Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಕರ್ನಾಟಕದ ಸಂಸದರು ಏನು ಮಾಡುತ್ತಿದ್ದಾರೆ?

ಕರ್ನಾಟಕದ ಸಂಸದರು ಏನು ಮಾಡುತ್ತಿದ್ದಾರೆ?

ವಾರ್ತಾಭಾರತಿವಾರ್ತಾಭಾರತಿ16 Dec 2025 6:42 AM IST
share
ಕರ್ನಾಟಕದ ಸಂಸದರು ಏನು ಮಾಡುತ್ತಿದ್ದಾರೆ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ಕರ್ನಾಟಕದ ಬಗ್ಗೆ ಕೇಂದ್ರ ಸರಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಲೇ ಇದೆ. ಮೊದಲಿನಿಂದಲೂ ಇದು ನಡೆಯುತ್ತಿದ್ದರೂ ಕಳೆದ ಹನ್ನೊಂದು ವರ್ಷಗಳಿಂದ ಈ ತಾರತಮ್ಯ ನೀತಿ ತೀವ್ರಗೊಂಡಿದೆ. ಕೃಷ್ಣಾ ಮೇಲ್ದಂಡೆ ಯೋಜನೆ, ಮಹಾದಾಯಿ ಯೋಜನೆಗಳಿರಲಿ, ರಾಜ್ಯಕ್ಕೆ ಬರಬೇಕಾದ ತೆರಿಗೆ ಬಾಕಿ ಇರಲಿ ಎಲ್ಲದರಲ್ಲೂ ಪಕ್ಷಪಾತದ ನೀತಿ ಮುಂದುವರಿದಿದೆ. ಲೋಕಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ 28 ಮಂದಿ ಸಂಸದರಿದ್ದರೂ ಇವರಲ್ಲಿ ಯಾರೊಬ್ಬರೂ ಕರ್ನಾಟಕಕ್ಕೆ ಆಗಿರುವ, ಆಗುತ್ತಿರುವ ಅನ್ಯಾಯದ ಬಗ್ಗೆ ಲೋಕಸಭಾ ಅಧಿವೇಶನದಲ್ಲಿ ಗಟ್ಟಿಯಾಗಿ ಮಾತಾಡಿದ ಉದಾಹರಣೆಗಳಿಲ್ಲ. ಹೀಗಾಗಿ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಲೇ ಇದೆ.

ತಮಿಳುನಾಡಿನಲ್ಲಿ ತಮ್ಮ ರಾಜ್ಯದ ಹಿತಾಸಕ್ತಿಯ ಪ್ರಶ್ನೆ ಬಂದರೆ, ಪಕ್ಷಭೇದ ಮರೆತು ಎಲ್ಲ ಸಂಸದರೂ ಒಟ್ಟಾಗಿ ಧ್ವನಿಯೆತ್ತುತ್ತಾರೆ. ದಿಲ್ಲಿಯಲ್ಲೂ ತಮಿಳುನಾಡಿನ ಲಾಬಿ ಪ್ರಭಾವಿಯಾಗಿದೆ. ಆದರೆ ಕರ್ನಾಟಕದ ಸಂಸದರಲ್ಲಿ ಅದರಲ್ಲೂ ಲೋಕಸಭಾ ಸದಸ್ಯರಲ್ಲಿ ಅಂಥ ಒಮ್ಮತದ ಹಿತಾಸಕ್ತಿ ಕಂಡು ಬರುತ್ತಿಲ್ಲ. ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಬಂದರೂ ನಮ್ಮ ರಾಜ್ಯದ ಸಂಸದರ ಸ್ಪಂದನ ತುಂಬಾ ವಿರಳ. ರಾಜ್ಯದ 28 ಲೋಕಸಭಾ ಸದಸ್ಯರಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ರಾಜ್ಯ ಸರಕಾರ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಕರೆದುಕೊಂಡು ಹೋಗಲು ಅನೇಕ ಬಾರಿ ಮುಂದಾಗಿದ್ದರೂ ಸಂಸದರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನೇಕ ಬಾರಿ ಹೇಳಿದ್ದಾರೆ.

