Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ...

ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರ ಪರ ನಟ ಶಿವರಾಜ್‌ ಕುಮಾರ್ ಭರ್ಜರಿ ಪ್ರಚಾರ

"ಗೀತಾ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ, ಅವರಿಗೆ ಒಂದೇ ಒಂದು ಅವಕಾಶ ಕೊಡಿ" ಎಂದು ಮನವಿ ಮಾಡಿದ ನಟ

ವಾರ್ತಾಭಾರತಿವಾರ್ತಾಭಾರತಿ20 March 2024 9:16 PM IST
share
  • ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರ ಪರ ನಟ  ಶಿವರಾಜ್‌ ಕುಮಾರ್ ಭರ್ಜರಿ ಪ್ರಚಾರ
  • ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರ ಪರ ನಟ  ಶಿವರಾಜ್‌ ಕುಮಾರ್ ಭರ್ಜರಿ ಪ್ರಚಾರ
  • ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರ ಪರ ನಟ  ಶಿವರಾಜ್‌ ಕುಮಾರ್ ಭರ್ಜರಿ ಪ್ರಚಾರ
  • ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರ ಪರ ನಟ  ಶಿವರಾಜ್‌ ಕುಮಾರ್ ಭರ್ಜರಿ ಪ್ರಚಾರ
  • ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರ ಪರ ನಟ  ಶಿವರಾಜ್‌ ಕುಮಾರ್ ಭರ್ಜರಿ ಪ್ರಚಾರ

ಶಿವಮೊಗ್ಗ: ಗೀತಾ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರಿಗೆ ಒಂದೇ ಒಂದು ಅವಕಾಶ ಕೊಡಿ ಎಂದು ನಟ ಶಿವರಾಜ್‌ ಕುಮಾರ್ ತಮ್ಮ ಪತ್ನಿ ಗೀತಾ ಪರ ಬಾವುಕವಾಗಿ ಮತದಾರರಲ್ಲಿ ಮನವಿ ಮಾಡಿದರು.

ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗೀತಾ ಬಂಗಾರಪ್ಪ ಅವರ ಮಗಳಾಗಿ, ರಾಜಕುಮಾರ್ ಅವರ ಸೊಸೆಯಾಗಿ, ಶಿವರಾಜ್ ಕುಮಾರನ ಹೆಂಡತಿಯಾಗಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮಹಿಳೆಯರ, ಮಕ್ಕಳ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ. ಅವರನ್ನು ಸಂಸದರನ್ನಾಗಿ ಯಾಕೆ ಆಯ್ಕೆ ಮಾಡಬಾರದು, ಗೀತಾ ಅವರಿಗೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು.

2014ರ ಚುನಾವಣೆಯಲ್ಲಿ ಸೋತಿದ್ದರೂ ಅದರ ಬಗ್ಗೆ ಧೃತಿಗೆಟ್ಟಿಲ್ಲ. ಸ್ಪರ್ಧೆ ಎಂದ ಮೇಲೆ ಸೋಲು – ಗೆಲುವು ಇದ್ದಿದ್ದೆ. ಆದರೆ ಚುನಾವಣೆಯಲ್ಲಿ ಜನರಿಗೆ ಭರವಸೆಗಳನ್ನು ನೀಡುವುದು ಮುಖ್ಯ. ಜನರಿಗೆ ಕೇವಲ ಭರವಸೆಗಳನ್ನು ನೀಡಬಾರದು ಆಗುವ ಕೆಲಸವನ್ನು ಆಗುತ್ತದೆ. ಆಗದ ಕೆಲಸವನ್ನು ಆಗುವುದಿಲ್ಲ ಎಂದು ನೇರವಾಗಿ ಹೇಳಬೇಕು ಅದುವೇ ನಿಜವಾದ ರಾಜಕಾರಣ ಎಂದರು.

ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, "ಮನೆಯ ಮಗಳನ್ನು ಬರಿಗೈಯಲ್ಲಿ ಕಳಿಸಬೇಡಿ. ನಾನು ಗೆದ್ದು ಸಂಸತ್ತಿನಲ್ಲಿ ಶಿವಮೊಗ್ಗದ ಧ್ವನಿಯಾಗಿರುತ್ತೇನೆ. ಜಿಲ್ಲೆಗೆ, ಪಕ್ಷಕ್ಕೆ ,ಪಕ್ಷದ ನಾಯಕರಿಗೆ ಎಂದಿಗೂ ಕೆಟ್ಟ ಹೆಸರು ತರಲಾರೆ. ತಂದೆಯಂತೆ ಜನರಿಗಾಗಿ ದುಡಿಯುತ್ತೇನೆ ಎಂದು ಭಾವುಕರಾಗಿ ಮನವಿ ಮಾಡಿಕೊಂಡರು.

ನನ್ನ ತಂದೆ ಮೊದಲ ಬಾರಿಗೆ ಶಾಸಕರಾಗಿದ್ದಾಗಿನಿಂದ ಇಲ್ಲಿಯವರೆಗೂ ರಾಜಕಾರಣವನ್ನು ನೋಡಿಕೊಂಡು ಬಂದಿದ್ದೇನೆ. ನನ್ನ ತಂದೆ ನನ್ನನ್ನು ನಿಮ್ಮಂತೆ ಸಾಮಾನ್ಯಳನ್ನಾಗಿ ಬೆಳೆಸಿದರು. ನಾನು ಈ ಜಿಲ್ಲೆಯ ಮನೆ ಮಗಳು ನನಗೆ ನೀವು ವೋಟು ಕೊಡಲೇಬೇಕು ಎಂದು ಮನವಿ ಮಾಡಿಕೊಂಡರು.

ಸಚಿವ ಮಧು ಬಂಗಾರಪ್ಪ ಮಾತನಾಡಿ, "ಸಂಸದರಾಗಿರುವ ರಾಘವೇಂದ್ರ ಯಾವತ್ತಾದರೂ ವಿಐಎಸ್ಎಲ್ ಮತ್ತು ಶರಾವತಿ ಸಂತ್ರಸ್ತರ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿದ್ದಾರೆಯೇ?. ಸಂಸದರಾಗಿ ನೀವು ಏನು ಮಾಡಿದ್ದೀರಿ" ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಮುಖಂಡರಾದ ಎಂ.ಶ್ರೀಕಾಂತ್, ಆರ್ ಪ್ರಸನ್ನಕುಮಾರ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್ ರವಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X