Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಈ ವಿಕೃತ ಕ್ರೌರ್ಯಕ್ಕೆ ಕೊನೆ ಯಾವಾಗ?

ಈ ವಿಕೃತ ಕ್ರೌರ್ಯಕ್ಕೆ ಕೊನೆ ಯಾವಾಗ?

ವಾರ್ತಾಭಾರತಿವಾರ್ತಾಭಾರತಿ21 Oct 2025 8:44 AM IST
share
ಈ ವಿಕೃತ ಕ್ರೌರ್ಯಕ್ಕೆ ಕೊನೆ ಯಾವಾಗ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ಕಳೆದ ಕೆಲವು ವರ್ಷಗಳಿಂದ ಮಕ್ಕಳು ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅತ್ಯಾಚಾರ ಮಾಡಿ ಅವರನ್ನು ಬರ್ಬರವಾಗಿ ಕೊಂದು ಹಾಕಲಾಗುತ್ತಿದೆ. 2012ರಲ್ಲಿ ದಿಲ್ಲಿಯಲ್ಲಿ ಚಲಿಸುವ ಬಸ್‌ನಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶದ ಮಾತ್ರವಲ್ಲ, ಜಗತ್ತಿನ ಗಮನವನ್ನು ಸೆಳೆಯಿತು. ಈ ಪೈಶಾಚಿಕ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ವಿರುದ್ಧ ದಿಲ್ಲಿ ಸೇರಿದಂತೆ ದೇಶದ ಎಲ್ಲೆಡೆ ವ್ಯಾಪಕ ಪ್ರತಿಭಟನೆ ನಡೆಯಿತು. ಸರಕಾರ ‘ನಿರ್ಭಯಾ’ ಹೆಸರಿನ ವಿಶೇಷ ಕಾನೂನನ್ನು ಮಾಡಿತು. ಆ ನಂತರವೂ ಇಂಥ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಉತ್ತರ ಪ್ರದೇಶದಲ್ಲಿ ದಾದಿಯ ಮೇಲೆ ವೈದ್ಯನಿಂದಲೇ ನಡೆದ ಅತ್ಯಾಚಾರ, ಕೋಲ್ಕತಾದಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ, ಮಹಾರಾಷ್ಟ್ರದಲ್ಲಿ ಪುಟ್ಟ ಬಾಲಕಿಯರಿಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣ, ಇತ್ತೀಚೆಗೆ ಮೈಸೂರಿನಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಹೀಗೆ ಇಂಥ ಕ್ರೌರ್ಯದ ಪ್ರಕರಣಗಳಿಗೆ ಕೊನೆ ಇಲ್ಲದಂತಾಗಿದೆ.

ಮಹಿಳಾ ಸಬಲೀಕರಣಕ್ಕಾಗಿ ಸರಕಾರಗಳು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿವೆ. ಆದರೂ ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ ಮತ್ತು ಹತ್ಯೆಗಳು ನಡೆಯುತ್ತಲೇ ಇವೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವ ದುಷ್ಟರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಇಂಥ ಘಟನೆಗಳು ನಡೆದಾಗ ಅಧಿಕಾರದಲ್ಲಿರುವ ರಾಜಕಾರಣಿಗಳು ನುಣುಚಿಕೊಳ್ಳಲು ಯತ್ನಿಸುತ್ತಾರೆ. ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಾಗ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ‘‘ಯುವತಿಯರು ರಾತ್ರಿ ಹೊತ್ತಿನಲ್ಲಿ ಹೊರಗಡೆ ಹೋಗಬಾರದು, ಇದ್ದಲ್ಲೇ ಇದ್ದು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು’’ ಎಂದು ನುಣುಚಿಕೊಳ್ಳುವ ಹೇಳಿಕೆಯನ್ನು ನೀಡಿದರು. ಅವರು ಮಾತ್ರವಲ್ಲ ಬಹುತೇಕ ಎಲ್ಲ ರಾಜ್ಯಗಳಲ್ಲೂ ಅಧಿಕಾರದಲ್ಲಿರುವವರು ಇದೇ ರೀತಿ ಮಾತಾಡುತ್ತಾರೆ. ಇದು ಹೊಣೆಗೇಡಿತನದ ಪರಮಾವಧಿಯಾಗಿದೆ.

