ಭಾರೀ ಮಳೆ : ಆ.3ರಂದು ಸಾಗರ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಸಾಂದರ್ಭಿಕ ಚಿತ್ರ
ಸಾಗರ : ಸಾಗರ ತಾಲೂಕಿನಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಆಗಸ್ಟ್ 3 (ಸೋಮವಾರ) ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜು, ಡಿಪ್ಲೋಮಾ ಕಾಲೇಜು, ಐಟಿಐ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಪೋಷಕರು ಮಕ್ಕಳನ್ನು ಅನಗತ್ಯವಾಗಿ ಹೊರಗೆ ಕಳುಹಿಸದೇ ಸುರಕ್ಷಿತವಾಗಿ ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರು ಕೂಡ ಮಳೆಯ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ, ತುರ್ತು ಅಗತ್ಯವಿದ್ದರೆ ಮಾತ್ರ ಸಂಚರಿಸುವಂತೆ ಸೂಚಿಸಲಾಗಿದೆ.
Next Story




