Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ವಿರೋಧ ಪಕ್ಷ ನಾಯಕನೆಲ್ಲಿ?

ವಿರೋಧ ಪಕ್ಷ ನಾಯಕನೆಲ್ಲಿ?

ವಾರ್ತಾಭಾರತಿವಾರ್ತಾಭಾರತಿ3 July 2023 12:15 AM IST
share
ವಿರೋಧ ಪಕ್ಷ ನಾಯಕನೆಲ್ಲಿ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ಸೋಮವಾರದಿಂದ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸರಕಾರ ಅಲ್ಪಾವಧಿಯಲ್ಲೇ ಮಹತ್ತರವಾದ ನಿರ್ಧಾರಗಳನ್ನು ಕೈಗೆತ್ತಿಕೊಂಡಿದೆ. ಅದರ ಸಾಧಕ ಬಾಧಕಗಳು ಅಧಿವೇಶನದಲ್ಲಿ ಅವಶ್ಯವಾಗಿ ಚರ್ಚೆ ನಡೆಯಬೇಕು. ಒಂದೆಡೆ, ತಾನು ಘೋಷಿಸಿರುವ ಗ್ಯಾರಂಟಿಗಳ ಅನುಷ್ಠಾನಕ್ಕೆ ಸರಕಾರ ಶತಾಯಗತಾಯ ಹೆಣಗಾಡುತ್ತಿದೆ. ಶಕ್ತಿ ಯೋಜನೆ ಈಗಾಗಲೇ ಜನಪ್ರಿಯತೆಯನ್ನು ಪಡೆದಿದೆ. ಗೃಹಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳ ಅನುಷ್ಠಾನಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಸಾಕಷ್ಟು ಟೀಕೆ, ಪ್ರತಿ ಟೀಕೆಗಳ ನಡುವೆ ಅನ್ನ ಭಾಗ್ಯ ಯೋಜನೆಯ ಜಾರಿಯ ಸಿದ್ಧತೆಯೂ ಪೂರ್ಣಗೊಂಡಿದೆ. ಬಿಜೆಪಿ ಸರಕಾರ ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದ ವಿವಾದಾತ್ಮಕ ಮತಾಂತರ ಕಾಯ್ದೆಯಲ್ಲಿ ತಿದ್ದುಪಡಿ ಮಾಡುವುದಕ್ಕೆ ಮುಂದಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆಯೂ ಭರವಸೆಯನ್ನು ನೀಡಿದೆ. ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ರಾಜ್ಯದ ಅಭಿವೃದ್ಧಿಯ ದಿಕ್ಕನ್ನೇ ಬದಲಿಸಬಲ್ಲ ಮಹತ್ವದ ನಿರ್ಧಾರಗಳನ್ನು ಒಂದರ ಹಿಂದೆ ಒಂದರಂತೆ ಯಾವ ಸರಕಾರವೂ ಈ ಹಿಂದೆ ತೆಗೆದುಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ಸರಕಾರದ ಪ್ರತೀ ಹೆಜ್ಜೆಗಳು ವಿರೋಧ ಪಕ್ಷದ ಕಣ್ಗಾವಲಲ್ಲಿರಬೇಕು. ದುರದೃಷ್ಟವಶಾತ್ ಸರಕಾರ ರಚನೆಯಾಗಿ ತಿಂಗಳು ಕಳೆದಿದ್ದರೂ, ರಾಜ್ಯದಲ್ಲಿ ವಿರೋಧ ಪಕ್ಷ ಇಲ್ಲವೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಆಯ್ಕೆಯ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿ ಎದುರಾಗದ ಬಿಕ್ಕಟ್ಟು, ವಿರೋಧ ಪಕ್ಷದ ನಾಯಕರ ಆಯ್ಕೆಯ ಸಂದರ್ಭದಲ್ಲಿ ಬಿಜೆಪಿಗೆ ಎದುರಾಗಿದೆ. ಅಧಿಕಾರ ಕಳೆದುಕೊಂಡ ಬಿಜೆಪಿಯ ಸ್ಥಿತಿಯೇ ಹೀಗಿದೆ ಎಂದಾದರೆ, ಒಂದು ವೇಳೆ ಅಧಿಕಾರ ಕೈಯಲ್ಲಿದ್ದರೆ ಬಿಜೆಪಿಯ ಗತಿ ಏನಾಗಿ ಬಿಡುತ್ತಿತ್ತ್ತು ಎಂದು ಜನರು ಯೋಚಿಸುವಂತಾಗಿದೆ. ಕಾಂಗ್ರೆಸ್ ಪಕ್ಷವಂತೂ ‘‘ವಿರೋಧ ಪಕ್ಷದ ನಾಯಕ ಬೇಕಾಗಿದ್ದಾನೆ’’ ಎನ್ನುವ ಅಭಿಯಾನವನ್ನೇ ಆರಂಭಿಸಿದೆ.

ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬೆನ್ನಿಗೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ರಾಜೀನಾಮೆ ನೀಡುವುದು ಅತ್ಯಗತ್ಯವಾಗಿತ್ತು. ಈಗಾಗಲೇ ಅವರ ಅಧಿಕಾರಾವಧಿಯೂ ಮುಗಿದಿರುವುದರಿಂದ ಮತ್ತು ರಾಜೀನಾಮೆ ನೀಡಲು ಕಟೀಲು ತುದಿಗಾಲಲ್ಲಿ ನಿಂತಿರುವುದರಿಂದ ಇದು ಎಂದೋ ನಡೆಯಬೇಕಾಗಿದ್ದ ಪ್ರಕ್ರಿಯೆ. ಕೆಲವು ದಿನಗಳ ಹಿಂದೆ ‘ರಾಜೀನಾಮೆಯನ್ನು ಘೋಷಿಸಿ’ ಬಳಿಕ ವರಿಷ್ಠರ ಸಲಹೆಯಂತೆ ರಾಜೀನಾಮೆಯನ್ನು ಕಟೀಲ್ ಅವರು ಹಿಂದೆಗೆದುಕೊಂಡಿದ್ದರು. ಸಂಸದನಾಗಿ ಕರಾವಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಅತಿ ಹೆಚ್ಚು ಟೀಕೆ ಎದುರಿಸಿರುವ ನಳಿನ್ ಕುಮಾರ್ ಕಟೀಲು ಅವರನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದಾಗಲೇ, ತೀವ್ರ ಅಸಮಾಧಾನ ಬಿಜೆಪಿಯೊಳಗೆ ವ್ಯಕ್ತವಾಗಿತ್ತು. ಯಾವುದೇ ವಿದ್ವತ್ತು, ಮುತ್ಸದ್ದಿತನ, ಪ್ರಬುದ್ಧತೆ, ಹಿರಿತನಗಳಿಲ್ಲದ ಕಟೀಲರನ್ನು ನೇಮಕ ಮಾಡುವುದರ ಹಿಂದೆ ಆರೆಸ್ಸೆಸ್ ಕಾರ್ಯತಂತ್ರವಿತ್ತು. ಹೆಸರಿಗಷ್ಟೇ ಒಬ್ಬ ರಾಜ್ಯಾಧ್ಯಕ್ಷನನ್ನು ನೇಮಿಸಿ ಆತನ ಮೂಲಕ ಬಿಜೆಪಿಯನ್ನು ನಿಯಂತ್ರಿಸುವ ಉದ್ದೇಶವನ್ನು ಆರೆಸ್ಸೆಸ್ ಹೊಂದಿತ್ತು. ಆದುದರಿಂದ ಸದ್ಯಕ್ಕೆ ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪಕ್ಷಾಧ್ಯಕ್ಷ ನಳಿನ್‌ಕುಮಾರ್ ಅವರನ್ನು ಹೊಣೆಮಾಡುವುದಕ್ಕಿಂತ ಆರೆಸ್ಸೆಸ್‌ನೊಳಗಿರುವ ಮುಖಂಡರನ್ನು ಹೊಣೆ ಮಾಡುವುದು ಸೂಕ್ತ.