ಕರ್ನಾಟಕದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಟೀಕಿಸುವಾಗ ನಾಲಿಗೆ ಸಡಿಲು ಬಿಟ್ಟು ಮಾತಾಡುತ್ತಾರೆ. ಆದರೆ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಮಾತನಾಡಲು ಹೆದರುತ್ತಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಅಂದರೆ ಕಷ್ಣಾ ಮೇಲ್ದಂಡೆ ಯೋಜನೆ.

ಕರ್ನಾಟಕದ ರೈತಾಪಿ ಜನರ ಬದುಕನ್ನು ಬದಲಿಸಬಲ್ಲ ಕೃಷ್ಣಾ ಮೇಲ್ದಂಡೆ ಯೋಜನೆ ಎರಡು ಮತ್ತು ಮೂರನೇ ಹಂತದ ಕಾರ್ಯ ವಿಳಂಬವಾಗುತ್ತಲೇ ಇದೆ. ಕೃಷ್ಣಾ ಜಲ ವಿವಾದ ಕುರಿತು ನ್ಯಾಯ ಮಂಡಳಿ ತೀರ್ಪು ನೀಡಿ 15 ವರ್ಷಗಳು ಗತಿಸಿದವು. ಆದರೆ ಕೇಂದ್ರ ಸರಕಾರದ ಜಾಣ ನಿರ್ಲಕ್ಷ್ಯದ ಕಾರಣದಿಂದಾಗಿ ಕರ್ನಾಟಕ ತನ್ನ ಪಾಲಿನ ನೀರನ್ನು ಬಳಸಿಕೊಳ್ಳಲಾಗದೆ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಇದರ ಬಗ್ಗೆ ರಾಜ್ಯದ ಸಂಸದರು ಮಾತಾಡಿದ ಉದಾಹರಣೆಗಳು ತೀರಾ ಕಡಿಮೆ. ಅದರ ಬದಲಾಗಿ ಇದಕ್ಕೆ ರಾಜ್ಯ ಸರಕಾರ ಕಾರಣವೆಂದು ಬಿಜೆಪಿ ಮತ್ತು ಇತರ ಪ್ರತಿಪಕ್ಷಗಳು ಆರೋಪಿಸುತ್ತಿವೆ. ಆದರೆ ಕೇಂದ್ರ ಸರಕಾರವೇ ಈ ವಿಳಂಬಕ್ಕೆ ಕಾರಣವೆಂದು ರಾಜ್ಯ ಸರಕಾರ ಪ್ರತ್ಯಾರೋಪ ಮಾಡುತ್ತಿದೆ.

ಆದರೆ ವಾಸ್ತವವಾಗಿ ಕಳೆದ ಹದಿನೈದು ವರ್ಷಗಳ ಕಾಲಾವಧಿಯಲ್ಲಿ ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳೂ ಈ ಲೋಪದ ಹೊಣೆಯನ್ನು ಹೊತ್ತು ಕೊಳ್ಳಬೇಕಾಗಿದೆ. ಆದರೆ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶಗಳು ಹಂಚಿಕೊಳ್ಳಬೇಕಾಗಿರುವುದರಿಂದ ನದಿಯ ಪಾತ್ರದಲ್ಲಿ ಕೈಗೊಳ್ಳುವ ಯಾವುದೇ ಕಾಮಗಾರಿಗೆ ಕೇಂದ್ರ ಸರಕಾರ ಅಧಿಸೂಚನೆಯನ್ನು ಹೊರಡಿಸುವುದು ಕಡ್ಡಾಯವಾಗಿರುವುದರಿಂದ ಇದನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಬೇಕಾಗುತ್ತದೆ. ಅಧಿಸೂಚನೆಯನ್ನು ಹೊರಡಿಸಲು ಕರ್ನಾಟಕ ಒತ್ತಡ ಹೇರಬೇಕಾಗುತ್ತದೆ. ನಮ್ಮ ಸಂಸದರು ಇದರ ಬಗ್ಗೆ ಮಾತಾಡಬೇಕು. ಆದರೆ ಮಾತಾಡುತ್ತಿಲ್ಲ. ಹೀಗಾಗಿ ಸದರಿ ಯೋಜನೆ ನನೆಗುದಿಗೆ ಬಿದ್ದಂತಾಗಿದೆ.

