಪಕ್ಷ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಪ್ರಾಯೋಗಿಕವಲ್ಲ ಹಾಗೂ ಸಂವಿಧಾನ ವಿರೋಧಿಯಾದುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯೆ ವ್ಯಕ್ತಪಡಿಸಿ ‘‘ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಡೆ ಮಾತ್ರವಲ್ಲ, ಅನುಷ್ಠಾನಗೊಳಿಸಲು ಅಸಾಧ್ಯವಾದ ಕ್ರಮ’’ ಎಂದಿದ್ದಾರೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ತಳಪಾಯವೇ ಕುಸಿಯುತ್ತದೆ ಎಂಬ ಸಿದ್ದರಾಮಯ್ಯನವರ ಮಾತು ನ್ಯಾಯ ಸಮ್ಮತವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ದೇಶವನ್ನು ಒಂದು ಪಕ್ಷದ ಆಡಳಿತದತ್ತ ತಳ್ಳುತ್ತದೆ ಎಂದು ಉಭಯ ಕಮ್ಯುನಿಸ್ಟ್ ಪಕ್ಷಗಳು ಹೇಳಿವೆ.

ಒಂದು ದೇಶ, ಒಂದು ಚುನಾವಣೆ, ಒಂದು ದೇಶ ಒಂದು ಧರ್ಮ, ಒಂದು ದೇಶ ಒಂದು ಭಾಷೆ, ಒಂದು ದೇಶ ಒಂದು ಆಹಾರ ಪದ್ಧತಿ-ಇದು ಸಂಘ ಪರಿವಾರದ ರಹಸ್ಯ ಕಾರ್ಯಸೂಚಿ. ಇದು ಭಾರತದ ವೈವಿಧ್ಯತೆಯನ್ನು ನಾಶ ಮಾಡುವ, ಬಹುತ್ವ ಭಾರತವನ್ನು ಮನುವಾದಿ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಹಾಗೂ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುವ ಮಸಲತ್ತು ಎಂದರೆ ತಪ್ಪಿಲ್ಲ.

ಇದು ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಒಟ್ಟಿಗೆ ಚುನಾವಣೆ ನಡೆಯಬೇಕೆಂದರೆ ಸಂವಿಧಾನಕ್ಕೆ ಕೆಲವು ತಿದ್ದುಪಡಿಗಳನ್ನು ತರಬೇಕಾಗುತ್ತದೆ. ಹೆಚ್ಚುವರಿಯಾಗಿ ಭಾರೀ ಸಂಖ್ಯೆಯಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್ ಯಂತ್ರಗಳು ಬೇಕಾಗುತ್ತವೆ. ಇದಕ್ಕಾಗಿ ಕೋಟ್ಯಂತರ ರೂ.ಗಳನ್ನು ವ್ಯಯಿಸಬೇಕಾಗುತ್ತದೆ. ಸಂಸತ್ ಅವಧಿಗೆ ಸಂಬಂಧಿಸಿದಂತೆ ಸಂವಿಧಾನದ 83ನೇ ವಿಧಿಗೆ ತಿದ್ದುಪಡಿ ತರಬೇಕಾಗುತ್ತದೆ. ರಾಷ್ಟ್ರಪತಿಗಳಿಂದ ಲೋಕಸಭೆಯನ್ನು ವಿಸರ್ಜಿಸಲು ಅನುಕೂಲ ಮಾಡಿಕೊಡುವ ಸಂವಿಧಾನದ 85ನೇ ವಿಧಿ, ವಿಧಾನಸಭೆಗಳ ಅವಧಿಗೆ ಸಂಬಂಧಿಸಿದಂತೆ 174ನೇ ವಿಧಿ, ವಿಧಾನಸಭೆ ವಿಸರ್ಜನೆಗೆ 356 ವಿಧಿಗೆ ತಿದ್ದುಪಡಿ ತರಬೇಕಾಗುತ್ತದೆ.

ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಬಂದ ನಂತರ ನಮ್ಮ ಸಂವಿಧಾನ ನಿರ್ಮಾಪಕ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ಚಳವಳಿಯ ನೇತಾರ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ವಲ್ಲಭಭಾಯಿ ಪಟೇಲ್ ಅವರು ಹಲವಾರು ಧರ್ಮ, ಭಾಷೆ, ಜನಾಂಗ ಹಾಗೂ ಸಂಸ್ಕೃತಿಗಳನ್ನು ಹೊಂದಿರುವ ಭಾರತಕ್ಕೆ ಒಕ್ಕೂಟ ವ್ಯವಸ್ಥೆ (ಫೆಡರಲ್)ಸೂಕ್ತ ಎಂದು ಅಂಗೀಕರಿಸಿದರು. ಈ ಒಕ್ಕೂಟ ವ್ಯವಸ್ಥೆ ಬಿಜೆಪಿಯ ಸೈದ್ಧಾಂತಿಕ ಮೂಲವಾದ ಆರೆಸ್ಸೆಸ್‌ಗೆ ಇಷ್ಟವಾಗಿರಲಿಲ್ಲ. ಸಂಘದ ಎರಡನೇ ಸರ ಸಂಘಚಾಲಕ ಮಾಧವ ಸದಾಶಿವ ಗೋಳ್ವಲ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಂಡಿರಲಿಲ್ಲ. ಒಲ್ಲದ ಮನಸ್ಸಿನಿಂದ ಚುನಾವಣೆ ಮೂಲಕ ಅಧಿಕಾರ ಹಿಡಿದು ಹಿಂದೂ ರಾಷ್ಟ್ರ ದ ಗುರಿ ಸಾಧಿಸಲು ಹಿಂದಿನ ಜನಸಂಘ(ಇಂದಿನ ಬಿಜೆಪಿ) ಅನಿವಾರ್ಯವಾಗಿ ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿತು. ಆದರೆ ಅದರ ಮೂಲ ಗುರಿ ಹಿಂದೂ ರಾಷ್ಟ್ರ ನಿರ್ಮಾಣ. ಈ ಗುರಿ ಸಾಧನೆಗಾಗಿ ಚುನಾವಣಾ ಪದ್ಧತಿಯನ್ನು ಒಪ್ಪಿಕೊಂಡು ಅಧಿಕಾರ ಹಿಡಿದು ಕೂತಿದೆ.

ದೇಶದಲ್ಲಿ 1967ಕ್ಕಿಂತ ಮುಂಚೆ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಒಟ್ಟಿಗೆ ಚುನಾವಣೆ ನಡೆಯುತ್ತಿತ್ತು. ಆಗ ಕೇಂದ್ರ ಹಾಗೂ ರಾಜ್ಯಗಳಲ್ಲಿ ಕಾಂಗ್ರೆಸ್ ಏಕಸ್ವಾಮ್ಯವಿತ್ತು. ಐದು ವರ್ಷಗಳ ಕಾಲ ಸರಕಾರಗಳು ಸ್ಥಿರವಾಗಿರುತ್ತಿದ್ದವು. ಆದರೆ 1967ರ ನಂತರ ಮೊದಲ ಬಾರಿ ಕೆಲವು ರಾಜ್ಯಗಳಲ್ಲಿ ಕಾಂಗ್ರೆಸೇತರ ಪಕ್ಷಗಳು ಸಂಯುಕ್ತ ರಂಗ ಮಾಡಿಕೊಂಡು ಅಧಿಕಾರಕ್ಕೆ ಬಂದವು. 1977ರಲ್ಲಿ ಕೇಂದ್ರದಲ್ಲೂ ಮೊರಾರ್ಜಿ ದೇಸಾಯಿ ಅವರ ನೇತೃತ್ವದಲ್ಲಿ ಕಾಂಗ್ರೆಸೇತರ ಸರಕಾರ ಬಂತು. ಇದರ ಪರಿಣಾಮವಾಗಿ ರಾಜ್ಯಗಳಲ್ಲಿ ಪಕ್ಷಾಂತರದಂತಹ ಪಿಡುಗು ಆರಂಭವಾಗಿ ಚುನಾಯಿತ ಸರಕಾರಗಳು ಉರುಳಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಸುವುದು ಅನಿವಾರ್ಯವಾಯಿತು. ಇದು ಜನತಂತ್ರದ ಸಹಜ ಪ್ರಕ್ರಿಯೆ. ಹೀಗೆ ಬೆಳೆದ ಭಾರತದ ಜನತಂತ್ರ ವ್ಯವಸ್ಥೆ ಈಗ ಪಕ್ವವಾಗಿದೆ. ಇಂಥ ಸನ್ನಿವೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸಿದರೂ ರಾಜಕೀಯ ಅಸ್ಥಿರತೆ ಉಂಟಾದರೆ ಮಧ್ಯಂತರ ಚುನಾವಣೆ ನಡೆಸದೆ ರಾಷ್ಟ್ರಪತಿ ಆಡಳಿತವನ್ನು ಹೇರಿ ರಾಜ್ಯಪಾಲರ ಮೂಲಕ ಮತ್ತೆ ಚುನಾವಣೆ ಬರುವವರೆಗೆ ಕೇಂದ್ರದ ಆಡಳಿತ ಹೇರಲು ಮೋದಿ ನೇತೃತ್ವದ ಬಿಜೆಪಿ ಸರಕಾರ ಬಯಸಿದೆ.

