Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿ...

ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಂಧನವಾಗಬೇಕು : ಕೆ.ಎಸ್ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ9 May 2024 1:35 PM IST
share
ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಂಧನವಾಗಬೇಕು : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಈ ಚುನಾವಣೆಯಲ್ಲಿ ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಂದ ಷಡ್ಯಂತ್ರ ನಡೆದಿದೆ. ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ವಾಮಾಚಾರ, ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಅನೇಕ ವೋಟ್ ಅನ್ಯಾಯ ಆಗಿದೆ. ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ, ಷಡ್ಯಂತ್ರ. ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು. ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ ಮೇಲೆ ಎಫ್ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.

ನನ್ನ ಚುನಾವಣೆಯ ಉದ್ದೇಶ ಯಶಸ್ವಿಯಾಗಿದೆ. ಜಿಲ್ಲೆಯ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ಬೇರೆ ಪಕ್ಷ ಕಟ್ಟಲು ನಾನು ಯಡಿಯೂರಪ್ಪ ಅಲ್ಲ. ಪಕ್ಷ ಶುದ್ದೀಕರಣದ ಸಿದ್ದಾಂತ ಮುಂದುವರಿಸುತ್ತೇನೆ. ಸಿದ್ಧಾಂತ, ಹಿಂದುತ್ವದ ಮುಂದೆ ಯಾರು ದೊಡ್ಡವರಲ್ಲ. ಸಿದ್ದಾಂತಕ್ಕೆ ಪೆಟ್ಟದಾಗ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಸಿಟಿ ರವಿ, ಪ್ರತಾಪ್ ಸಿಂಹ, ಅನಂತ್ ಕುಮಾರ್ ಅವರ ಧ್ವನಿಯಾಗಿ ನಾನು ನಿಂತಿದ್ದೇನೆ. ಒಂದೇ ತಿಂಗಳಲ್ಲಿ ನಾನು ಸಾಕಷ್ಟು ಪರಿವರ್ತನೆ ತಂದಿದ್ದೇನೆ ಎಂದು ಈಶ್ವರಪ್ಪ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X