Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ತೀರ್ಥಹಳ್ಳಿ| ಅವೈಜ್ಞಾನಿಕ ಜೆಜೆಎಂ...

ತೀರ್ಥಹಳ್ಳಿ| ಅವೈಜ್ಞಾನಿಕ ಜೆಜೆಎಂ ಕಾಮಗಾರಿ ವಿರೋಧಿ ಹೋರಾಟಗಾರರಿಂದ ಶಾಂತವೇರಿ ಗೋಪಾಲಗೌಡರ 101ನೇ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 March 2024 7:30 PM IST
share
ತೀರ್ಥಹಳ್ಳಿ| ಅವೈಜ್ಞಾನಿಕ ಜೆಜೆಎಂ ಕಾಮಗಾರಿ ವಿರೋಧಿ ಹೋರಾಟಗಾರರಿಂದ ಶಾಂತವೇರಿ ಗೋಪಾಲಗೌಡರ 101ನೇ ಜನ್ಮ ದಿನಾಚರಣೆ

ತೀರ್ಥಹಳ್ಳಿ: ಅವೈಜ್ಞಾನಿಕ ಕುಡಿಯುವ ನೀರಿನ ಯೋಜನೆ ವಿರುದ್ಧದ ಹೋರಾಟ ಕೋಡ್ಲು ಗ್ರಾಮದಲ್ಲಿ 18ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ, ಮಾ. 14ರಂದು ಮಲೆನಾಡಿನ ಧೀಮಂತ ರಾಜಕಾರಣಿ, ಗೇಣಿದಾರರ ಆಶಾಕಿರಣ, ಮಾದರಿ ರಾಜಕಾರಣಿ ಶಾಂತವೇರಿ ಗೋಪಾಲಗೌಡರ 101ನೇ ಜನ್ಮ ದಿನಾಚರಣೆಯನ್ನು ಪ್ರತಿಭಟನಾ ಸ್ಥಳವಾದ ಕೋಡ್ಲು ಗ್ರಾಮದ ಹೆಗ್ಗೋಡಿನಲ್ಲಿ ಆಚರಿಸಲಾಯಿತು.

ತೀರ್ಥಹಳ್ಳಿಯ ಸೀಬಿನಕೆರೆಯಲ್ಲಿರುವ ಗೋಪಾಲಗೌಡ ಪ್ರತಿಮೆಗೆ ಕೋಡ್ಲು ವೆಂಕಟೇಶ್ ಮಾಲಾರ್ಪಣೆ ಮಾಡಿದರು. ಸಾಹಿತಿ, ನಿವೃತ್ತ ಪ್ರಾಂಶುಪಾಲರಾದ ಡಾ. ಎಲ್‌. ಸಿ. ಸುಮಿತ್ರಾ ಯುವಕರ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, “ಶಾಂತವೇರಿ ಗೋಪಾಲಗೌಡರ ಹೋರಾಟ, ಬದುಕು ಶಾಶ್ವತ ಮಾದರಿಯಾಗಿ ನಮ್ಮ ಮುಂದಿದೆ. ಇವತ್ತಿನ ಯುವಜನತೆ ಅವರ ಕುರಿತು ಆಳವಾದ ಅಧ್ಯಯನ ನಡೆಸುವ ಅಗತ್ಯವಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತೀರ್ಥಹಳ್ಳಿಗೆ ಅಪ್ರಸ್ತುತ ಮತ್ತು ಅವೈಜ್ಞಾನಿಕ,’’ ಎಂದರು.

ನಂತರ ನೂರಾರು ಸಂಖ್ಯೆಯಲ್ಲಿ ಯುವಕರು ತೀರ್ಥಹಳ್ಳಿಯ ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿದರು. ಅಲ್ಲಿಂದ ರ‍್ಯಾಲಿ ಜೆಜೆಎಂ ಕಾಮಗಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಪ್ರತಿಭಟನಾನಿರತ ರೈತರ ಜೊತೆಗೂಡಿದರು.

ಈ ಸಂದರ್ಭ ಮಾತನಾಡಿದ ಸಾಹಿತಿ, ಪತ್ರಕರ್ತ ಶಿವಾನಂದ ಕರ್ಕಿ, “ಕಾರ್ಪೊರೇಟ್ ದೊರೆಗಳ ಹಿತಾಸಕ್ತಿಗಾಗಿ ಜನರನ್ನು ಗುಲಾಮರನ್ನಾಗಿಸುವುದೇ ಇವತ್ತಿನ ಎಲ್ಲಾ ಸರಕಾರಗಳ ಪರಮ ಪವಿತ್ರ ಕರ್ತವ್ಯ ಎಂದುಕೊಂಡದ್ದಾರೆ" ಎಂದು ಹೇಳಿದರು.

