Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ದಿಲ್ಲಿಗೆ ತೆರಳಿ ಕೇಂದ್ರ ಗೃಹಸಚಿವ ಅಮಿತ್...

ದಿಲ್ಲಿಗೆ ತೆರಳಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುತ್ತೇನೆ :‌ ಕೆ.ಎಸ್ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ3 April 2024 11:40 AM IST
share
ದಿಲ್ಲಿಗೆ ತೆರಳಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುತ್ತೇನೆ :‌ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಇಂದು ಮಧ್ಯಾಹ್ನ ದಿಲ್ಲಿಗೆ ತೆರಳಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಬಿಜೆಪಿ ಬಂಡಾಯ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾತ್ರಿಯೇ ಗೃಹ ಸಚಿವರ ನಿವಾಸದಲ್ಲಿ ಅವರನ್ನು ಭೇಟಿಯಾಗುತ್ತೇನೆ. ಅಪ್ಪ‌ ಮಕ್ಕಳಿಂದ ಈ ಪಕ್ಷ ಮುಕ್ತವಾಗಬೇಕು. ಹಿಂದುತ್ವವಾದಿಗಳನ್ನು ಪಕ್ಕಕ್ಕೆ ಸರಿಸಿದ್ದಾರೆ. ಅವರನ್ನೆಲ್ಲಾ ಏಕೆ ಪಕ್ಕಕ್ಕೆ ಸರಿಸಿದ್ದಾರೆ ಎನ್ನುವುದನ್ನ ಅಮಿತ್ ಶಾ ಬಳಿ ‌ಕೇಳುತ್ತೇನೆ. ಅಮಿತ್ ಶಾ ಬೇರೆ ಕಡೆ ಮನವೊಲಿಸುದಕ್ಕೂ, ನನ್ನನ್ನು ಮನವೊಲಿಸುವುದಕ್ಕೂ ವ್ಯತ್ಯಾಸ ಇದೆ. ರಾಘವೇಂದ್ರ ಸೋಲಬಹುದು ಎಂಬ ಕಾರಣದಿಂದ ಅಮಿತ್ ಶಾ ಅವರಿಗೆ ಒತ್ತಡ ಹಾಕಿಸಿ ನನಗೆ ಕರೆ ಮಾಡಿರಬಹುದು ಎಂದರು.

ಅಮಿತ್ ಶಾ ಅವರು ದೊಡ್ಡವರು ಇದ್ದಾರೆ ಅವರಿಗೆ ಗೌರವ ಕೊಟ್ಟು ಹೋಗುತ್ತಿದ್ದೇನೆ. ನೂರಕ್ಕೆ ನೂರು ನಾನು ಗೆಲ್ಲುವ ವಿಶ್ವಾಸ ಇದೆ. ನಾನು ಕೇವಲ ಸಂಸದ ಆಗಬೇಕು ಎಂದು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಪಕ್ಷ ಶುದ್ದೀಕರಣ ಆಗಬೇಕು ಅದಕ್ಕಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದರು

ನಾನು ಸ್ಪರ್ಧೆ ನಿರ್ಧಾರ ಮಾಡಿದ ಮೇಲೆ ಅನೇಕರು ನನಗೆ ಪೋನ್ ಮಾಡಿದ್ದಾರೆ.ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಬೇಡಿ ಅಂತಿದ್ದಾರೆ. ಪಕ್ಷದ ಉಳಿವಿಗಾಗಿ ನನ್ನ ಸ್ಪರ್ಧೆ. ಅಮಿತ್ ಶಾ ಅವರನ್ನು ನಾನೇ ಮನವೊಲಿಸಿ ಬರುತ್ತೇನೆ.ನನ್ನ ಸ್ಪರ್ಧೆ ಯಾವ ಕಾರಣಕ್ಕಾಗಿ ಎಂದು ತಿಳಿಸಿ ಬರುತ್ತೇನೆ ಎಂದು ಹೇಳಿದರು.

Tags

KS EshwarappaAmit ShahDelhi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X