Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕೇವಲ ಸರಕಾರಿ ಆದೇಶಗಳಿಂದ ಕನ್ನಡ ಭಾಷೆ...

ಕೇವಲ ಸರಕಾರಿ ಆದೇಶಗಳಿಂದ ಕನ್ನಡ ಭಾಷೆ ಉಳಿಯುವುದಿಲ್ಲ: ಪುರುಷೋತ್ತಮ ಬಿಳಿಮಲೆ

ಕುವೆಂಪು ವಿವಿ : ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ17 Jan 2025 10:04 PM IST
share
Photo of Metting

ಶಂಕರಘಟ್ಟ‍ : ಭಾರತದಲ್ಲಿ ಕುಸಿಯುತ್ತಿರುವ ಭಾಷೆಗಳಲ್ಲಿ ಕನ್ನಡ ಮುಂಚೂಣಿಯಲ್ಲಿದೆ. ಕೇವಲ ಸರಕಾರಿ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ. ಕನ್ನಡ ಭಾಷೆ ಉಳಿಸಲು ಕಾರ್ಯಸೂಚಿಯನ್ನು ರೂಪಿಸಿ ಅನುಷ್ಠಾನಗೊಳಿಸುವ ನೈತಿಕ ಹೊಣೆಗಾರಿಕೆ ಎಲ್ಲಾ ಕನ್ನಡಿಗರದ್ದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಗುರುವಾರ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಡೆಸಿದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ದಿನೇ ದಿನೇ ಕರ್ನಾಟಕದಲ್ಲಿ ಭಾಷಾಭಿಮಾನ ಕಡಿಮೆ ಆಗುತ್ತಿದೆ. ಈವರೆಗೆ ಸರಕಾರ ಮೂರು ಸಾವಿರಕ್ಕಿಂತ ಹೆಚ್ಚಿನ ಕನ್ನಡಪರ ಆದೇಶಗಳನ್ನು ಹೊರಡಿಸಿದೆ. ಆದರೆ ಅನುಷ್ಠಾನದ ಸಂದರ್ಭದಲ್ಲಿ ತೊಡಕುಗಳು ಕಂಡುಬರುತ್ತವೆ. ಕನ್ನಡ ಭಾಷೆಯಲ್ಲಿ ಕ್ರಿಯಾಶೀಲತೆ ಇಲ್ಲದಿದ್ದರೆ ಅದನ್ನು ಉಳಿಸುವುದು ಕಷ್ಟಸಾಧ್ಯವಾಗುತ್ತದೆ. ಎಲ್ಲಾ ಭಾಷೆಗಳು ಆಯಾ ಪ್ರದೇಶಗಳಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದು ಮುಖ್ಯ ಎಂದರು.

ಸರ್ಕಾರಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಇರಲೇಬೇಕು ಎಂದು ಆದೇಶ ಹೊರಡಿಸಿದೆ. ಅದರ ಜೊತೆಗೆ ಊರಿನ ಹೆಸರು ಸೇರಿಸುವುದರಿಂದ ಕನ್ನಡ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು.

ಕನ್ನಡ ಪ್ರಾಧಿಕಾರದ ಸದಸ್ಯ ರಾಮಚಂದ್ರ ಮಾತನಾಡಿ, ಕನ್ನಡವನ್ನು ಆಡಳಿತ ಭಾಷೆ, ಅನ್ನದ ಭಾಷೆಯನ್ನಾಗಿ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದವರೇ ಕನ್ನಡವನ್ನು ಸರಿಯಾಗಿ ಬಳಸುತ್ತಿಲ್ಲ. ಮೊದಲು ಕನ್ನಡತನವನ್ನು ಮೈಗೂಡಿಸಿಕೊಳ್ಳಬೇಕು ಬಳಿಕ ತನ್ನಿಂತಾನೆ ಕನ್ನಡ ಆಡಳಿತ ಭಾಷೆಯಾಗುತ್ತದೆ ಎಂದರು.

ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್, ಫಣಿರಾಜ್, ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಶಿವಮೊಗ್ಗ ಕನ್ನಡದ ಕೇಂದ್ರ ಸ್ಥಾನ. ಇಲ್ಲಿ ಪ್ರಮಾಣೀಕೃತ ಕನ್ನಡ ಭಾಷೆ ರೂಢಿಯಲ್ಲಿದೆ. ಅವಿಭಜಿತ ಶಿವಮೊಗ್ಗ ಇತರ ಜಿಲ್ಲೆಗಳಂತೆ ಗಡಿ ಸಮಸ್ಯೆ, ಬಹುಭಾಷೆಗಳ ಸಮಸ್ಯೆಗಳನ್ನು ಎದುರಿಸುತ್ತಿಲ್ಲ. ಕನ್ನಡದ ಬಹುದೊಡ್ಡ ಪರಂಪರೆಯನ್ನು ಹೊಂದಿರುವ ಜಿಲ್ಲೆ ಶಿವಮೊಗ್ಗ. ಕನ್ನಡದ ಮೊದಲ ಶಾಸನ ಬೆಳಕಿಗೆ ಬಂದಿದ್ದೂ ಇಲ್ಲಿಯೇ. ಇಲ್ಲಿನ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಹಾಗೂ ಮಹಾಪ್ರಬಂಧಗಳ ಕನ್ನಡ ಉತ್ಕೃಷ್ಟ ಮಟ್ಟದಲ್ಲಿ ಇರುತ್ತವೆ ಎಂದು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X