Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಸಂಘರ್ಷಗಳ ಹಾಟ್‌ಸ್ಪಾಟ್ ಆದ ಪಶ್ಚಿಮ...

ಸಂಘರ್ಷಗಳ ಹಾಟ್‌ಸ್ಪಾಟ್ ಆದ ಪಶ್ಚಿಮ ಘಟ್ಟಗಳು : ಪ್ರಕಾಶ್ ಕಮ್ಮರಡಿ

ವಾರ್ತಾಭಾರತಿವಾರ್ತಾಭಾರತಿ14 Jun 2026 12:39 AM IST
share
ಸಂಘರ್ಷಗಳ ಹಾಟ್‌ಸ್ಪಾಟ್ ಆದ ಪಶ್ಚಿಮ ಘಟ್ಟಗಳು : ಪ್ರಕಾಶ್ ಕಮ್ಮರಡಿ
‘ಮಲೆನಾಡು ಕೃಷಿ-ಅರಣ್ಯ ಸಂಘರ್ಷ ಮತ್ತು ಸಾಮರಸ್ಯ’ ಕಾರ್ಯಾಗಾರ

ಶಿವಮೊಗ್ಗ : ಪಶ್ಚಿಮ ಘಟ್ಟಗಳು ಪ್ರಸಕ್ತ ಜೀವ ವೈವಿಧ್ಯತೆಯ ಮಹಾತಾಣವಾಗಿಲ್ಲ. ಬದಲಾಗಿ ಸಂಘರ್ಷಗಳ ಹಾಟ್ ಸ್ಪಾಟ್ ಆಗಿದೆ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ ಡಾ. ಪ್ರಕಾಶ್ ಕಮ್ಮರಡಿ ಹೇಳಿದ್ದಾರೆ.

ಬೆಂಗಳೂರಿನ ‘ಪೃಥ್ವಿ’ ಟ್ರಸ್ಟ್ ಹಾಗೂ ಶಿವಮೊಗ್ಗದ ಪರಿಸರ ಅಧ್ಯಯನ ಕೇಂದ್ರ ಮಲೆನಾಡಿನ ರೈತ, ಬುಡಕಟ್ಟು ಮತ್ತು ಪರಿಸರ ಸಂಘಟನೆಗಳ ಸಹಯೋಗದೊಂದಿಗೆ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸಹಕಾರದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಮಲೆನಾಡು ಕೃಷಿ-ಅರಣ್ಯ ಸಂಘರ್ಷ ಮತ್ತು ಸಾಮರಸ್ಯ’ ಎಂಬ ವಿಷಯದ ಕುರಿತಾದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಒಕ್ಕಲೆಬ್ಬಿಸುವ ಕಾರ್ಯವು ಜನ ವಿರೋಧಿಯಾಗಿದೆ. ಪಂಪ್ಡ್ ಸ್ಟೋರೇಜ್ ವಿರುದ್ಧ ಜನರು ಗಟ್ಟಿಯಾದ ಹೋರಾಟ ಮಾಡುತ್ತಿದ್ದಾರೆ. ಒಂದು ಕಡೆ ಅರಣ್ಯ ಇಲಾಖೆಯು ಪರಿಸರ ಉಳಿಸಲು ಕಾನೂನಾತ್ಮಕವಾಗಿ ಕೆಲಸ ಮಾಡುತ್ತಿದ್ದರೆ, ಜನರು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಮೇಲೆ ಅವಲಂಬಿತರಾಗಿದ್ದು ವಿರೋಧಾಭಾಸಗಳನ್ನು ಕಾಣಬಹುದಾಗಿದೆ ಎಂದರು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಆರ್ಥಿಕ ತಜ್ಞ ಹಾಗೂ ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಮತ್ತು ಅರಣ್ಯ ಸಂಪನ್ಮೂಲ ನಿರ್ವಹಣಾ ಸಂರಕ್ಷಣಾಧಿಕಾರಿ ಎ.ಎಂ.ಅಣ್ಣಯ್ಯ, ಕೃಷಿ ಮತ್ತು ಅರಣ್ಯ ದೇಶದ ಪ್ರಗತಿಗೆ ಹಾಗೂ ಜೀವಸಂಕುಲದ ಉಳಿವಿಗೆ ಅತ್ಯಗತ್ಯವಾಗಿದ್ದು, ಎರಡರ ನಡುವಿನ ಸಾಮರಸ್ಯ ಮತ್ತು ಸಹಬಾಳ್ವೆ ಇಂದಿನ ತುರ್ತಾಗಿದೆ. ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಕರೆ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಸಚಿವ ಟಿ.ಎಸ್.ಹೂವಯ್ಯಗೌಡ ಮಾತನಾಡಿ, ಎಲ್ಲ ಜೀವಿಗಳು, ಪ್ರಾಣಿಗಳಿಗೂ ಬದುಕುವ ಹಕ್ಕು ಇದ್ದು, ಇವುಗಳ ಬಗ್ಗೆ ಯೋಚಿಸಬೇಕಿದೆ. ಕೃಷಿ ಮತ್ತು ಅರಣ್ಯ ವಿಷಯಗಳಲ್ಲಿ ಹಲವಾರು ಕಾನೂನು ತೊಡಕು ಇವೆ. ಯಾಂತ್ರಿಕ ಅಭಿವೃದ್ಧಿಯಿಂದ ಪರಿಸರ ನಾಶವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮರಸ್ಯದ ಕ್ರಮಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದರು.

