ಅಕ್ರಮ ಆಸ್ತಿಗಳಿಕೆ ಆರೋಪ | ಕೆ.ಎಸ್.ಈಶ್ವರಪ್ಪ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನಲೆ ಮಾಜಿ ಡಿಸಿಎಂ, ಪ್ರಸ್ತುತ ರಾಷ್ಟ್ರಭಕ್ತ ಬಳಗದ ಮುಖಂಡರಾದ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಪುತ್ರ ಕೆ.ಇ ಕಾಂತೇಶ್ ಮತ್ತು ಕೆ.ಇ.ಕಾಂತೇಶ್ ಅವರ ಪತ್ನಿ ಶಾಲಿನಿ ಅವರ ಮೇಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಕೆ.ಎಸ್ ಈಶ್ವರಪ್ಪ ಹಾಗೂ ಪುತ್ರ ಕೆ.ಈ ಕಾಂತೇಶ್ ಮತ್ತು ಕೆ.ಈ ಕಾಂತೇಶ್ ಪತ್ನಿ ಶಾಲಿನಿ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ.
ವಕೀಲ ವಿನೋದ್ ಅವರು ಮಾಜಿ ಡಿಸಿಎಂ ಈಶ್ವರಪ್ಪ ಹಾಗೂ ಅವರ ಕುಟುಂಬದ ವಿರುದ್ದ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಸೂಚನೆ ಬಳಿಕ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು, ವಕೀಲ-ದೂರುದಾರ ವಿನೋದ್ ಅವರಿಗೆ ಜು.04 ರಂದು ಬೆಳಿಗ್ಗೆ 11 ಗಂಟೆಗೆ ಸೂಕ್ತ ದಾಖಲಾತಿಗಳು ಹಾಗೂ ಸಾಕ್ಷಾಧಾರಗಳೊಂದಿಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟೀಸ್ ಜಾರಿ ಮಾಡಿದೆ.