ಶಿವಮೊಗ್ಗ: ಭಾರಿ ಮಳೆಗೆ ಮನೆ ಕುಸಿತ

ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಮನೆಯೊಂದು ಕುಸಿದು ಬಿದ್ದಿರುವ ಘಟನೆ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಸಂತ್ರಸ್ತ ಕುಟುಂಬಕ್ಕೆ ಪರಿಹಾರ ವಿತರಣೆಯ ಪ್ರಕ್ರಿಯೆಗಳನ್ನು ತುರ್ತಾಗಿ ಪೂರ್ಣಗೊಳಿಸಿ, ಗರಿಷ್ಠ ಮೊತ್ತದ ಪರಿಹಾರ ದೊರಕುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
Next Story




