Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಸತ್ ನಲ್ಲಿ ಭದ್ರತಾ ವೈಫಲ್ಯ: ಪ್ರತಾಪ್...

ಸಂಸತ್ ನಲ್ಲಿ ಭದ್ರತಾ ವೈಫಲ್ಯ: ಪ್ರತಾಪ್ ಸಿಂಹ ಉಚ್ಚಾಟನೆಯಾಗಲಿ, ಅಮಿತ್ ಶಾ ರಾಜೀನಾಮೆ ನೀಡಲಿ: ಆಪ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 Dec 2023 11:55 AM IST
share
ಸಂಸತ್ ನಲ್ಲಿ ಭದ್ರತಾ ವೈಫಲ್ಯ: ಪ್ರತಾಪ್ ಸಿಂಹ ಉಚ್ಚಾಟನೆಯಾಗಲಿ, ಅಮಿತ್ ಶಾ ರಾಜೀನಾಮೆ ನೀಡಲಿ: ಆಪ್ ಒತ್ತಾಯ

ಮಂಗಳೂರು, ಡಿ.15: ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್ ಸಿಂಹರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್ ಶಾ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ಹೊಸ ಸಂಸತ್ತು ಉದ್ಘಾಟನೆಗೊಂಡ ನಂತರ ನಡೆದಿರುವ ಎರಡನೇ ಭದ್ರತಾ ಲೋಪ ಇದಾಗಿದೆ. 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ, ಇದರ ಹಿಂದೆ ಬೇರೆ ಹುನ್ನಾರಗಳಿರಬಹುದು. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಸೃಷ್ಟಿಸಿವೆ. ಮೈಸೂರಿನ ಮೂಲದ ಮನೋರಂಜನ್ ಅವರಿಗೆ ಈ ಮೊದಲು ಪ್ರತಾಪ್ ಸಿಂಹ ಅವರೇ ಎರಡು ಬಾರಿ ಪಾಸ್ ನೀಡಿದ್ದರು ಎನ್ನಲಾಗುತ್ತಿದೆ. ಸಂಸತ್ ಸಭಾಂಗಣ ಪ್ರವೇಶಿಸಲು ಪಾಸ್ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್ ಕೊಟ್ಟ ಸಂಸದರೇ ಜವಾಬ್ದಾರರಾಗಿರುತ್ತಾರೆ. ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಇದೆಲ್ಲವೂ ಪಾಸ್ನಲ್ಲಿ ಉಲ್ಲೇಖವಾಗಿರುತ್ತದೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಉಚ್ಚಾಟಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ದ.ಕ. ಜಿಲ್ಲಾಧ್ಯಕ್ಷ ಡಾ. ವಿಶುಕುಮಾರ್ ಒತ್ತಾಯಿಸಿದ್ದಾರೆ.

ಸಂಸತ್ತಿಗೆ ರಕ್ಷಣೆ ನೀಡಲಾಗದವರು, ಪ್ರಶ್ನಿಸಿದ ಸಂಸದರನ್ನು ಅಮಾನತುಗೊಳಿಸಿ ಪೌರುಷ ಮೆರೆಯುತ್ತಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುತ್ತಿದ್ದಾರೆ. ಆದರೆ ಈ ಭದ್ರತಾ ವೈಫಲ್ಯಕ್ಕೆ ಮೂಲ ಸಂಸದ ಪ್ರತಾಪ್ ಸಿಂಹ. ಅವರು ಪಾಸ್ ನೀಡಿದ್ದರಿಂದಲೇ ಈ ಎಲ್ಲ ಅನಾಹುತಗಳಿಗೆ ಕಾರಣ. ಪ್ರತಾಪ್ ಸಿಂಹರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸುವ ಬದಲು ಭದ್ರತಾ ವೈಫಲ್ಯದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದ ಸಂಸದರನ್ನೇ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಸತ್ ಭವನ ಪ್ರವೇಶಿಸಲು ಪಾಸ್ ಹೊಂದಿರುವ ವ್ಯಕ್ತಿ ಬಿಗಿ ಭದ್ರತಾ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನೀರಿನ ಬಾಟಲಿ, ಮೊಬೈಲ್ ಫೋನ್, ಇಲೆಕ್ಟ್ರಾನಿಕ್ ಪರಿಕರ ಹಾಗೂ ಆಯುಧಗಳಂಥ ಯಾವುದೇ ವಸ್ತುಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ. ಪಾರ್ಲಿಮೆಂಟರಿ ಸೆಕ್ಯೂರಿಟಿ ಸರ್ವಿಸ್, ದಿಲ್ಲಿ ಪೊಲೀಸ್, ವಿವಿಧ ಏಜೆನ್ಸಿಗಳು, ಮ್ಯಾನುಯಲ್ ತಪಾಸಣೆ, ಬಾಡಿ ಸ್ಕ್ಯಾನರ್, ಮೆಟಲ್ ಡಿಟೆಕ್ಟರ್ ಹೀಗೆ ಹಲವು ಹಂತದ ಭದ್ರತಾ ವ್ಯವಸ್ಥೆಯಿರುವ ಸಂಸತ್ಗೆ ಗ್ಯಾಸ್ ಕ್ಯಾನ್ ಒಯ್ದಿದ್ದಾರೆ ಎಂದರೆ ಭದ್ರತಾ ವೈಫಲ್ಯವಲ್ಲದೆ ಬೇರೇನೂ ಕಾರಣವಲ್ಲ. ಆರೋಪಿಗಳಾಗಿ ಗುರುತಿಸಿಕೊಂಡಿರುವ ಮೈಸೂರು ಮೂಲದ ಮನೋರಂಜನ್, ಉತ್ತರ ಪ್ರದೇಶದ ಲಖನೌದ ಸಾಗರ್ ಶರ್ಮಾ, ಹರ್ಯಾಣದ ನೀಲಂ ಹಾಗೂ ಐಕ್ಕಿ ಶರ್ಮಾ, ಗುರುಗ್ರಾಮದ ಲಲಿತ್ ಝಾ ಮಹಾರಾಷ್ಟ್ರದ ಅಮೋಲ್ ಶಿಂಧೆ ಎಲ್ಲರೂ ಒಗ್ಗೂಡಿದ್ದು ಹೇಗೆ?

ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರ ಇಲಾಖೆಗೆ ಗೊತ್ತಾಗಲಿಲ್ಲವೇ? ಗೃಹ ಸಚಿವ ಅಮಿತ್ ಶಾ ದೇಶದ ಭದ್ರತೆ ವಿಚಾರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

=ಒಂದೆಡೆ ಚೀನಾದ ಸೇನೆ ಅರುಣಾಚಲ ಪ್ರದೇಶದ ಗಡಿಯನ್ನು ಅತಿಕ್ರಮಿಸಿ ಗ್ರಾಮಗಳನ್ನು ನಿರ್ಮಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಭಾರಿ ಏರಿಕೆಯಾಗಿದೆ. ದೇಶಕ್ಕೆ ರಕ್ಷಣೆ ನೀಡಬೇಕಾದ ಗೃಹ ಸಚಿವರು ತಮ್ಮ ಕೆಲಸವನ್ನು ಬಿಟ್ಟು ಚುನಾವಣೆಗಳನ್ನು ಹೇಗೆ ಗೆಲ್ಲುವುದು ಎಂಬ ತಂತ್ರ ಹೆಣೆಯುವುದರಲ್ಲೇ ಕಾಲಕಳೆಯುತ್ತಿದ್ದಾರೆ. ತನ್ನ ಕರ್ತವ್ಯವನ್ನು ನಿಭಾಯಿಸಲು ಆಗದ ಅಮಿತ್ ಶಾ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X