ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ - ವರ್ಲ್ಡ್ ರೆಕಾರ್ಡ್ ಆಫ್ ಎಕ್ಸೆಲೆನ್ಸ್ʼ ನಲ್ಲಿ ʼಶಕ್ತಿ ಯೋಜನೆʼ ಸೇರ್ಪಡೆ

ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯ 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆ International Book of Records - World Record of Excellenceಗೆ ಸೇರ್ಪಡೆಯಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು, ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದೆ. ಈಗಾಗಲೇ Golden Book of World Records ನಲ್ಲಿ ಸೇರ್ಪಡೆಯಾಗಿತ್ತು. ಇದರೊಂದಿಗೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಮತ್ತು ಮಹಿಳಾ ಪ್ರಯಾಣಿಕರಿಗೂ ಅಭಿನಂದನೆಯನ್ನು ಸಲ್ಲಿಸಿದ್ದಾರೆ.





