Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ...

ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ: ಸಚಿವ ಮಧುಬಂಗಾರಪ್ಪ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ9 April 2024 9:55 PM IST
share
ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ: ಸಚಿವ ಮಧುಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ: 'ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.

ಸವಳಂಗ ರಸ್ತೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ 'ನಮ್ಮೂರ ಹುಡುಗ ಡಾ.ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಬಂಜಾರ ಸಮುದಾಯದೊಂದಿಗೆʼ ಶೀರ್ಷಿಕೆಯಡಿಯ ಯುಗಾದಿ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಮಾತ‌ನಾಡಿದರು.

ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ. ಇದು ರಾಜಕೀಯದಲ್ಲಿ ಸಲ್ಲದು. ನಾವೂ ಕೂಡ ದೇವರ ಭಕ್ತರು. ಇಲ್ಲಿ ನ್ಯಾಯ, ನೀತಿ, ಸತ್ಯ, ಧರ್ಮ ಮಾತ್ರ ಗೆಲ್ಲಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರ ಹಸಿವು ನೀಗಿಸಲಾಗುತ್ತಿದೆ. ಇಲ್ಲಿ ಕಷ್ಟಕ್ಕೆ ಸ್ಪಂದಿಸಿದವರಿಗೆ ಮತ ಚಲಾಯಿಸಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕುಂಚೇಹಳ್ಳಿಯಲ್ಲಿ ಅಭಿಮಾನಿ ಬಳಗ ಹೆಚ್ಚು. ನನಗೆ ಹಾಗೂ ಗೀತಕ್ಕಗೆ ಈಗ ತಂದೆ ಇಲ್ಲ. ಆದ್ದರಿಂದ ನೀವೇ ನಮ್ಮ ತಂದೆ-ತಾಯಿ. ಇಂದಿನಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಬಂಗಾರಪ್ಪ ಅವರಿಗೆ ನೀಡಿದ್ದ ಪ್ರೋತ್ಸಾಹ ಗೀತಾ ಶಿವರಾಜಕುಮಾರ್ ಅವರಿಗೂ ನೀಡಿ ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಬಡತನ ನಿರ್ಮೂಲನೆ ಹಾಗೂ ಬಡ ಕುಟುಂಬಗಳ ಹಸಿವು ನೀಗಿಸುವುದು. ಅದೇ, ಉದ್ದೇಶದಿಂದ ಲೋಕಸಭಾ ಚುನಾವಣೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನ ಸಾಮಾನ್ಯರಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ ಎಂದರು

ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಕಂಚೇನಹಳ್ಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ನಟ ರಾಜ್ ಕುಮಾರ್ ಕುಟುಂಬ ಸದಸ್ಯರು ಭೇಟಿ ನೀಡಿದ್ದಾರೆ. ಇದು, ನಮ್ಮ ಸೌಭಾಗ್ಯ ಎಂದ ಅವರು,

ದೇಶದಲ್ಲಿ ಬಿಕ್ಷಾಟನೆ ನಡೆಸದೆ ಸ್ವಾಭಿಮಾನದ ಬದುಕನ್ನು ಬಂಜಾರ ಸಮುದಾಯ ಸಾಗಿಸುತ್ತಿದೆ. ಇಲ್ಲಿನ ಸಮಸ್ಯೆಗಳನ್ನು ನೀಗಿಸಲು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಇಲ್ಲ ಎನ್ನುವುದನ್ನು ತೊಡೆದು ಹಾಕಿ, ಅವರ ಸ್ಥಾನವನ್ನು ಗೀತಾ ಶಿವರಾಜಕುಮಾರ್ ಅವರು ತುಂಬಲಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕಿದೆ ಎಂದರು.

ನಟ ಶಿವರಾಜಕುಮಾರ್ ಮಾತನಾಡಿದರು. ಅದೇ ರೀತಿ, ದುರ್ಗಿಗುಡಿಯ ಗಣಪತಿ ದೇವಸ್ಥಾನ ಬಳಿಯಲ್ಲಿ ಗೀತಾ ಶಿವರಾಜಕುಮಾರ್ ಪರ ಪ್ರಚಾರ ಸಭೆ ನಡೆಸಲಾಯಿತು.

ಕುಂಚೇಹಳ್ಳಿಯ ಸೇವಾಲಾಲ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ತೆರೆದ ವಾಹನದಲ್ಲಿ ವೇದಿಕೆ ಬಳಿಗೆ ಸಾಗಿದರು. ಬಂಜಾರ ಸಮುದಾಯದ ಮಹಿಳೆಯರು ಗೀತಾ ಶಿವರಾಜಕುಮಾರ್ ಅವರಿಗೆ ಪ್ರೀತಿಯಿಂದ ಬರ ಮಾಡಿಕೊಂಡು ಆರತಿ ಬೆಳಗಿ ಸ್ವಾಗತಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಎಚ್.ಸಿ.ಯೋಗೀಶ್, ಅನಿತಾ ಕುಮಾರಿ, ಎಂ.ಶ್ರೀಕಾಂತ್, ಎನ್.ರಮೇಶ್, ರವಿಕುಮಾರ್, ಕಲಗೋಡು ರತ್ನಾಕರ್, ಎಸ್.ಕೆ.ಮರಿಯಣ್ಣ, ಜಗದೀಶ್ ಸೇರಿ ಬಂಜಾರದ ಸಮುದಾಯದ ಮುಖಂಡರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X