ಕೃಷ್ಣಾ ಜಲ ವಿವಾದಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆ ಕುರಿತು 1956 ರಲ್ಲೇ ಆಂಧ್ರಪ್ರದೇಶ ಸರಕಾರ ಸುಪ್ರೀಂ ಕೋರ್ಟಿಗೆ ದೂರು ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಮತ್ತು ನಂತರ ರಚನೆಯಾದ ಕೃಷ್ಣಾ ಜಲವಿವಾದ ನ್ಯಾಯ ಮಂಡಳಿ ಆಗಾಗ ಮಹಾರಾಷ್ಟ್ರ, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಿಗೆ ನೀರುಹಂಚಿಕೆ ಮಾಡಿ ತೀರ್ಪು ನೀಡಿದೆ. ಆ ತೀರ್ಪಿನ ಅನ್ವಯ ಕರ್ನಾಟಕ ಕೃಷ್ಣಾ ಮೇಲ್ದಂಡೆ ಯೋಜನೆಯ ಮೊದಲನೆಯ ಹಂತದ ಕಾಮಗಾರಿಯನ್ನು ಮುಗಿಸಿದೆ. ಎರಡನೇ ಹಂತದ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. ಏತನ್ಮಧ್ಯೆ ನ್ಯಾಯ ಮಂಡಳಿ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519.6 ಮೀಟರ್‌ನಿಂದ 524.25 ಮೀಟರ್‌ಗಳಿಗೆ ಹೆಚ್ಚಿಸಲು ಹಾಗೂ ಕೃಷ್ಣಾ ಕೊಳ್ಳದ 173 ಟಿಎಂಸಿ ನೀರನ್ನು ಹಂಚಿಕೆ ಮಾಡಿ 2010ರಲ್ಲಿ ಅಂತಿಮ ತೀರ್ಪನ್ನು ನೀಡಿದೆ. ನ್ಯಾಯ ಮಂಡಳಿಯ ತೀರ್ಪು ಹೊರ ಬೀಳುತ್ತಿದ್ದಂತೆ ಬಿಜಾಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ಕೊಪ್ಪಳ, ಗದಗ ಭಾಗದ ಬಹುತೇಕ ರೈತರು ಸಂಭ್ರಮಿಸಿದ್ದರು. ಆದರೆ ರಾಜ್ಯ ಸರಕಾರವು ಭೂಸ್ವಾಧೀನಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಂತೆ ತಕರಾರುಗಳು ಶುರುವಾದವು. ಇದರಿಂದಾಗಿ ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಯಿತು. ಇದು ಒಂದೆಡೆಯಾದರೆ ಇನ್ನೊಂದೆಡೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಜಾಣ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿದೆ.

ಕೇಂದ್ರದ ಅಧಿಸೂಚನೆ ಒತ್ತಟ್ಟಿಗಿರಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಎರಡನೇ ಹಂತದ ಕಾರ್ಯವೇ ಇನ್ನೂ ಪೂರ್ಣವಾಗಿಲ್ಲ. ಇದು ಮುಗಿದರೆ ಮಾತ್ರ ಮೂರನೆಯ ಹಂತದ ಕಾರ್ಯ ಆರಂಭ. ಈಗಲೇ ಅದರ ಬಗ್ಗೆ ಮಾತಾಡುವುದರಲ್ಲಿ ಅರ್ಥವಿಲ್ಲ. ಎರಡನೇ ಹಂತಕ್ಕೆ ಸಂಬಂಧಿಸಿದಂತೆ ಪರಿಹಾರ ಕಾರ್ಯ, ಅದರಲ್ಲೂ ವಿಶೇಷವಾಗಿ ಪುನರ್ವಸತಿ ಕಾರ್ಯ ಮುಗಿದಿಲ್ಲ. ಕಳೆದ ಇಪ್ಪತ್ತು ವರ್ಷಗಳಿಂದ ಭೂಮಿ ಮತ್ತು ಮನೆ ಮಾರು ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತವಾದ ಪರಿಹಾರವನ್ನು ನೀಡಲಾಗಿಲ್ಲ.

