Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ...

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಆಸ್ತಿ ಮೌಲ್ಯ ಎಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ18 April 2024 5:29 PM IST
share
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಆಸ್ತಿ ಮೌಲ್ಯ ಎಷ್ಟು ಗೊತ್ತೇ?

ಶಿವಮೊಗ್ಗ: ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಒಟ್ಟು 73.71 ಕೋಟಿ ರೂ. ಮೌಲ್ಯದ ಆಸ್ತಿ ವಿವರ ಸಲ್ಲಿಸಿದ್ದಾರೆ. ರಾಘವೇಂದ್ರ ಮತ್ತು ಪತ್ನಿ ತೇಜಸ್ವಿನಿ ಅವರ ಆಸ್ತಿ ವಿವರವನ್ನು ಸಲ್ಲಿಸಲಾಗಿದೆ. ರಾಘವೇಂದ್ರ 55.85 ಕೋಟಿ ರೂ. ಆಸ್ತಿ ಹೊಂದಿದ್ದರೆ, ಪತ್ನಿ ತೇಜಸ್ವಿನಿ ಹೆಸರಿನಲ್ಲಿ 17.86 ಕೋಟಿ ರೂ. ಮೌಲ್ಯದ ಆಸ್ತಿ ಇದೆ.

ರಾಘವೇಂದ್ರ, ಪತ್ನಿ ಬಳಿ ಎಷ್ಟಿದೆ ಹಣ:

ಬಿ.ವೈ.ರಾಘವೇಂದ್ರ ಕೈಯಲ್ಲಿ 33,291 ರೂ.ನಗದು ಇದ್ದು, ಪತ್ನಿ ತೇಜಸ್ವಿನಿ ಬಳಿ 9,39,109 ರೂ.ಇದೆ. ಅಲ್ಲದೆ, ರಾಘವೇಂದ್ರ ವಿವಿಧ ಬ್ಯಾಂಕ್‌ಗಳಲ್ಲಿ 13 ಖಾತೆ ಹೊಂದಿದ್ದಾರೆ. 98,01,123 ರೂ. ಹಣ ಖಾತೆಗಳಲ್ಲಿವೆ. ಪತ್ನಿ ತೇಜಸ್ವಿನಿ ಹೆಸರಿನಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ 8 ಅಕೌಂಟ್‌ಗಳಿವೆ. ಇವುಗಳಲ್ಲಿ 25,65,577 ರೂ. ಹಣವಿದೆ. ರಾಘವೇಂದ್ರ 15 ಕಂಪನಿಗಳಲ್ಲಿ 7.68 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ತೇಜಸ್ವಿನಿ ಆರು ಕಂಪನಿಗಳಲ್ಲಿ 1.22 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಮ್ಯೂಚುವಲ್ ಫಂಡ್ಸ್, ಬಾಂಡ್‌ಗಳಲ್ಲಿ ರಾಘವೇಂದ್ರ 2.22 ಕೋಟಿ ರೂ., ತೇಜಸ್ವನಿ 30 ಸಾವಿರ ರೂ. ಹೂಡಿಕೆ ಮಾಡಿದ್ದಾರೆ.

ಪತ್ನಿ, ಮಕ್ಕಳು, ಸಹೋದರನಿಗೆ ಸಾಲ:

ರಾಘವೇಂದ್ರ ತಮ್ಮ ಪತ್ನಿ ತೇಜಸ್ವಿನಿ, ಮಕ್ಕಳಾದ ಭಗತ್, ಸುಭಾಷ್ ಮತ್ತ ಸಹೋದರ ವಿಜಯೇಂದ್ರಗೆ ಸಾಲ ನೀಡಿದ್ದಾರೆ. ವಿಜಯೇಂದ್ರಗೆ 85 ಲಕ್ಷ ರೂ., ಪತ್ನಿ ತೇಜಸ್ವಿನಿಗೆ 5.49 ಕೋಟಿ ರೂ., ಪುತ್ರ ಭಗತ್‌ಗೆ 65 ಲಕ್ಷ ರೂ., ಮತ್ತೊಬ್ಬ ಪುತ್ರ ಸುಭಾಷ್‌ಗೆ 85 ಲಕ್ಷ ರೂ. ಸಾಲ ನೀಡಿದ್ದಾರೆ. ವಿವಿಧ ಸಂಸ್ಥೆಗಳಿಗೆ ರಾಘವೇಂದ್ರ 20.39 ಕೋಟಿ ರೂ. ಸಾಲ ನೀಡಿದ್ದಾರೆ. ಪತ್ನಿ ತೇಜಸ್ವಿನಿ ಭಗತ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್‌ಗೆ 2.50 ಲಕ್ಷ ರೂ. ನೀಡಿದ್ದಾರೆ. ರಾಘವೇಂದ್ರಗೆ 69.39 ಲಕ್ಷ ರೂ. ಸಾಲವಿದೆ. ಪತ್ನಿ ತೇಜಸ್ವಿನಿಗೆ 12.91 ಕೋಟಿ ರೂ. ಸಾಲವಿದೆ.

