Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

ವಾರ್ತಾಭಾರತಿವಾರ್ತಾಭಾರತಿ24 April 2025 10:29 PM IST
share
ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಮುತ್ಸದ್ದಿ ಬೇಗಾನೆ ರಾಮಯ್ಯ(89) ಅವರು ಗುರುವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಬೇಗಾನೆ ರಾಮಯ್ಯ ಅವರು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ ಆರತಿ ಕೃಷ್ಣ ಅವರ ತಂದೆ. ಬೇಗಾನೆ ರಾಮಯ್ಯ ಅವರ ಅಂತ್ಯ ಸಂಸ್ಕಾರ ಎ.25ರಂದು ಶಿವಮೊಗ್ಗ ಜಿಲ್ಲೆಯ ಹೊಸಹಳ್ಳಿಯ ಸೀತಾಫಾರಂನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.

ವಿದ್ಯಾರ್ಥಿ ದೆಸೆಯಿಂದಲೂ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಬೇಗಾನೆ ರಾಮಯ್ಯ ಅವರು 1978ರಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ವಿಧಾನಸೌಧದ ಮೆಟ್ಟಿಲೇರಿದರು. ಪಕ್ಷ ಸಂಘಟನೆ, ಜನಪರ ಕಾಳಜಿ ಹಾಗೂ ಕ್ರಿಯಾಶೀಲ ಮನೋಭಾವದಿಂದ ರಾಜಕೀಯದಲ್ಲಿ ಬೇಗನೆ ತಮ್ಮ ಛಾಪನ್ನು ಮೂಡಿಸಿದ ರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಲೆನಾಡು ಭಾಗಕ್ಕೆ ಕುಡಿಯುವ ನೀರು ತರುವಲ್ಲಿ ಇವರ ಶ್ರಮ ಹಾಗೂ ಕಾಳಜಿ ಅವಿಸ್ಮರಣೀಯ. ಅಂದು 250 ಮನೆಗಳಿದ್ದ ಗ್ರಾಮಗಳಲ್ಲಿ ಮಾತ್ರ ಬೋರ್ವೆಲ್ ಕೊರೆಸಲು ಅನುಮತಿಯಿದ್ದ ಸರಕಾರದ ನಿಯಮಕ್ಕೆ ತಿದ್ದುಪಡಿ ತಂದು ಆ ಮೂಲಕ ಮಲೆನಾಡಿನ ಭಾಗದಲ್ಲಿ ನೀರಿನ ಅಭಾವಕ್ಕೆ ಇತಿಶ್ರೀ ಹಾಡಿದ್ದರು. ಹೀಗಾಗಿ ಅವರನ್ನು ‘ಮಲೆನಾಡಿನ ಭಗೀರಥ’, ‘ಬೋರ್ವೆಲ್ ರಾಮಯ್ಯ’ ಎಂದು ಕರೆಯಲಾಗುತ್ತಿದೆ.

ಅಧ್ಯಯನ ಶೀಲತೆ ಹಾಗೂ ವಿಚಾರ ಮಂಡನೆ ಚಾಕಚಕ್ಯತೆಯಿಂದಾಗಿಯೇ ಬೇಗಾನೆ ರಾಮಯ್ಯ ಅವರು ಅತ್ಯುತ್ತಮ ಸಂಸದೀಯ ಪಟು ಎಂದು ಗುರುತಿಸಲ್ಪಟ್ಟಿದ್ದರು. ಅಪಾರ ಭಾಷಾ ಜ್ಞಾನ ಹಾಗೂ ಇಂಗ್ಲಿಷ್ ಪ್ರಾವಿಣ್ಯತೆ ಬೇಗಾನೆ ರಾಮಯ್ಯ ಅವರಲ್ಲಿತ್ತು. ಈ ಕಾರಣಕ್ಕೆ ಅವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ವರಿಷ್ಠರ ಒಡನಾಟ ಗಳಿಸುವ ಮೂಲಕ ಅವರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಭಾಷಣಗಳನ್ನ ಸುಲಭವಾಗಿ ಕನ್ನಡಕ್ಕೆ ತರ್ಜುಮೆ ಮಾಡುವ ಮೂಲಕ ಜನರಿಗೆ ಮನಮುಟ್ಟುವಂತೆ ತಲುಪಿಸುತ್ತಿದ್ದರು.

ಸ್ವಾರ್ಥ ಹಾಗೂ ಅಧಿಕಾರ ದಾಹದ ರಾಜಕಾರಣವನ್ನು ಯಾವತ್ತೂ ಮಾಡದೆ, ಜನಪರ ಚಿಂತನೆ, ಗ್ರಾಮೀಣಾಭಿವೃದ್ಧಿ, ನಿಸ್ವಾರ್ಥ ಸೇವೆಯ ಮೂಲಕ ಮಾದರಿ ವ್ಯಕ್ತಿಯಾಗಿ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ಆದರ್ಶಗಳು ಪಕ್ಷಾತೀತವಾಗಿ ಎಲ್ಲ ರಾಜಕಾರಣಿಗಳಿಗೆ ಪ್ರೇರಣೆಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X