ಭದ್ರಾವತಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಭೀಕರ ಹತ್ಯೆ

ಶಿವಮೊಗ್ಗ : ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾದ ಘಟನೆ ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ಶನಿವಾರ ನಡೆದಿದೆ.
ಅವಿನಾಶ್ (32) ಹತ್ಯೆಗೀಡಾದ ರೌಡಿಶೀಟರ್. ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದ ಅವಿನಾಶ್, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ. ಆನಂತರ ಮೇಲಿನ ಕೋರ್ಟ್‌ನಿಂದ ಜಾಮೀನು ಪಡೆದು ಹೊರಗಿದ್ದ ಎಂದು ತಿಳಿದು ಬಂದಿದೆ.
ಈ ನಡುವೆ ಪಾರ್ಟಿ ಮಾಡಲು ಎಂದು ಆತನನ್ನು ಕರೆತಂದು ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಾಹಿತಿ ತಿಳಿದ ಕೂಡಲೇ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





