Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶರಾವತಿ ಮುಳುಗಡೆ ಸಂತ್ರಸ್ತರು, ಭೂ ಹಕ್ಕು...

ಶರಾವತಿ ಮುಳುಗಡೆ ಸಂತ್ರಸ್ತರು, ಭೂ ಹಕ್ಕು ಸಮಸ್ಯೆ | ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ವಾರ್ತಾಭಾರತಿವಾರ್ತಾಭಾರತಿ10 May 2025 12:38 AM IST
share
ಶರಾವತಿ ಮುಳುಗಡೆ ಸಂತ್ರಸ್ತರು, ಭೂ ಹಕ್ಕು ಸಮಸ್ಯೆ | ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಇನ್ನಿತರ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸೊಪ್ಪಿನ ಬೆಟ್ಟ ಹಾಗೂ ಕಾನು ಭೂಮಿಗಳ ಅನಧಿಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಖಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ (ಪಿಎಫ್) ಎಂಬ ಉಲ್ಲೇಖವನ್ನು ಕೈಬಿಡುವುದು, ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 4ರ ಅಡಿಯಲ್ಲಿ ಮೀಸಲು ಅರಣ್ಯದ ಅಂತಿಮ ಅಧಿಸೂಚನೆಗೆ ಕಾಲಮಿತಿ ನಿಗದಿಪಡಿಸುವುದು ಮತ್ತು ಅನುಮೋದನೆ ನೀಡುವುದು, ಮೈಸೂರು ಸರಕಾರದಿಂದ ನೀಡಲಾದ ಹಕ್ಕುಪತ್ರಗಳಿಗೆ ಇ-ಸೊತ್ತು ದಾಖಲೆ ಸೃಜಿಸುವುದು, ಸರಕಾರದ ವಿವಿಧ ನೀರಾವರಿ ಹಾಗೂ ವಿದ್ಯುತ್ ಯೋಜನೆಗಳ ಮುಳುಗಡೆ ಸಂತ್ರಸ್ತರ ಪುನರ್ವಸತಿ ಜಮೀನುಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವದಿಂದ ಕೈಬಿಡುವುದು, 27.04.1978ರ ಪೂರ್ವದ ಮೂರು ಎಕರೆ ಅರಣ್ಯ ಭೂಮಿಯನ್ನು ಸಕ್ರಮಗೊಳಿಸುವುದು ಮತ್ತು ಅರಣ್ಯ ಹಕ್ಕು ಮಾನ್ಯತಾ ಕಾಯ್ದೆ 2006 ರ ಅಡಿಯಲ್ಲಿ ಅರಣ್ಯ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

ಜೊತೆಗೆ, ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಚಕ್ರ, ಸಾವೆಹಕ್ಲು, ಭದ್ರಾ, ತುಂಗಾ ಹಾಗೂ ಇನ್ನಿತರ ವಿದ್ಯುತ್ ಮತ್ತು ನೀರಾವರಿ ಯೋಜನೆಗಳ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 0.05 ಗುಂಟೆ ಒಳಗಿನ ವಿಸ್ತೀರ್ಣದ ರೆವಿನ್ಯೂ ನಿವೇಶನವನ್ನು ಭೂ ಪರಿವರ್ತನೆ ಮಾಡುವ ಕುರಿತು ಸಭೆಯಲ್ಲಿ ಗಮನ ಸೆಳೆಯಲಾಯಿತು.

ಈ ಎಲ್ಲ ವಿಚಾರಗಳ ಬಗ್ಗೆ ಸರಕಾರವು ಅಗತ್ಯ ಕ್ರಮ ಕೈಗೊಂಡು, ಅರಣ್ಯ ಮತ್ತು ಕಂದಾಯ ಭೂ ಹಕ್ಕಿನ ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಸಚಿವರು ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತಂದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ.

ಸಭೆಯಲ್ಲಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಶಾರದಾ ಪೂರ್ಯಾ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಕಾಂಗ್ರೆಸ್ ಮುಖಂಡರಾದ ರಮೇಶ್ ಹೆಗ್ಡೆ, ಜಯಂತ್, ಶೇಖರ್ ಸೇರಿದಂತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.

Tags

Madhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X