ಭಾರಿ ಮಳೆ ಹಿನ್ನೆಲೆ ; ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ

ರಶ್ಮಿ ಹಾಲೇಶ್
ಶಿವಮೊಗ್ಗ : ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ತಹಸೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.
Next Story





