Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕಾಂಗೋದಲ್ಲಿ ಶಿವಮೊಗ್ಗದ 70 ಮಂದಿ ಸೇರಿ...

ಕಾಂಗೋದಲ್ಲಿ ಶಿವಮೊಗ್ಗದ 70 ಮಂದಿ ಸೇರಿ ರಾಜ್ಯದ 95 ಜನರ ಬಂಧನ

ನಕಲಿ ದಾಖಲೆ, ಪ್ರವಾಸಿ ವೀಸಾದಲ್ಲಿ ವ್ಯಾಪಾರ ಆರೋಪ; ಸುರಕ್ಷಿತವಾಗಿ ತವರಿಗೆ ಕರೆತರಲು ಆಗ್ರಹ

ಶರತ್ ಪುರದಾಳ್/ವಾರ್ತಾಭಾರತಿಶರತ್ ಪುರದಾಳ್/ವಾರ್ತಾಭಾರತಿ21 Nov 2026 4:14 PM IST
share
ಕಾಂಗೋದಲ್ಲಿ ಶಿವಮೊಗ್ಗದ 70 ಮಂದಿ ಸೇರಿ ರಾಜ್ಯದ 95 ಜನರ ಬಂಧನ

ಶಿವಮೊಗ್ಗ (ನ.21): ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಹಕ್ಕಿಪಿಕ್ಕಿ ಸಮುದಾಯದ 95 ಮಂದಿ ಬಂಧನಕ್ಕೊಳಗಾಗಿರುವ ವರದಿಯಾಗಿದೆ. ಬಂಧಿತರ ಪೈಕಿ ಶಿವಮೊಗ್ಗ ಜಿಲ್ಲೆಯ ಹಕ್ಕಿಪಿಕ್ಕಿ ಕ್ಯಾಂಪ್‌ನ 70 ಮಂದಿ ಹಾಗೂ ಚನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿ ಗ್ರಾಮದ 25 ಮಂದಿ ಸೇರಿದ್ದಾರೆ ಎನ್ನಲಾಗಿದೆ.

ಕಾಂಗೋದ ಬೆನಿ ಮತ್ತು ಕಿಸಂಗಾನಿ ನಗರಗಳಲ್ಲಿ ವಾಸಿಸುತ್ತಿದ್ದ ಹಕ್ಕಿಪಿಕ್ಕಿ ಸಮುದಾಯದವರನ್ನು ಅಲ್ಲಿನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಅವರನ್ನು ರಾಜಧಾನಿ ಕಿನ್ಶಾಸಾಗೆ ಕರೆತಂದು ವಲಸೆ ಅಧಿಕಾರಿಗಳ ವಶದಲ್ಲಿ ಇರಿಸಲಾಗಿದೆ. ಬಂಧಿತರನ್ನು ಭಾರತಕ್ಕೆ ಗಡೀಪಾರು ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಬಂಧಿತರಲ್ಲಿ ಹೆಚ್ಚಿನವರು ಶಿವಮೊಗ್ಗ ಜಿಲ್ಲೆಯವರಾಗಿರುವುದರಿಂದ ಅವರ ಕುಟುಂಬಗಳಲ್ಲಿ ಆತಂಕ ಉಂಟಾಗಿದೆ. ಕಾಂಗೋದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯದವರನ್ನು ಸುರಕ್ಷಿತವಾಗಿ ತವರಿಗೆ ಕರೆತರುವ ನಿಟ್ಟಿನಲ್ಲಿ ಸರಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆ ರಾಜ್ಯಾಧ್ಯಕ್ಷ ಪುನೀತ್ ಕುಮಾರ್ ಆರ್. ಆಗ್ರಹಿಸಿದ್ದಾರೆ.