ಆದರೆ ಭೂ ಸ್ವಾಧೀನಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ನೆಪ ಮಾಡಿಕೊಂಡು ಕೇಂದ್ರದ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಕಾಲಹರಣ ಮಾಡುತ್ತಿದೆ. ವಾಸ್ತವವಾಗಿ ಯೋಜನೆ ವಿಳಂಬವಾಗಲು ಕೇಂದ್ರ ಸರಕಾರದ ನಕಾರಾತ್ಮಕ ನೀತಿ ಕಾರಣವಾಗಿದೆ. ನ್ಯಾಯ ಮಂಡಳಿ 2010ರಲ್ಲೇ ತೀರ್ಪು ನೀಡಿದೆ. ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 1956ರ ಮೂಲ ಯೋಜನೆಯಲ್ಲಿ ಇದ್ದಂತೆ 524.25 ಮೀಟರ್‌ಗೆ ಹೆಚ್ಚಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೂ ಕೇಂದ್ರ ಸರಕಾರ ವಿಳಂಬ ಮಾಡುತ್ತಿರುವುದೇಕೆ? ಈ ಪ್ರಶ್ನೆಗೆ ರಾಜ್ಯ ಬಿಜೆಪಿ ನಾಯಕರ ಹಾಗೂ ಸಂಸದರ ಬಳಿ ಉತ್ತರವಿಲ್ಲ.

ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬವಾಗಲು ಕೇಂದ್ರ ಸರಕಾರ ಮಾತ್ರವಲ್ಲ 2010ರಿಂದ 2023ರ ವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಐದು ಸರಕಾರಗಳೂ ಕಾರಣವಾಗಿವೆ. ಕೇಂದ್ರದಿಂದ ಅಧಿಸೂಚನೆಯನ್ನು ಪಡೆಯಲು ಈ ಸರಕಾರಗಳು ಯಾವುದೇ ಪ್ರಯತ್ನವನ್ನು ಮಾಡಲಿಲ್ಲ. ಈಗಿನ ಕಾಂಗ್ರೆಸ್ ಸರಕಾರ ತಕ್ಷಣ ಅಧಿಸೂಚನೆಯನ್ನು ಹೊರಡಿಸಿ ಎಂದು ಕೇಂದ್ರಕ್ಕೆ ಹಲವಾರು ಸಲ ಪತ್ರಗಳನ್ನು ಬರೆದಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಪತ್ರಗಳನ್ನು ಬರೆದು ಒತ್ತಾಯಿಸಿದ್ದಾರೆ. ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಕೇಂದ್ರಕ್ಕೆ ಪತ್ರಗಳನ್ನು ಬರೆದಿದ್ದಾರೆ. ಆದರೆ ಕೇಂದ್ರದ ನರೇಂದ್ರ ಮೋದಿ ಸರಕಾರ ಜಾಣ ಮೌನವನ್ನು ತಾಳಿದೆ. ಈ ಕುರಿತು ಪ್ರಧಾನಮಂತ್ರಿಗಳನ್ನು ಭೇಟಿಯಾಗಲು ದಿಲ್ಲಿಗೆ ಸರ್ವಪಕ್ಷ ನಿಯೋಗವನ್ನು ಕೊಂಡೊಯ್ಯಲು ಹಲವಾರು ಸಲ ಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ರಾಜ್ಯದಿಂದ ಚುನಾಯಿತರಾಗಿರುವ ಎನ್‌ಡಿಎ ಮೈತ್ರಿ ಕೂಟದ ಸಂಸದರು ಕೂಡ ಸಂಸತ್‌ನಲ್ಲಾಗಲಿ ಹೊರಗಡೆಯಾಗಲಿ ಈ ವಿಷಯವನ್ನು ಪ್ರಸ್ತಾಪಿಸಿಲ್ಲ. ಇನ್ನು ಮುಂದಾದರೂ ಎಲ್ಲ ಪಕ್ಷಗಳ ಸಂಸದರು ಪಕ್ಷಭೇದ ಮರೆತು ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ರಾಜಕೀಯ ಇಚ್ಛಾಶಕ್ತಿಯನ್ನು ತೋರಿಸಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X