ಇದು ಅತ್ಯಂತ ವಿಭಿನ್ನವಾದ ಒಕ್ಕೂಟ ದೇಶ. ಬಹುತ್ವ ಈ ನೆಲದ ಸತ್ವ. ಇಂಥಲ್ಲಿ ಒಂದೇ ದೇಶ, ಒಂದೇ ಧರ್ಮ, ಒಂದೇ ಉಡುಪು, ಒಂದೇ ಆಹಾರ ಪದ್ಧತಿ, ಒಂದೇ ಚುನಾವಣೆ ಎಂದು ಏನೇನೋ ಮಾಡಲು ಹೊರಟರೆ ಅದು ದೇಶದ ಏಕತೆಗೆ ಮಾರಕವಾಗಿತ್ತದೆ. ಬ್ರಿಟಿಷ್ ಆಡಳಿತಕ್ಕಿಂತ ಮೊದಲು ಇಲ್ಲಿ 550 ರಾಜ ಸಂಸ್ಥಾನಗಳಿದ್ದವು. ಪ್ರತೀ ಸಂಸ್ಥಾನಕ್ಕೆ ಒಬ್ಬ ರಾಜ ಇರುತ್ತಿದ್ದ. ಆದರೆ ಸ್ವಾತಂತ್ರ್ಯ ಬಂದ ನಂತರ ಅಂದಿನ ಗೃಹ ಮಂತ್ರಿ ವಲ್ಲಭಭಾಯಿ ಪಟೇಲರು ಎಲ್ಲಾ ರಾಜ-ಮಹಾರಾಜರ ಸಭೆ ಕರೆದು ಸ್ವತಂತ್ರ ಭಾರತದಲ್ಲಿ ತಮ್ಮ ಸಂಸ್ಥಾನಗಳನ್ನು ವಿಲೀನಗೊಳಿಸಲು ಮನವೊಲಿಸಿದರು. ವಿಲೀನಕ್ಕೆ ಒಪ್ಪದವರ ಮೇಲೆ ತೀವ್ರ ಒತ್ತಡ ತಂದರು. ಒಪ್ಪಿ ಸಹಿ ಹಾಕಿದವರಲ್ಲಿ ನಮ್ಮ ರಾಜ್ಯದ ಜಮಖಂಡಿಯ ರಾಜ ಪಟವರ್ಧನ ಅವರು ಮೊದಲನೆಯವರು. ಕೆಲವು ಕಡೆ ಸೇನಾ ಕಾರ್ಯಾಚರಣೆ ನಡೆಸಿ ಒಪ್ಪಿಸಲಾಯಿತು.

ವಾಸ್ತವವಾಗಿ ಭಾರತ ಎಂಬುದು ಯಾವುದೇ ಒಂದು ಧರ್ಮಕ್ಕೆ,ಜನಾಂಗಕ್ಕೆ ಸೇರಿದ ದೇಶವಲ್ಲ. ಇಲ್ಲಿ ಆರು ಪ್ರಮುಖ ಮತ, ಪಂಥಗಳಿವೆ. 6,452 ಜಾತಿಗಳಿವೆ. 52 ಬುಡಕಟ್ಟುಗಳಿವೆ. 1,617 ಭಾಷೆಗಳಿವೆ. 5,68,000 ಹಳ್ಳಿಗಳಿವೆ ಹಾಗೂ 600 ಜಿಲ್ಲೆಗಳಿವೆ. ಇಂಥ ವೈವಿಧ್ಯಮಯವಾದ ಒಕ್ಕೂಟ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ಎಂಬುದು ಕಾರ್ಯ ಸಾಧ್ಯವಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X