"ಆಗುಂಬೆಯಂತಹ ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಮಳೆಯಾಗುವ ಪ್ರದೇಶದಲ್ಲಿ ಸುರಂಗ ಕೊರೆಯುವ ಯೋಜನೆ ತರುತ್ತಾರೆ, ಪರಿಸರ ನಾಶಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ. ಬಹುಗ್ರಾಮ ಕುಡಿಯುವ ನೀರಿನಂತಹ ಬೃಹತ್ ಯೋಜನೆಗಳನ್ನು ನಿರ್ಮಿಸುತ್ತಾರೆ. ಹಿಂದೆ ಎಂಪಿಎಂ ಕಾರ್ಖಾನೆ ವಿಚಾರದಲ್ಲೂ ಇದೇ ಮಾದರಿಯು ಮಲೆನಾಡಿನ ಪರಿಸರ ವಿರೋಧಿ ಯೋಜನೆಗಳನ್ನು ತಂದವರು ನಮ್ಮನ್ನು ಆಳುವವರೆ. ಇದೀಗ ಎಂ. ಪಿ. ಎಂ ಅರಣ್ಯ ಪ್ರದೇಶವನ್ನೇ ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗೆ ಕೃಷಿ, ನೀರು, ರಸ್ತೆ, ಅರಣ್ಯಗಳನ್ನು ಕಾರ್ಪೊರೇಟ್ ದೊರೆಗಳಿಗೆ ಧೇಣಿಗೆ ನೀಡುವ ತಲೆತಿರುಕ ಪ್ರಭುತ್ವಕ್ಕೆ ಒದ್ದು ಬುದ್ದಿ ಹೇಳಲು ಶಾಂತವೇರಿಯವರ ಬದುಕೇ ನಮಗೆ ಆದರ್ಶ, ಅವರ ಜೀವನವೇ ನಮಗೆ ಸ್ಪೂರ್ತಿಯಾಗಬೇಕು. ಈಗಿನ ರಾಜಕೀಯ ಪಕ್ಷಗಳ ಕಾರ್ಯಕರ್ತರುಗಳು ನೇತಾರರನ್ನು ಓಲೈಸಲು ನರ್ತನ ಮಾಡುತ್ತಾರೆ. ಅಂದು ಗೋಪಾಲಗೌಡರು ಮೈಸೂರಿನ ಮಹಾರಾಜರಿಗೆ ದಿಕ್ಕಾರ ಕೂಗಿ ಇದು ಜನತಂತ್ರ, ನೀವು ಅಂಬಾರಿಯಿಂದ ಕೆಳಗಿಯಲೇಬೇಕೆಂದು ಕೂಗುತ್ತಾ ಪೊಲೀಸರ ದೌರ್ಜನ್ಯವನ್ನೂ ಲೆಕ್ಕಿಸದೆ ದಸರಾ ಮೆರವಣಿಗೆಯ ರಸ್ತೆಗೆ ಅಡ್ಡ ನಿಂತಿದ್ದರು" ಎಂದು ಜ್ಞಾಪಿಸಿದರು.

ಪ್ರತಿಭಟನಾ ಸ್ಥಳದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮದಿನಾಚರಣೆ ಪ್ರಯುಕ್ತ ಗ್ರಾಮಸ್ಥರು ಸಿಹಿ ಹಂಚಿದರು. ಇದೇ ಸಮಯದಲ್ಲಿ, ಅವೈಜ್ಞಾನಿಕ ಜೆಜೆಎಂ ಕಾಮಗಾರಿ ವಿರೋಧಿ ಹೋರಾಟವು ಮುಂದುವರಿಯಲಿದೆ ಎಂದು ಘೋಷಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ರೈತ ಸಂಘದ ನಾಯಕರಾದ ಕೋಡ್ಲು ವೆಂಕಟೇಶ್, ಜಿ. ಎಸ್. ರಾಜೇಂದ್ರ, ಹೊರಬೈಲು ರಾಮಕೃಷ್ಣ, ಕೆರೋಡಿ ಕೃಷ್ಣಪ್ಪ, ಕರವೆ ವೆಂಕಟೇಶ್ ಹೆಗಡೆ ಹಾಗೂ ಭೀಮೇಶ್ವರ ಸಂಗಮ ಉಳಿಸಿ ಹೋರಾಟ ಸಮಿತಿಯ ಹೋರಾಟಗಾರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X