Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ‘ಕ್ರಾಫ್ಟ್ಸ್ ಆಫ್ ಮಲ್ನಾಡ್’...

‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ವೆಬ್‌ಸೈಟ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Jan 2026 2:13 PM IST
share
‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ವೆಬ್‌ಸೈಟ್‌ಗೆ ಚಾಲನೆ
ಕಲೆಗೆ ಉತ್ತೇಜನ ನೀಡಿ ಬೆಳೆಸಬೇಕು: ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ (ಜ.25): ಸ್ವಸಹಾಯ ಗುಂಪುಗಳ ಮಹಿಳೆಯರು ಹಾಗೂ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ ಬೆಳೆಸಬೇಕು. ನಮ್ಮ ನಾಡಿನ ಕಲೆ–ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಹೊಣೆ ಎಲ್ಲರ ಮೇಲೂ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉದ್ಯಾನ ಕಲಾ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜ.24ರಿಂದ 27ರವರೆಗೆ ಆಯೋಜಿಸಿರುವ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಮತ್ತು ಪುಷ್ಪಸಿರಿ–63ನೇ ಫಲ–ಪುಷ್ಪ ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅನೇಕ ಉತ್ಪನ್ನಗಳು ಮತ್ತು ಕಲಾತ್ಮಕ ವಸ್ತುಗಳನ್ನು ಈ ಪ್ರದರ್ಶನದಲ್ಲಿ ಅಚ್ಚುಕಟ್ಟಾಗಿ ಪ್ರದರ್ಶಿಸಲಾಗಿದೆ. ಇಂತಹ ಹಳೆಯ ಕಲೆಗಳು ಉಳಿಯಬೇಕಾದರೆ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಈ ಹಿನ್ನೆಲೆಯಲ್ಲಿ ಶಾಲಾ ಹಂತದಲ್ಲೇ ಆಯಾ ಭಾಗದ ಕಲೆಯನ್ನು ಅಲ್ಲಿನ ಶಾಲೆಗಳಲ್ಲಿ ಕಲಿಸುವ ಚಿಂತನೆ ಮಾಡಲಾಗುತ್ತಿದೆ ಎಂದರು.

ಪ್ರದರ್ಶನದಲ್ಲಿ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕಲಾತ್ಮಕ ಉತ್ಪನ್ನಗಳು, ಸಿರಿಧಾನ್ಯಗಳು, ಖಾದ್ಯಗಳು, ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳು, ವಿವಿಧ ಜಿಲ್ಲೆಗಳು ಹಾಗೂ ರಾಜ್ಯಗಳಿಂದ ಬಂದಿರುವ ಹ್ಯಾಂಡ್‌ಲೂಂ ಸೀರೆಗಳು, ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳು, ವಿವಿಧ ಜಾತಿಯ ಹಣ್ಣು–ತರಕಾರಿಗಳನ್ನು ಸುಸಜ್ಜಿತವಾಗಿ ಪ್ರದರ್ಶಿಸಲಾಗಿದೆ ಎಂದು ವಿವರಿಸಿದರು.

‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ಎಂಬ ಹೆಸರಿನಡಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಬ್ರಾಂಡಿಂಗ್ ಮಾಡಿರುವುದು ಅತ್ಯುತ್ತಮ ಕಾರ್ಯ. ಜಿಲ್ಲೆ ಹಾಗೂ ರಾಜ್ಯದ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ವೆಬ್‌ಸೈಟ್ ರಚಿಸಿರುವುದು ಶ್ಲಾಘನೀಯ. ಈ ವೆಬ್‌ಸೈಟ್ ಕುರಿತು ಇನ್ನಷ್ಟು ಪ್ರಚಾರ ಅಗತ್ಯವಿದ್ದು, ಸಣ್ಣ ವಿಡಿಯೋ ತುಣುಕುಗಳು ಹಾಗೂ ಕ್ಯೂಆರ್ ಕೋಡ್‌ಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು. ರಾಜ್ಯಮಟ್ಟದಲ್ಲಿ ‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ಕರಕುಶಲ ಪ್ರದರ್ಶನ ಆಯೋಜಿಸೋಣ ಎಂದರು.

ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕುಶಲಕರ್ಮಿಗಳು ಹಾಗೂ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವರಿಗೆ ಆರ್ಥಿಕ ಬೆಂಬಲ ನೀಡಿ ಕಲೆಗೆ ಉತ್ತೇಜನ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರು ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಬ್ರಾಂಡ್ ‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ವೆಬ್‌ಸೈಟ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಜವಳಿ ಮೂಲಸೌಲಭ್ಯ (ವಿದ್ಯುತ್ ಮಗ್ಗ) ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹಾದೇವಪ್ಪ, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ. ಎ.ಬಿ. ಸಂಜಯ್, ಜಿ.ಪಂ. ಯೋಜನಾ ನಿರ್ದೇಶಕಿ ನಂದಿನಿ, ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ಖಜಾಂಚಿ ಜಿ.ಎಂ. ರಘು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Crafts of Malnadwebsite
share
ವಾರ್ತಾಭಾರತಿ
ವಾರ್ತಾಭಾರತಿ
Next Story
X