ಚಿನ್ನ, ವಜ್ರ, ಬೆಳ್ಳಿ, ವಾಹನಗಳು 1988 ಮಾಡಲ್‌ನ ಅಂಬಾಸಿಡರ್, ಒಂದು ಟ್ರಾಕ್ಟರ್, ಟೊಯೊಟ ಫಾರ್ಚುನರ್ ಕಾರು ರಾಘವೇಂದ್ರ ಹೆಸರಲ್ಲಿದೆ. ಇವುಗಳ ಒಟ್ಟು ಮೌಲ್ಯ 44.77 ಲಕ್ಷ ರೂ. ಇದೆ. ರಾಘವೇಂದ್ರ ಬಳಿ 1021.50 ಗ್ರಾಂ ಚಿನ್ನವಿದೆ. 114.26 ಕ್ಯಾರೆಟ್ ವಜ್ರ, 8.6 ಕೆ.ಜಿ ಬೆಳ್ಳಿ, 42 ಬೆಲೆಬಾಳುವ ಹರಳು ಇದೆ. ಇವುಗಳ ಮೌಲ್ಯ 98.83 ಲಕ್ಷ ರೂ. ಇನ್ನು, ಪತ್ನಿ ತೇಜಸ್ವಿನಿ ಬಳಿ 1395.92 ಗ್ರಾಂ ಚಿನ್ನ, 96.022 ಕ್ಯಾರೆಟ್ ವಜ್ರ, 5.1 ಕೆ.ಜಿ ಬೆಳ್ಳಿ ಇದೆ. ಇದರ ಮೌಲ್ಯ 1.13 ಕೋಟಿ ರೂ. ಆಗಿದೆ.

ಎಲ್ಲೆಲ್ಲಿ ಎಷ್ಟು ಆಸ್ತಿ ಇದೆ?

ರಾಘವೇಂದ್ರ ಹೆಸರಿನಲ್ಲಿ 11.33 ಎಕರೆ ಕೃಷಿ ಜಮೀನು ಇದೆ. ಇದರ ಮೌಲ್ಯ 1.32 ಕೋಟಿ ರೂ., ವಿವಿಧೆಡೆ 18 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ. ಪತ್ನಿ ಹೆಸರಿನಲ್ಲಿ 8.07 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ. ರಾಘವೇಂದ್ರ ಹೆಸರಿನಲ್ಲಿ 1.24 ಕೋಟಿ ರೂ. ಮೌಲ್ಯದ ಕಟ್ಟಡಗಳಿವೆ.

ರಾಘವೇಂದ್ರ ಹೆಸರಿನಲ್ಲಿ ಶಿವಮೊಗ್ಗದ ವಿನೋಬನಗರ, ಶಿಕಾರಿಪುರದಲ್ಲಿ ವಾಸದ ಮನೆಗಳಿವೆ. ಇವುಗಳ ಮೌಲ್ಯ 4.18 ಕೋಟಿ ರೂ., ಪತ್ನಿ ತೇಜಸ್ವಿನಿ 6.82 ಕೋಟಿ ರೂ. ಮೌಲ್ಯದ ವಾಸದ ಮನೆಗಳಿವೆ.

ಇನ್ನು, ಬಿ.ವೈ.ರಾಘವೇಂದ್ರ ವಿರುದ್ಧ ನಾಲ್ಕು ಪ್ರಕರಣಗಳಿವೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X