Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶರಾವತಿ ಸಂತ್ರಸ್ತರೆಂದು ನಕಲಿ ದಾಖಲೆ...

ಶರಾವತಿ ಸಂತ್ರಸ್ತರೆಂದು ನಕಲಿ ದಾಖಲೆ ಸೃಷ್ಟಿಸಿದ ಕುಟುಂಬ; 69 ಎಕರೆ ಅರಣ್ಯ ಭೂಮಿ ಅಕ್ರಮವಾಗಿ ಮಂಜೂರು!

ವಾರ್ತಾಭಾರತಿವಾರ್ತಾಭಾರತಿ2 July 2025 11:08 PM IST
share
ಶರಾವತಿ ಸಂತ್ರಸ್ತರೆಂದು ನಕಲಿ ದಾಖಲೆ ಸೃಷ್ಟಿಸಿದ ಕುಟುಂಬ; 69 ಎಕರೆ ಅರಣ್ಯ ಭೂಮಿ ಅಕ್ರಮವಾಗಿ ಮಂಜೂರು!

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಂತ್ರಸ್ತರ ಸೋಗಿನಲ್ಲಿ ಒಂದೇ ಕುಟುಂಬವು 69 ಎಕರೆ ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

1960ರಿಂದ 1978ರ ನಡುವೆ ಕಂದಾಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಳಸಿಕೊಂಡು ಕಾನೂನು ಬಾಹಿರವಾಗಿ ಮೂಲ ಪಹಣಿಗಳನ್ನು ತಿದ್ದುಪಡಿ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿಕೊಂಡಿರುವುದನ್ನು ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್‌ ಪತ್ತೆ ಹಚ್ಚಿದ್ದಾರೆ.

ಈ ಸಂಬಂಧ ಅವರು ಸಾಗರ ತಾಲೂಕಿನ ಆನಂದಪುರದ ಎಂ.ಆರ್.ಷಣ್ಮುಖಪ್ಪ, ಎಂ.ಆರ್.ಗಣಪತಿ, ಮಂಜಪ್ಪಗೌಡ ಹಾಗೂ ಆನಂದಪುರ ನಾಡ ಕಚೇರಿಯ ಅಧಿಕಾರಿಗಳ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಜೂನ್ 25ರಂದು ದೂರು ಸಲ್ಲಿಸಿದ್ದು, ಅದೇ ದಿನ ಎಫ್‌ಐಆರ್ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮಂಜಪ್ಪಗೌಡ ಅವರ ಮಕ್ಕಳಾದ ಷಣ್ಮುಖಪ್ಪ ಮತ್ತು ಗಣಪತಿ ಅವರು ಸಾಗರ ತಾಲೂಕಿನ ಆನಂದಪುರ ಹೋಬಳಿಯ ಮಲ್ಲಂದೂರು ಗ್ರಾಮದ ಸ.ನಂ.157ರಲ್ಲಿ 69 ಎಕರೆ ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂಬುದು ಆನಂದಪುರ ನಾಡಕಚೇರಿಯಲ್ಲಿ ಮೂಲ ಕಂದಾಯ ದಾಖಲೆಗಳನ್ನು ಪರಿಶೀಲಿಸಿದ ಸಂದರ್ಭ ಬೆಳಕಿಗೆ ಬಂದಿದೆ.

ಮಲ್ಲಂದೂರು ಗ್ರಾಮದ ಆರ್.ಆರ್. 5 ಮತ್ತು 6ರ ದಾಖಲೆ ಶಿಥಿಲಗೊಂಡಿದ್ದು, ಸ.ನಂ.157ಕ್ಕೆ ಸಂಬಂಧಿಸಿದಂತೆ ಆರ್.ಆರ್. ದಾಖಲೆ ಪುನರ್ ನಿರ್ಮಾಣ ಮಾಡಿ 1960-1970, 1972-73, 1974-75 ಹಾಗೂ 1977-78ರ ಕೈಬರಹದ ಪಹಣಿಗಳನ್ನು ತಿದ್ದಿ ಪುನರ್ ನಿರ್ಮಾಣ ಮಾಡಿ ಎಂ.ಆರ್. 5-311/66-77ನ್ನು ಹೆಚ್ಚುವರಿಯಾಗಿ ನಮೂದಿಸಲಾಗಿದೆ. ಅಲ್ಲದೆ ಅನೇಕ ಕಂದಾಯ ದಾಖಲೆಗಳನ್ನು ತಿದ್ದುಪಡಿ ಮಾಡಿ ಮೂಲ ದಾಖಲೆಗಳನ್ನು ನಕಲಿ ತಿದ್ದುಪಡಿ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಶರಾವತಿ ಮುಳುಗಡೆ ಸಂತ್ರಸ್ತರು ಎಂದು ನಮೂದಿಸಿ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿಕೊಂಡಿದ್ದಾರೆ. ಆದರೆ, ಈ ಜಮೀನಿನ ಕಂದಾಯ ದಾಖಲೆಗಳನ್ನು ಯಾವ ಅವಧಿಯಲ್ಲಿ ಮತ್ತು ಯಾವ ಅಧಿಕಾರಿ, ಸಿಬ್ಬಂದಿ ಅವಧಿಯಲ್ಲಿ ತಿದ್ದುಪಡಿ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಹೀಗಾಗಿ ಇದರ ಬಗ್ಗೆ ನಿಖರವಾದ ತನಿಖೆಯ ಅಗತ್ಯ ಇದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಅವರು ದೂರಿನಲ್ಲಿ ನಮೂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X