ಭದ್ರಾವತಿ | ಗಣಪತಿ ವಿಸರ್ಜನೆ ವೇಳೆ ಗಲಾಟೆ: ಜಗಳ ಬಿಡಿಸಲು ಹೋದ ಎಎಸ್ಸೈ ಮೇಲೆಯೇ ಹಲ್ಲೆ

ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಎಸ್ಸೈ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯಲ್ಲಿ ಗಣಪತಿ ವಿಸರ್ಜನೆ ನಡೆಯುತ್ತಿದ್ದ ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣೇಗೌಡ ಮತ್ತು ಅವರ ಪತ್ನಿ ಮೇಲೆ 8-10 ಯುವಕರ ಗುಂಪು ಹಳೇ ವೈಷಮ್ಯದ ಕಾರಣಕ್ಕೆ ಹಲ್ಲೆ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಭದ್ರಾವತಿಯ ಪೇಪರ್ ಟೌನ್ ಠಾಣೆ ಎಎಸ್ಸೈ ಯಲ್ಲಪ್ಪ ಗಲಾಟೆ ಬಿಡಿಸಲು ಹೋಗಿದ್ದಾರೆ. ಈ ಸಂದರ್ಭ ಯಲ್ಲಪ್ಪ ಅವರ ತಲೆಗೆ ಮರದ ತುಂಡಿನಿಂದ ಯುವಕರ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ.
ಹಲ್ಲೆಗೊಳಗಾದ ಯಲ್ಲಪ್ಪ ಅವರಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





