Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಆಗುಂಬೆ: ಒಂಟಿ ಮಹಿಳೆಯ ಮನೆಗೆ ನುಗ್ಗಿ...

ಆಗುಂಬೆ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

ವಾರ್ತಾಭಾರತಿವಾರ್ತಾಭಾರತಿ23 April 2026 8:44 AM IST
share
ಆಗುಂಬೆ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಶಿವಮೊಗ್ಗ: ಜಿಲ್ಲೆಯ ಆಗುಂಬೆ ಬಳಿ ಒಂಟಿ ಮಹಿಳೆಯ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಕೈಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ನಡೆದಿದೆ.

ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವೃದ್ಧೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು ರೂ. 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಕೋರರು ದೋಚಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಲಕ್ಕುಂದ ಗ್ರಾಮದ ವಿಶಾಲಾಕ್ಷಿ (74) ಎಂಬುವವರ ಮನೆಯಲ್ಲಿ ದರೋಡೆಯಾಗಿದೆ. ವಿಶಾಲಾಕ್ಷಿ ಅವರ ಪತಿ 15 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಹಾಗಾಗಿ ಅವರು ಮನೆಯಲ್ಲಿ ಒಬ್ಬರೇ ವಾಸವಿದ್ದರು. ಏಪ್ರಿಲ್ 21ರಂದು ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ವಿಶಾಲಾಕ್ಷಿ ಅವರು ಮನೆಯಲ್ಲಿ ಮಲಗಿದ್ದಾಗ ಯಾರೋ ಬಾಗಿಲು ತಟ್ಟಿದ ಶಬ್ದ ಕೇಳಿಸಿತು. ಕಿಟಕಿಯ ಮೂಲಕ ನೋಡಿದಾಗ ಮೂವರು ಅಪರಿಚಿತರು ನಿಂತಿದ್ದರು.

ಮೂವರು ಅಪರಿಚಿತರು ಕುಡಿಯಲು ನೀರು ಕೊಡಿ ಎಂದು ವಿಶಾಲಾಕ್ಷಿ ಅವರನ್ನು ಕೇಳಿದ್ದರು. ಬಾಗಿಲು ತೆರೆಯದ ಅವರು, ಕಿಟಕಿಯ ಮೂಲಕವೇ “ನಲ್ಲಿಯಲ್ಲಿ ಇರುವ ನೀರು ಕುಡಿಯಿರಿ” ಎಂದು ತಿಳಿಸಿದ್ದಾರೆ.

ಮೂವರು ಅಪರಿಚಿತರು ಅಲ್ಲೇ ಮರೆಯಾಗಿ ನಿಂತಿದ್ದರು. ಕೆಲವು ನಿಮಿಷಗಳ ಬಳಿಕ ಅನುಮಾನಗೊಂಡ ವೃದ್ಧೆ ಹಿತ್ತಲ ಬಾಗಿಲು ತೆರೆದು ಪರಿಶೀಲಿಸಿದರು. ಆಗ ಮೂವರು ಒಮ್ಮೆಲೆ ಮನೆಯೊಳಗೆ ನುಗ್ಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಒಳ ನುಗ್ಗಿದ ದರೋಡೆಕೋರರು ವಿಶಾಲಾಕ್ಷಿ ಅವರ ಬಾಯಿಯನ್ನು ಒತ್ತಿಹಿಡಿದು ಬೆದರಿಸಿದ್ದಾರೆ. ಬಳಿಕ ಅವರ ಕೈಗಳನ್ನು ಸೀರೆಯಿಂದ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದರು. ಈ ವೇಳೆ ವೃದ್ಧೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದರೋಡೆಕೋರರು ಮನೆಯಲ್ಲಿದ್ದ ಬೀರುವನ್ನು ಒಡೆದು ಅದರಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ. ವಿಶಾಲಾಕ್ಷಿ ಅವರ ಮೈಮೇಲಿದ್ದ ಚಿನ್ನದ ಸರ, ಎರಡು ಕೈಬಳೆ, ಕಿವಿಯೋಲೆ ಸೇರಿದಂತೆ ಒಟ್ಟು 146 ಗ್ರಾಂ ತೂಕದ ವಿವಿಧ ಚಿನ್ನಾಭರಣಗಳನ್ನು ಕಸಿದುಕೊಂಡಿದ್ದಾರೆ. ಇವುಗಳ ಮೌಲ್ಯ ಅಂದಾಜು ರೂ. 17.52 ಲಕ್ಷ ಎನ್ನಲಾಗಿದೆ. ಇದಲ್ಲದೆ ಬೀರುವಿನಲ್ಲಿದ್ದ ರೂ. 50,000 ನಗದು, ಟೇಬಲ್ ಮೇಲಿದ್ದ ಪರ್ಸ್‌ನಲ್ಲಿದ್ದ ರೂ. 1,000 ಹಾಗೂ ಒಂದು ಮೊಬೈಲ್ ಫೋನ್‌ನ್ನು ದೋಚಿದ್ದಾರೆ. ಬಳಿಕ ಹಿತ್ತಲ ಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ.

ದರೋಡೆಕೋರರು ಹೋದ ನಂತರ ವಿಶಾಲಾಕ್ಷಿ ಅವರು ಕೈಕಟ್ಟುಗಳನ್ನು ಬಿಡಿಸಿಕೊಂಡಿದ್ದಾರೆ. ನಂತರ ಚಾಕುವಿನಿಂದ ಬಾಗಿಲಿಗೆ ತೂತು ಮಾಡಿ ಚಿಲಕ ತೆಗೆದು ಹೊರಬಂದಿದ್ದಾರೆ. ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ ನಂತರ ಅವರ ಸಂಬಂಧಿಕರು ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಅವರು ಸ್ಥಳಕ್ಕೆ ಭೇಟಿ ನೀಡಿದರು. ವೃದ್ಧೆ ವಿಶಾಲಾಕ್ಷಿ ಹಾಗೂ ಅವರ ಸಂಬಂಧಿಕರನ್ನು ಭೇಟಿಯಾಗಿ ಘಟನೆ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಆಗುಂಬೆ ಠಾಣೆಯ ಪೊಲೀಸರು ಉಪಸ್ಥಿತರಿದ್ದರು.

Tags

shimogaAgumbeGold jewellery
share
ವಾರ್ತಾಭಾರತಿ
ವಾರ್ತಾಭಾರತಿ
Next Story
X