ಇದೀಗ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕರ ಆಯ್ಕೆಯಲ್ಲಿ ಮತ್ತೆ ಆರೆಸ್ಸೆಸ್ ಮತ್ತೆ ಮೂಗು ತೂರಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯೊಳಗಿರುವ ಹಿರಿಯರನ್ನು ಹೊರಗಿಡುವ ಪ್ರಯತ್ನದ ಮುಂದುವರಿದ ಭಾಗ ಇದಾಗಿದೆ. ಹೀನಾಯ ಸೋಲಿನಿಂದಾಗಿ ಮುಖಭಂಗಕ್ಕೀಡಾಗಿರುವ ಆರೆಸ್ಸೆಸ್ ಆಯ್ಕೆ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗಿಯಾಗದಿದ್ದರೂ, ಹಿಂಬಾಗಿಲ ಮೂಲಕ ಹಸ್ತ ಕ್ಷೇಪ ನಡೆಸುತ್ತಿದೆ. ನಳಿನ್‌ಕುಮಾರ್ ಕಟೀಲು ಅಧ್ಯಕ್ಷ ಸ್ಥಾನದಿಂದ ಇಳಿಸಿ ಆ ಜಾಗಕ್ಕೆ ಅವರಿಗೆ ಸಾಟಿಯಾಗಬಲ್ಲ ಇನ್ನೊಬ್ಬ ಸೂತ್ರದ ಗೊಂಬೆಯ ಹುಡುಕಾಟದಲ್ಲಿದೆ. ಇದೇ ಸಂದರ್ಭದಲ್ಲಿ ಪಕ್ಷದ ಹಲವು ಹಿರಿಯರು ‘ರಾಜ್ಯಾಧ್ಯಕ್ಷ ಸ್ಥಾನವನ್ನು ನಿರ್ವಹಿಸಲು ಸಿದ್ಧ’ ಎಂದು ಘೋಷಿಸಿದ್ದಾರೆ. ಆದರೆ ಅವರ ಕೈಗೆ ಬಿಜೆಪಿಯ ಚುಕ್ಕಾಣಿಯನ್ನು ನೀಡಲು ಆರೆಸ್ಸೆಸ್ ಸಿದ್ಧವಿಲ್ಲ. ಬಿಜೆಪಿಯೊಳಗೆ ಈಗಾಗಲೇ ಬ್ರಾಹ್ಮಣ್ಯ ಲಾಬಿ ತೀವ್ರ ಹಿನ್ನಡೆ ಅನುಭವಿಸಿರುವುದರಿಂದ ಲಿಂಗಾಯತ ಅಥವಾ ಶೂದ್ರ ನಾಯಕನ ಕೈಗೆ ಪಕ್ಷದ ಚುಕ್ಕಾಣಿಯನ್ನು ಕೊಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕಾಗಿ ಆರೆಸ್ಸೆಸ್‌ಗೆ ಸದ್ಯಕ್ಕೆ ಬೇಕಾಗಿರುವುದು ಅನುಭವಿ, ಮುತ್ಸದ್ದಿ ಹಿರಿಯ ಬಿಜೆಪಿ ನಾಯಕರಲ್ಲ. ಆರೆಸ್ಸೆಸ್‌ನ ದ್ವೇಷ ಅಜೆಂಡಾಗಳನ್ನು ಸಾಧಿಸಿ ಕೊಡಬಲ್ಲ ಸಿ.ಟಿ. ರವಿ, ಅಶ್ವತ್ಥನಾರಾಯಣ್, ಯತ್ನಾಳ್‌ರಂತಹ ನಾಯಕರನ್ನು ಮುಂದಿಟ್ಟು ಆಟವಾಡಲು ಸಿದ್ಧತೆ ನಡೆಸುತ್ತಿದೆ. ಸದ್ಯಕ್ಕೆ ಕಾಂಗ್ರೆಸ್ ಅಭಿವೃದ್ಧಿಯ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ರಾಜಕಾರಣದ ಬಗ್ಗೆ ಮೊದಲಿಂದಲೂ ಬಿಜೆಪಿಗೆ ನಂಬಿಕೆಯಿಲ್ಲ. ಆ ಮೂಲಕ ಅಧಿಕಾರಕ್ಕೆ ಬರುವುದು ಸಾಧ್ಯವೂ ಇಲ್ಲ ಎನ್ನುವುದು ಆರೆಸ್ಸೆಸ್‌ಗೆ ಸ್ಪಷ್ಟವಿದೆ. ಆದುದರಿಂದ ಅದು ರಾಜ್ಯದಲ್ಲಿ ಮತ್ತೆ ದ್ವೇಷ ರಾಜಕಾರಣವನ್ನು ಹುರಿದುಂಬಿಸಲಿದೆ. ಈಗಾಗಲೇ ಸಂಘಪರಿವಾರ ಸಂಘಟನೆಗಳು ಅಲ್ಲಲ್ಲಿ ಉದ್ವಿಗ್ನಕಾರಿ ಹೇಳಿಕೆಗಳನ್ನು ನೀಡಲು ಶುರುಹಚ್ಚಿವೆ. ಅದಕ್ಕೆ ಪೂರಕವಾಗಿ ಕೆಲಸ ಮಾಡುವ ನಾಯಕನ ಕೈಗೆ ಬಿಜೆಪಿಯ ಚುಕ್ಕಾಣಿಯನ್ನು ನೀಡುವ ಪ್ರಯತ್ನದಲ್ಲಿದೆ.

ಟಿಕೆಟ್ ಹಂಚಿಕೆಯ ಸಂದರ್ಭದಲ್ಲಿ ಆರೆಸ್ಸೆಸ್ ನಾಯಕರ ಹಸ್ತಕ್ಷೇಪ ಬಿಜೆಪಿಯನ್ನು ರಾಜ್ಯದಲ್ಲಿ ಹೀನಾಯ ಸ್ಥಿತಿಗೆ ತಂದು ನಿಲ್ಲಿಸಿದೆ. ಇದೀಗ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕರ ಆಯ್ಕೆಯಲ್ಲಿ ನಡೆಸುತ್ತಿರುವ ಹಸ್ತಕ್ಷೇಪ ಕೂಡ ಬಿಜೆಪಿಯನ್ನು ಇನ್ನಷ್ಟು ಜರ್ಜರಿತಗೊಳಿಸಲಿದೆ. ಟಿಕೆಟ್ ಹಂಚುವಿಕೆಯ ಸಂದರ್ಭದಲ್ಲಿ ಆರೆಸ್ಸೆಸ್ ಮಾಡಿರುವ ದ್ರೋಹದ ಅರಿವಿರುವ ಬಿಜೆಪಿಯ ಹಿರಿಯ ನಾಯಕರಾರು ಮುಂದಿನ ದಿನಗಳಲ್ಲಿ ಸುಮ್ಮನಿರಲಾರರು. ಹಿರಿಯ ನಾಯಕ ಸೋಮಣ್ಣ ಒಳಗಿಂದೊಳಗೆ ಭುಸುಗುಟ್ಟುತ್ತಿದ್ದಾರೆ. ಯಡಿಯೂರಪ್ಪ ಅವರು ಆರೆಸ್ಸೆಸ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ತನ್ನ ಹಿಂಬಾಲಕರ ಮೂಲಕವೇ ಅವರು ಆರೆಸ್ಸೆಸ್ ವಿರುದ್ಧ ಬಾಣ ಬಿಡುತ್ತಿದ್ದಾರೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್‌ನಲ್ಲಿದ್ದರೂ ಬಿಜೆಪಿಯೊಳಗಿರುವ ಜೋಶಿ, ಸಂತೋಷ್‌ರನ್ನು ಬಗ್ಗು ಬಡಿಯುವುದಕ್ಕಾಗಿಯೇ ತಮ್ಮ ಅಳಿದುಳಿದ ರಾಜಕೀಯ ಬದುಕನ್ನು ಮೀಸಲಿಟ್ಟಂತೆ ವರ್ತಿಸುತ್ತಿದ್ದಾರೆ. ನಾಳೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾದರೂ, ಹಾಗೆ ಆಯ್ಕೆಯಾದ ನಾಯಕ ಏಕಕಾಲದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸಬೇಕಾದ ಒತ್ತಡಕ್ಕೆ ಸಿಲುಕುವ ಸಾಧ್ಯತೆ ಇದೆ. ಆ ನಾಯಕನಿಗೆ ಬಿಜೆಪಿಯೊಳಗಿರುವ ಹಿರಿಯ ನಾಯಕರು ತಮ್ಮ ಸಹಕಾರವನ್ನು ನೀಡುವ ಸಾಧ್ಯತೆಗಳಿಲ್ಲ. ಆಪರೇಷನ್ ಕಮಲ, ದ್ವೇಷ ರಾಜಕಾರಣಗಳನ್ನು ನೆಚ್ಚಿ ಕೊಂಡು ಕರ್ನಾಟಕದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸಿದ ಫಲವಾಗಿ ಇಂದು ಬಿಜೆಪಿಯಲ್ಲಿ ಮುತ್ಸದ್ದಿ ರಾಜಕಾರಣಿಗಳ ಕೊರತೆ ಎದ್ದು ಕಾಣುತ್ತಿದೆ. ಹಣ ಮತ್ತು ದ್ವೇಷಕ್ಕೆ ಹೊರತಾದ ಬೇರೆ ಮಾರ್ಗಗಳು ಬಿಜೆಪಿ ನಾಯಕರ ಬಳಿ ಇಲ್ಲ. ಬಿಜೆಪಿಯೊಳಗಿರುವ ಯಡಿಯೂರಪ್ಪ ಅವರಂತಹ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಕ್ಕೆ ಹೆಜ್ಜೆ ಯಿಡದೇ ಇದ್ದರೆ ಅದು ಮುಂದಿನ ದಿನಗಳಲ್ಲಿ ಇನ್ನಷ್ಟು ಹಾಸ್ಯಾಸ್ಪದಕ್ಕೀಡಾಗಬಹುದು. ರಾಜ್ಯದಲ್ಲಿ ವಿರೋಧ ಪಕ್ಷವೇ ಇಲ್ಲ ಎನ್ನುವಂತಹ ಸ್ಥಿತಿಯ ಸಂಪೂರ್ಣ ಲಾಭವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತನ್ನದಾಗಿಸಿಕೊಳ್ಳಬಹುದು. ದಿಲ್ಲಿಯ ವರಿಷ್ಠರು ಆರೆಸ್ಸೆಸ್‌ನ ಪುಂಗಿಗೆ ತಲೆಯಾಡಿಸುವುದನ್ನು ನಿಲ್ಲಿಸಿ, ಕರ್ನಾಟಕದ ವಾಸ್ತವವನ್ನು ಅರ್ಥಮಾಡಿಕೊಂಡು ಅದಕ್ಕೆ ಪೂರಕವಾಗಿ ಬಿಜೆಪಿಯನ್ನು ಇಲ್ಲಿ ಹೊಸದಾಗಿ ಕಟ್ಟುವುದಕ್ಕೆ ಮುಂದಾಗಬೇಕು. ಕಾಂಗ್ರೆಸ್‌ನ ಅಭಿವೃದ್ಧಿ ರಾಜಕಾರಣಕ್ಕೆ ಆ ಮೂಲಕವೇ ಉತ್ತರಿಸುವುದಕ್ಕೆ ಬಿಜೆಪಿ ಸಿದ್ಧತೆ ನಡೆಸದೇ ಇದ್ದರೆ ಬಿಜೆಪಿಗೆ ಉಳಿಗಾಲವಿಲ್ಲ. ಅದಕ್ಕೆ ಅರ್ಹರಾದ ಹಿರಿಯ, ಅನುಭವಿ, ಪ್ರಬುದ್ಧ ನಾಯಕನನ್ನು ಗುರುತಿಸುವ ಕೆಲಸ ವರಿಷ್ಠರಿಂದ ನಡೆಯಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X