ಕರ್ನಾಟಕದ ರಾಜಕಾರಣಿಗಳು ಅದರಲ್ಲೂ ಮುಖ್ಯ ಪ್ರತಿಪಕ್ಷವಾದ ಬಿಜೆಪಿ ನಾಯಕರು ಕೂಡ ಇಂಥ ಘೋರ ಘಟನೆಗಳ ಬಗ್ಗೆ ಬಾಯಿ ಬಿಡುವುದಿಲ್ಲ. ಕ್ಷುಲ್ಲಕ ರಾಜಕೀಯ ಕಿತ್ತಾಟಗಳಲ್ಲಿ ಮುಳುಗಿರುವ ಇವರಿಗೆ ಸಂತ್ರಸ್ತ ಕುಟುಂಬಗಳ ನೋವಿಗೆ ಸ್ಪಂದಿಸುವ ಆಸಕ್ತಿಯೂ ಇಲ್ಲ. ಇನ್ನು ವೇದಿಕೆಗಳಲ್ಲಿ ಧರ್ಮ, ಸಂಸ್ಕೃತಿಗಳ ಬಗ್ಗೆ ಪರಾಕ್ರಮದ ಭಾಷಣಗಳನ್ನು ಮಾಡುವ ಸಂಘಟನೆಗಳು ಕೂಡ ಇಂಥ ಮಾನವೀಯ ದುರಂತಗಳಿಗೆ ಎಂದೂ ಸ್ಪಂದಿಸುವುದಿಲ್ಲ. ಇಂಥ ಪ್ರಕರಣಗಳು ಸಂಭವಿಸಿದಾಗ ಅಪರಾಧಿಗಳ ಮೇಲೆ ಕ್ರಮವನ್ನು ಜರುಗಿಸುವ ಬಗ್ಗೆ ಸರಕಾರದ ಮೇಲೆ ಒತ್ತಡ ತರಬೇಕಾದವರು ಮಾಡಬೇಕಾದ ಕೆಲಸವನ್ನು ಮಾಡುವುದನ್ನು ಬಿಟ್ಟು ಉಳಿದುದನ್ನೆಲ್ಲ ಮಾಡುತ್ತಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ) ಇತ್ತೀಚೆಗೆ ಬಿಡುಗಡೆ ಮಾಡಿರುವ 2023ರ ವಾರ್ಷಿಕ ವರದಿಯ ಪ್ರಕಾರ ಮಹಿಳೆಯರ ಮೇಲೆ ದೇಶದಲ್ಲೇ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆದಿರುವುದು ಬಿಜೆಪಿಯ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ (66,381). ನಂತರದ ಸ್ಥಾನ ಮಹಾರಾಷ್ಟ್ರದ್ದು (47,101). ಮೂರನೇ ಸ್ಥಾನ ರಾಜಸ್ಥಾನದ್ದು (45,450). ಪಶ್ಚಿಮ ಬಂಗಾಳದಲ್ಲಿ 34,691 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 2023ರಲ್ಲಿ 656 ಪ್ರಕರಣಗಳು ವರದಿಯಾಗಿವೆ. ಕರ್ನಾಟಕವನ್ನು ಉತ್ತರ ಪ್ರದೇಶದಂತೆ ಮಾದರಿ ರಾಜ್ಯ ಮಾಡಲು ಹೊರಟವರು ಈ ಅಧಿಕೃತ ಅಂಕಿ ಅಂಶಗಳನ್ನು ಗಮನಿಸಬೇಕು.

ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಹತ್ಯೆಗಳನ್ನು ತಡೆಯಲು ಸರಕಾರ ಕಠಿಣ ಕಾನೂನುಗಳನ್ನು ಮಾಡಿದರೆ ಸಾಲದು, ಸಮಾಜದಲ್ಲಿ ಮಹಿಳೆಯರ ಬಗೆಗಿನ ಮನೋಭಾವ ಕೂಡ ಬದಲಾಗಬೇಕಾಗಿದೆ. ಹೆಣ್ಣು ಗಂಡಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಶಿಕ್ಷಣ, ತಂತ್ರಜ್ಞಾನ, ವಿಜ್ಞಾನ, ನ್ಯಾಯಾಂಗ, ರಾಜಕೀಯ ಎಲ್ಲದರಲ್ಲೂ ಹೆಣ್ಣು ಮಕ್ಕಳು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಪುರುಷಾಧಿಪತ್ಯದ ಸಮಾಜ ಇನ್ನೂ ಹೆಣ್ಣನ್ನು ಕೇವಲ ಭೋಗದ ವಸ್ತುವನ್ನಾಗಿ ಕಾಣುತ್ತಿದೆ. ಹೆಣ್ಣಿನ ಪ್ರತಿಭೆ, ಸಾಮರ್ಥ್ಯ, ಅಸ್ಮಿತೆಯನ್ನು ಗೌಣವಾಗಿ ನೋಡುತ್ತಿದೆ. ಧರ್ಮದ ಹೆಸರಿನಲ್ಲಿ ಕೋಮುವಾದವನ್ನು ಪ್ರಚೋದಿಸುವ ಸಂಘಟನೆಗಳು ಕೂಡ ಹೆಣ್ಣು ಮಕ್ಕಳ ಈ ಅಸುರಕ್ಷಿತ ಸ್ಥಿತಿಯ ಬಗ್ಗೆ ಎಂದೂ ಸ್ಪಂದಿಸುವುದಿಲ್ಲ. ಧರ್ಮಗುರುಗಳು ಕೂಡ ಬರೀ ಒಣ ಉಪದೇಶವನ್ನು ಬಿಟ್ಟರೆ ಬೇರೇನನ್ನೂ ಮಾಡುವುದಿಲ್ಲ. ಆರೆಸ್ಸೆಸ್ ಸರ ಸಂಘಚಾಲಕ ಮೋಹನ್ ಭಾಗವತರಂಥವರು ಕೂಡ ಮಹಿಳೆಯರು ಅಡಿಗೆ ಮನೆಯನ್ನು ಬಿಟ್ಟು ಹೊರಗೆ ಬರಬಾರದೆಂಬ ಅರ್ಥದಲ್ಲಿ ಮಾತನಾಡುತ್ತಾರೆ. ಮಹಿಳೆಯರ ಬಗ್ಗೆ ಸಮಾಜದ ದೃಷ್ಟಿ ಕೋನ ಬದಲಾಗಬೇಕಾಗಿರುವುದು ತುರ್ತು ಅಗತ್ಯವಾಗಿದೆ.

ಮಹಿಳೆಯರ ಮೇಲಿನ ದೌರ್ಜನ್ಯಕ್ಕಿಂತ ಘೋರವಾದ ಸಂಗತಿಯೆಂದರೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ. ಈ ಕುರಿತು ಅಧಿಕೃತ ಅಂಕಿ ಅಂಶಗಳು ತೀರಾ ಕಳವಳಕಾರಿಯಾಗಿವೆ. 2017ರಿಂದ 2022ರ ಕಾಲಾವಧಿಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (ಪೊಕ್ಸೊ) ಅಡಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 33,210ರಿಂದ 64,469ಕ್ಕೆ ಏರಿಕೆಯಾಗಿದೆ. ಇದು ಬರೀ ನಿರ್ಜೀವ ಅಂಕಿ ಸಂಖ್ಯೆಯಲ್ಲ. ಲಕ್ಷಾಂತರ ಮಕ್ಕಳ ದೈಹಿಕ, ಮಾನಸಿಕ, ಭಾವನಾತ್ಮಕ ಹಿಂಸೆಗೆ ಹಿಡಿದ ಕನ್ನಡಿಯಾಗಿದೆ. ಇವು ವರದಿಯಾದ ಅಂಕಿ ಅಂಶಗಳು. ವರದಿಯಾಗದ, ಬೆಳಕಿಗೆ ಬಾರದ ಪ್ರಕರಣಗಳು ಎಷ್ಟಿವೆ ಯಾರಿಗೆ ಗೊತ್ತು?