ಹಕ್ಕಿಪಿಕ್ಕಿ ಸಮುದಾಯದವರನ್ನು ವಿದೇಶಕ್ಕೆ ಕಳುಹಿಸಿ ವ್ಯಾಪಾರ ಮಾಡಿಸುವುದಾಗಿ ನಂಬಿಸಿದ ಸ್ಥಳೀಯ ಏಜೆಂಟರು ಪ್ರತಿಯೊಬ್ಬರಿಂದ ಸುಮಾರು ರೂ.5 ಲಕ್ಷ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದೇಶದಲ್ಲಿ ವ್ಯಾಪಾರ ನಡೆಸಿ ಆದಾಯ ಗಳಿಸುವ ನಿರೀಕ್ಷೆಯೊಂದಿಗೆ ಕಾಂಗೋಗೆ ತೆರಳಿದ್ದ ಸಮುದಾಯದವರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ ಪಡೆದು ವಿದೇಶಕ್ಕೆ ಕಳುಹಿಸಿದ್ದ ಏಜೆಂಟರು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಂಗೋದಲ್ಲಿ ಹಕ್ಕಿಪಿಕ್ಕಿ ಸಮುದಾಯದವರು ಬಂಧನಕ್ಕೊಳಗಾಗಲು ನಕಲಿ ದಾಖಲೆಗಳ ಬಳಕೆ ಹಾಗೂ ಪ್ರವಾಸಿ ವೀಸಾದಲ್ಲಿ ವ್ಯಾಪಾರ ನಡೆಸಿರುವುದು ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶಕ್ಕೆ ತೆರಳಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಟ್ಟವರು ಯಾರು, ವೀಸಾ ಪ್ರಕ್ರಿಯೆಯಲ್ಲಿ ಏಜೆಂಟರ ಪಾತ್ರವೇನು ಹಾಗೂ ಹಣ ಪಡೆದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪುನೀತ್ ಕುಮಾರ್ ಆರ್. ಆಗ್ರಹಿಸಿದ್ದಾರೆ.

ಕಾಂಗೋದ ವಿವಿಧ ನಗರಗಳಲ್ಲಿ ಕರ್ನಾಟಕದ ಹಕ್ಕಿಪಿಕ್ಕಿ ಸಮುದಾಯದ 200ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದಾರೆ. 95 ಮಂದಿ ಬಂಧನಕ್ಕೊಳಗಾಗಿರುವ ಘಟನೆಯಿಂದ ಅಲ್ಲಿರುವ ಇತರ ಹಕ್ಕಿಪಿಕ್ಕಿ ಸಮುದಾಯದವರಲ್ಲಿಯೂ ಭೀತಿ ಉಂಟಾಗಿದೆ. ಅವರ ಸುರಕ್ಷತೆಯ ಬಗ್ಗೆಯೂ ಗಮನಹರಿಸುವ ಅಗತ್ಯವಿದೆ. ಕಾಂಗೋದ ವಿವಿಧ ನಗರಗಳಲ್ಲಿ ನೆಲೆಸಿರುವ ಭಾರತೀಯ ಹಕ್ಕಿಪಿಕ್ಕಿ ಸಮುದಾಯದವರನ್ನು ಗುರುತಿಸಿ, ಅವರ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಅಗತ್ಯವಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಪುನೀತ್ ಕುಮಾರ್ ಆರ್. ಒತ್ತಾಯಿಸಿದ್ದಾರೆ.

share
ಶರತ್ ಪುರದಾಳ್/ವಾರ್ತಾಭಾರತಿ
ಶರತ್ ಪುರದಾಳ್/ವಾರ್ತಾಭಾರತಿ

ಶರತ್ ಪುರದಾಳ್ ಅವರು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗದಿಂದ ಪತ್ರಿಕೋದ್ಯಮ ವೃತ್ತಿಯನ್ನು ಪ್ರಾರಂಭಿಸಿದ್ದು ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರಾಜಕೀಯ ಸೇರಿದಂತೆ ಮಾನವೀಯ ಮೌಲ್ಯಗಳ ಸುದ್ದಿಗಳು- ವಿಶೇಷ ವರದಿಗಳನ್ನು ಮಾಡುವ ಹವ್ಯಾಸ ಹೊಂದಿದ್ದಾರೆ .

Next Story
X