ಪರಿಸರ ಅಧ್ಯಯನ ಕೇಂದ್ರ ಮತ್ತು ರೇಡಿಯೊ ಶಿವಮೊಗ್ಗ 90.8 ಎಫ್.ಎಂ. ನಿರ್ದೇಶಕ ಜನಾರ್ದನ ಜಿ.ಎಲ್. ಅವರು ಅರಣ್ಯ ನೀತಿಗಳು ಇತಿಹಾಸ, ವರ್ತಮಾನ ಹಾಗೂ ಭವಿಷ್ಯ ವಿಷಯ ಕುರಿತು, ಪರಿಸರ ಹೋರಾಟಗಾರ ಅಖಿಲೇಶ್ ಚಿಪ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಸಂಘರ್ಷ ವಿಷಯ ಕುರಿತು, ಅಡಿಕೆ ಬೆಳೆಗಾರರ ಸಂಘದ ಪ್ರಮುಖರಾದ ರಮೇಶ್ ಹೆಗಡೆ ಅವರು ಅರಣ್ಯ ಕಾಯ್ದೆಗಳು ಮತ್ತು ಅವಾಂತರಗಳು ವಿಷ ಯ ಕುರಿತು, ಕುವೆಂಪು ವಿವಿ ವನ್ಯಜೀವಿ ಸಂರಕ್ಷಣಾ ಅಧ್ಯಯನ ವಿಭಾಗದ ಡಾ.ವಿಜಯಕುಮಾರ್ ರಕ್ಷಿತಾರಣ್ಯ ಮತ್ತು ವನ್ಯಜೀವಿ, ರೈತ ಸಂಘರ್ಷ ವಿಷಯದ ಕುರಿತು ವಿಷಯ ಮಂಡನೆ ಮಾಡಿದರು. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಶಿವಮೊಗ್ಗದ ರೈತ ಸಂಘಟನೆಯ ಮುಖಂಡ ಕೆ.ಟಿ. ಗಂಗಾಧರ್ ವಹಿಸಿದ್ದರು.ಕಾರ್ಯಾಗಾರದ ಸಮಾರೋಪ ಹಾಗೂ ’ಮುಂದಿನ ಹೆಜ್ಜೆ’ಯ ಕುರಿತಾದ ಕೊನೆಯ ಗೋಷ್ಠಿಯ ಅಧ್ಯಕ್ಷತೆಯನ್ನು ಅಡಿಕೆ ಬೆಳೆಗಾರರ ಸಂಘಟನೆಯ ಬಿ.ಆರ್. ಜಯಂತ್ ವಹಿಸಿದ್ದರೆ, ಡಾ. ಪ್ರಕಾಶ್ ಕಮ್ಮರಡಿ ನಿರ್ವಹಿಸಿದರು.

ರೈತ ಮುಖಂಡರಾದ ಎಚ್.ಆರ್.ಬಸವರಾಜಪ್ಪ, ಬುಡಕಟ್ಟು ಸಂಘಟನೆಯ ಮುಖಂಡರಾದ ರಾಮಣ್ಣ ಹಸಲರ್, ಪರಿಸರ ಸಂಘಟನೆಯ ಶೈಲೇಂದ್ರ ಬಂದಗದ್ದೆ ಹಾಗೂ ತಾಳಗುಪ್ಪದ ರೈತ ಮಹಿಳೆ ಪೂರ್ಣಿಮಾ ಅವರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯ ಮಂಡಿಸಿದರು. ಕಾರ್ಯಾಗಾರದಲ್ಲಿ ಕವಿತಾ ಹಾಜರಿದ್ದರು.

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.64 ಅರಣ್ಯ ಭೂಮಿ ಇದೆ. ಆದರೆ, ಪಶ್ಚಿಮ ಘಟ್ಟಗಳಲ್ಲಿ ಸಾಮರಸ್ಯಕ್ಕಿಂತ ಸಂಘರ್ಷವೇ ಹೆಚ್ಚಾಗಿದೆ. ಈ ಸಂಘರ್ಷವನ್ನು ತಗ್ಗಿಸಿ ಸಾಮರಸ್ಯದಿಂದ ಬದುಕುವ ಕ್ರಮಗಳನ್ನು ಹೆಚ್ಚಿಸಬೇಕು. ಪರಿಸರ ನಮ್ಮ ಹಕ್ಕಾಗಿರುವ ರೀತಿಯಲ್ಲಿ ಈ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳೂ ಇದ್ದು, ಅದನ್ನು ನಾವು ಪಾಲಿಸಬೇಕು. ಮನುಷ್ಯ ಮಾತ್ರ ಈ ಪರಿಸರದಲ್ಲಿ ಬದುಕಲು ಸಾಧ್ಯವಿಲ್ಲ. ಎಲ್ಲ ಪ್ರಾಣಿ, ಜೀವ ಸಂಕುಲವೂ ಬದುಕಬೇಕು. ಸಹಬಾಳ್ವೆ ನಡೆಸಬೇಕು.

ಎ.ಎಂ.ಅಣ್ಣಯ್ಯ, ಕೃಷಿ ಆರ್ಥಿಕ ತಜ್ಞ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X