Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ |...

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ಪೊಲೀಸರಿಗೆ ಕೊಲೆ ಆರೋಪಿಗಳ ಸುಳಿವು ಲಭ್ಯ, ಶೀಘ್ರದಲ್ಲೇ ಬಂಧನ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ28 May 2025 1:05 PM IST
share
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ಪೊಲೀಸರಿಗೆ ಕೊಲೆ ಆರೋಪಿಗಳ ಸುಳಿವು ಲಭ್ಯ, ಶೀಘ್ರದಲ್ಲೇ ಬಂಧನ: ದಿನೇಶ್ ಗುಂಡೂರಾವ್

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ‌. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದಕ್ಷಿಣ ಕನ್ನಡದಲ್ಲಿ ಕೋಮುವಾದದ ಕೆಟ್ಟ ವಾತಾವರಣ ನಿರ್ಮಾಣ ಆಗಿದೆ. ಅದರ ಫಲಶೃತಿಯೇ ಈ ಘಟನೆ. ಸರಣಿ ಹತ್ಯೆ ಆಗುತ್ತಿರುವುದರಿಂದ ಜಿಲ್ಲೆ ಹಾಗೂ ರಾಜ್ಯಕ್ಕೂ ಕೂಡ ಕೆಟ್ಟ ಹೆಸರು ಬರುತ್ತಿದೆ ಎಂದರು.

ಘಟನೆಯಲ್ಲಿ ಅಬ್ದುಲ್ ರಹ್ಮಾನ್ ಎಂಬಾತ ಈಗಾಗಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಾಯಗೊಂಡಿದ್ದಾರೆ. ವೈಷಮ್ಯ, ಸೇಡು ಘಟನೆಗೆ ಕಾರಣ ಎನ್ನುವುದು ಕಂಡು ಬರುತ್ತಿದೆ. ಪೊಲೀಸರ ತನಿಖೆಯ ನಂತರವೇ ಎಲ್ಲವೂ ತಿಳಿಯಲಿದೆ ಎಂದರು.

ಅಮಾನವೀಯವಾಗಿ, ಬರ್ಬರವಾಗಿ ಹತ್ಯೆ ಮಾಡಿರುವುದು ಇಡೀ ಸಮಾಜಕ್ಕೆ ಕೆಟ್ಟ ಸಂದೇಶ. ಎಲ್ಲಾ ರೀತಿಯ ಕಟ್ಟೆಚ್ಚರವನ್ನು ಪೊಲೀಸರು ವಹಿಸಿದ್ದಾರೆ. ಬಿಜೆಪಿಯವರ ತರ ಪ್ರಚೋದನಕಾರಿಯಾಗಿ ಮಾತನಾಡಲ್ಲ. ಅಂತಹ ಜನ ನಾವಲ್ಲ. ಅವರ ಬಾಯಿಗೆ ಲಂಗು ಲಗಾಮಿಲ್ಲ. ಬಿಜೆಪಿ ಹಾಗೂ ಸಂಘ-ಪರಿವಾರದ ನಾಯಕರು ಶವ ಸಿಕ್ಕರೂ ಅದರ ಮೇಲೆ ರಾಜಕೀಯ ಮಾಡುತ್ತಾರೆ. ಅವರ ಬಂಡವಾಳನೇ ಅದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಟ್ಟ ವ್ಯವಸ್ಥೆ ನಿರ್ಮಾಣ ಆಗುವುದಕ್ಕೆ ಬಿಜೆಪಿ ಹಾಗೂ ಸಂಘ-ಪರಿವಾರದ ಸಂಘಟನೆಗಳೇ ಕಾರಣ ಎಂದು ಆರೋಪಿಸಿದರು.

ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಎಲ್ಲರನ್ನೂ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಎಲ್ಲರನ್ನೂ ಬಂಧಿಸುತ್ತೇವೆ. ಕಾನೂನು ಉಲ್ಲಂಘನೆ ಆದಾಗ ಕ್ರಮ ಆಗುತ್ತದೆ. ಯಾರೇ ಹತ್ಯೆ ಆದರೂ ಧರ್ಮ-ಜಾತಿ ಪ್ರಶ್ನೆ ಬರಲ್ಲ, ತಪ್ಪು ಮಾಡಿದರೆ ಶಿಕ್ಷೆ ಆಗುತ್ತದೆ. ಸುಹಾಸ್ ಶೆಟ್ಟಿ ಕೂಡ ರೌಡಿ ಶೀಟರ್. ಆತನ ಮೇಲೂ ಪ್ರಕರಣ ಇವೆ. ನಮ್ಮಲ್ಲಿ ಯಾವುದೇ ಭೇದ-ಭಾವ ಇಲ್ಲ. ಕ್ರಮ ಆಗುತ್ತದೆ ಎಂದು ಹೇಳಿದರು.

ಮುಸಲ್ಮಾನರು ಎಂದರೆ ಕೆಟ್ಟ ಅಭಿಪ್ರಾಯವನ್ನು ಬಿಜೆಪಿಯವರು ಇಟ್ಟುಕೊಂಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳನ್ನು ನೋಡಿದರೆ ತರ್ಕ, ನ್ಯಾಯ, ಮಾನವೀಯತೆ, ಮನುಷ್ಯತ್ವ ಯಾವುದು ಇಲ್ಲ. ವಿಷ, ಕೊಳಕು ತುಂಬಿದ ಮನಸುಗಳು ಎಂದು ಟೀಕಿಸಿದರು.

Tags

Abdul Rahman murder caseDinesh Gundu Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X