ಚೈಲ್ಡ್ ಲೈಟ್ ಸಂಸ್ಥೆಯ ಇತ್ತೀಚಿನ ವರದಿಯ ಪ್ರಕಾರ 2024ರಲ್ಲಿ ಭಾರತದಲ್ಲಿ 2.25 ದಶಲಕ್ಷ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದು ದಕ್ಷಿಣ ಏಶ್ಯದಲ್ಲೇ ಅತ್ಯಂತ ಹೆಚ್ಚು ಎಂದು ಅಧಿಕೃತ ಮೂಲಗಳು ಹೇಳುತ್ತವೆ. ಒಟ್ಟಾರೆ ನಮ್ಮ ಸಮಾಜದಲ್ಲಿ ಮಕ್ಕಳಿಗೆ ಸುರಕ್ಷಿತವಾದ ವಾತಾವರಣ ಇಲ್ಲ. ಇದನ್ನು ತೊಡೆದು ಹಾಕಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೊಕ್ಸೊ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಿ ಜಾರಿಗೆ ತರುವುದು ತುರ್ತು ಅಗತ್ಯವಾಗಿದೆ. ಎಳೆ ಮಕ್ಕಳ ಮೇಲಿನ ಈ ಲೈಂಗಿಕ ದೌರ್ಜನ್ಯದ ಬಗ್ಗೆ ಸರಕಾರ ಕ್ರಮ ಕೈಗೊಂಡರೆ ಸಾಲದು, ಈ ವಿಷಯದಲ್ಲಿ ಸಮಾಜದ ಅಂದರೆ ಸಾರ್ವಜನಿಕರ ಜವಾಬ್ದಾರಿಯೂ ಸಾಕಷ್ಟಿದೆ. ಮಕ್ಕಳು ನಾಳಿನ ನಾಗರಿಕರು ಎಂದು ಒಣ ಮಾತನ್ನು ಹೇಳಿದರೆ ಸಾಲದು. ಮಕ್ಕಳು ಸುರಕ್ಷಿತವಾಗಿ ಬದುಕುವಂತಹ ವಾತಾವರಣವನ್ನು ನಿರ್ಮಿಸಬೇಕಾಗಿದೆ. ತಮ್ಮ ಪೀಠಗಳ ಸುರಕ್ಷತೆಗಾಗಿ ಧರ್ಮ ಮತ್ತು ಕೋಮು ರಾಜಕೀಯ ಮಾಡುವ ಮಠಾಧೀಶರು, ಧರ್ಮ ಗುರುಗಳು ಮಕ್ಕಳ ಆಕ್ರಂದನಕ್ಕೆ ಸ್ಪಂದಿಸಬೇಕಾಗಿದೆ. ಮಕ್ಕಳ ಮಾನಸಿಕ ಸ್ಥಿತಿಗತಿಗಳ ಬಗ್ಗೆ ಉಚಿತವಾದ ಮನೋ ವೈದ್ಯಕೀಯ ನೆರವನ್ನು ಒದಗಿಸಬೇಕಾಗಿದೆ. ಮಕ್ಕಳು ಮತ್ತು ಮಹಿಳೆಯರಿಗೆ ಸುರಕ್ಷಿತವಾದ ವಾತಾವರಣ ನಿರ್ಮಾಣವಾಗದೆ ದೇಶ ಏನೇ ಅಭಿವೃದ್ಧಿ ಸಾಧಿಸಿದರೂ ಅದಕ್ಕೆ ಅರ್ಥವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X